ಸಂಪಾದಕರು ಆಸ್ತಿ ಘೋಷಿಸಲಿ: ರೋಷನ್ ಬೇಗ್
ಬೆಂಗಳೂರು,ಜೂ.7: ಮುಕ್ತ ಹಾಗೂ ಪಾರದರ್ಶಕ ಪತ್ರಿಕೋದ್ಯಮದ ದೃಷ್ಟಿಯಿಂದ ಪತ್ರಿಕೆ ಮತ್ತು ದೃಶ್ಯ ಮಾಧ್ಯಮಗಳ ಸಂಪಾದಕರೂ ಮುಂದಿನ ದಿನಗಳಲ್ಲಿ ತಮ್ಮ ಆಸ್ತಿ ವಿವರ ಸಲ್ಲಿಸಬೇಕಾಗಬಹುದು ಎಂದು ವಾರ್ತಾ ಸಚಿವ ಆರ್. ರೋಷನ್ ಬೇಗ್ ಹೇಳಿದ್ದಾರೆ.
ವಿಕಾಸಸೌಧದಲ್ಲಿ ಜೂ.6 ಶುಕ್ರವಾರದಂದು ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಇಲಾಖೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸೇರಿದಂತೆ ವಿವಿಧ ಸಂಘಟನೆಗಳ ಆಶ್ರಯದಲ್ಲಿ ಹಮ್ಮಿಕೊಂಡಿದ್ದ 'ಭಾಷಾ ಪತ್ರಿಕೋದ್ಯಮ ಕಾರ್ಯಾಗಾರ'ದಲ್ಲಿ ಅವರು ಮಾತನಾಡಿದರು.

ಮುಕ್ತ ಮತ್ತು ನ್ಯಾಯಸಮ್ಮತ ಪತ್ರಿಕೋದ್ಯಮದ ದೃಷ್ಟಿಯಿಂದ ಹಿರಿಯ ಪತ್ರಕರ್ತ ಕುಲದೀಪ್ ನಯ್ಯರ್ ಅವರ ಅಭಿಪ್ರಾಯವನ್ನು ನಾನು ಸ್ವಾಗತಿಸುತ್ತೇನೆ. ಸಂಪಾದಕರುಗಳು ತಮ್ಮ ಆಸ್ತಿ ವಿವರ ಸಲ್ಲಿಸುವಂತಾದರೆ ಉತ್ತಮ ಬೆಳವಣಿಗೆಯಾಗಲಿದೆ ಎಂದು ಸಚಿವ ಆರ್. ರೋಷನ್ ಬೇಗ್ ಅಭಿಪ್ರಾಯ ಪಟ್ಟಿದ್ದಾರೆ.











Click it and Unblock the Notifications