ಆಸ್ಪತ್ರೆಯಲ್ಲಿ ಡಿ.ಕೆ. ಶಿವಕುಮಾರ್; ವೈದ್ಯರ ವರದಿಗಾಗಿ ಕಾದು ಕುಳಿತ ಇಡಿ

Recommended Video

      DK Shivakumar : ಡಿ ಕೆ ಶಿವಕುಮಾರ್ ಗೆ ಹೈ ಬಿ ಪಿ, ಹೈ ಶುಗರ್..? | Oneindia Kannada

      ಬೆಂಗಳೂರು, ಸೆಪ್ಟೆಂಬರ್ 04 : ಜಾರಿ ನಿರ್ದೇಶನಾಲಯ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಾಜಿ ಸಚಿವ ಡಿ. ಕೆ. ಶಿವಕುಮಾರ್ ಬಂಧಿಸಿದೆ. ವೈದ್ಯಕೀಯ ಪರೀಕ್ಷೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ವೈದ್ಯರ ವರದಿಗಾಗಿ ಇಡಿ ಅಧಿಕಾರಿಗಳು ಕಾದು ಕುಳಿತಿದ್ದಾರೆ.

      ಮಂಗಳವಾರ ರಾತ್ರಿ 9.45ರ ಸುಮಾರಿಗೆ ಡಿ. ಕೆ. ಶಿವಕುಮಾರ್‌ರನ್ನು ದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರಗೆ ಕರೆದುಕೊಂಡು ಹೋಗಲಾಗಿತ್ತು. ಅಧಿಕ ರಕ್ತದೊತ್ತಡ, ಹೈ ಶುಗರ್ ಹಿನ್ನಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

      ED Waiting For Doctor Report On DK Shivakumar Health

      ತುರ್ತು ಚಿಕಿತ್ಸಾ ಘಟಕದಲ್ಲಿ ಡಿ. ಕೆ. ಶಿವಕುಮಾರ್‌ಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಅವರನ್ನು ವಿಐಪಿ ವಾರ್ಡ್‌ಗೆ ಶಿಫ್ಟ್‌ ಮಾಡಲಾಗಿದೆ. ಡಿ. ಕೆ. ಶಿವಕುಮಾರ್ ಆರೋಗ್ಯವಾಗಿದ್ದಾರೆ ಎಂದು ವೈದ್ಯರು ವರದಿ ನೀಡಿದ ಬಳಿಕ ಇಡಿ ಅಧಿಕಾರಿಗಳನ್ನು ಅವರನ್ನು ನ್ಯಾಯಾಲಯಕ್ಕೆ ಕರೆದುಕೊಂಡು ಹೋಗಲಿದ್ದಾರೆ.

      ಬೆಳಗ್ಗೆ 10 ಗಂಟೆಯ ಬಳಿಕ ಮತ್ತೊಮ್ಮೆ ಡಿ. ಕೆ. ಶಿವಕುಮಾರ್ ಆರೋಗ್ಯ ತಪಾಸಣೆಯನ್ನು ವೈದ್ಯರು ನಡೆಸಲಿದ್ದಾರೆ. ಬಳಿಕ ಇಡಿ ಅಧಿಕಾರಿಗಳಿಗೆ ಆರೋಗ್ಯದ ಬಗ್ಗೆ ವರದಿ ನೀಡಲಿದ್ದಾರೆ. ಡಿ. ಕೆ. ಶಿವಕುಮಾರ್‌ರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲು ಇಡಿ ಅಧಿಕಾರಿಗಳು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

      ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ, ಡಿಕೆಶಿ ಸಹೋದರ ಡಿ. ಕೆ. ಸುರೇಶ್ ಆಸ್ಪತ್ರೆಯಲ್ಲಿ ಇದ್ದಾರೆ. ಆಸ್ಪತ್ರೆಯ ಹೊರಗೆ ಇಡಿಗೆ ಸೇರಿದ ಕಾರು ಸಿದ್ಧವಾಗಿ ನಿಂತಿದ್ದು, ವೈದ್ಯರು ಒಪ್ಪಿಗೆ ನೀಡಿದ ಬಳಿಕ ಅವರನ್ನು ಅಧಿಕಾರಿಗಳು ಕರೆದುಕೊಂಡು ಹೋಗಲಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+