ಕರ್ನಾಟಕದ ಲೋಕಾಯುಕ್ತದ ಮೇಲೆ ಇ.ಡಿ ಪ್ರಭಾವ: ಸ್ಫೋಟಕ ಮಾಹಿತಿ ನೀಡಿದ ಜಿ. ಪರಮೇಶ್ವರ್!

Karnataka Muda controversy: ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ತಣ್ಣಗಾಗಿದ್ದ ಮುಡಾ ಹಗರಣ ವಿಚಾರವು ಇದೀಗ ರಾಜ್ಯದಲ್ಲಿ ಮುಖ್ಯವಾಗಿ ಚರ್ಚೆಯಾಗುತ್ತಿದೆ. ಈಗ ಈ ವಿಚಾರವು ಮತ್ತೊಂದು ಹಂತವನ್ನು ತಲುಪಿದ್ದು, ಇ.ಡಿ ಉದ್ದೇಶಪೂರ್ವಕವಾಗಿ ಮಾಹಿತಿ ಸೋರಿಕೆ ಮಾಡಿದೆ ಎಂದು ರಾಜ್ಯ ಕಾಂಗ್ರೆಸ್‌ನ ಪ್ರಭಾವಿ ನಾಯಕರು ದೂರಿದ್ದಾರೆ. ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಕೈಗೊಂಡಿರುವ ತನಿಖೆ ಮೇಲೆ ಜಾರಿ ನಿರ್ದೇಶನಾಲಯವು (E.D) ಪ್ರಭಾವ ಬೀರುತ್ತಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಆರೋಪಿಸಿದ್ದಾರೆ.

ಲೋಕಾಯುಕ್ತವು ಮುಡಾ ಕೇಸ್‌ನ ತನಿಖೆಯನ್ನು ಮುಂದುವರಿಸಿದೆ. ಈವರೆಗೆ ಪ್ರಾಥಮಿಕ ಅಥವಾ ಪೂರ್ಣ ವರದಿಯನ್ನು ಕೋರ್ಟ್‌ಗೆ ಸಲ್ಲಿಸಿಲ್ಲ. ಇ.ಡಿ.ಯವರು ಲೋಕಾಯುಕ್ತಕ್ಕೆ ಬರೆದಿರುವ ಪತ್ರದಲ್ಲಿ ಅನೇಕ ವಿಷಯಗಳನ್ನು ಪ್ರಸ್ತಾಪಿಸಿದ್ದಾರೆ. ಲೋಕಾಯುಕ್ತದ ಮೇಲೆ ಪ್ರಭಾವ ಬೀರಿ ಕಾನೂನಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ ಇ.ಡಿ. ಆಕ್ರೋಶ ಹೊರಹಾಕಿದ್ದಾರೆ.

ED s influence on Karnataka s Lokayukta G Parameshwara gives explosive information

ಯಾವುದೇ ಪ್ರಕರಣದಲ್ಲಿ ಎರಡು ತನಿಖಾ ಸಂಸ್ಥೆಗಳು ಕಾನೂನಾತ್ಮಕವಾಗಿ ತನಿಖೆ ಮಾಡಲು ಸಾಧ್ಯವಿಲ್ಲ. ಆದರೆ, ಇ.ಡಿ.ಯವರು ಮುಡಾ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಅಭಿಪ್ರಾಯಕ್ಕೆ ಬಂದಿದ್ದೇವೆ ಎಂಬುದನ್ನು ಪತ್ರದ ಮೂಲಕ ಲೋಕಾಯುಕ್ತದ ಮೇಲೆ‌ ಪ್ರಭಾವ ಬೀರುತ್ತಿದೆ.

ನಮ್ಮ ಸರ್ಕಾರವು ಜನಪರ ಆಡಳಿತ ನೀಡುತ್ತಿದೆ. ಮೂರು ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದೆ ಎಂದು ಹೇಳಿರುವ ಅವರು.

ರಾಜ್ಯದಲ್ಲಿ ಈಚೆಗೆ ನಡೆದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳಿಗೆ ರಾಜಕೀಯವಾಗಿ ಹಿನ್ನಡೆಯಾಗಿದೆ. ಸರ್ಕಾರದ ಮೇಲೆ ಆರೋಪ ಮಾಡುವ ಉದ್ದೇಶದಿಂದ ಈ ರೀತಿ ಮಾಡುತ್ತಿದ್ದಾರೆ. ವಿರೋಧಪಕ್ಷದ ನಾಯಕರಿಗೆ ಯಾವುದೇ ವಿಷಯಗಳಿಲ್ಲ. ಚಳಿಗಾಲದ ಅಧಿವೇಶನ ನಡೆಯಲು ಕೆಲವೇ ದಿನಗಳು ಇರುವ ಹಿನ್ನೆಲೆಯಲ್ಲಿ ಈ ರೀತಿಯಾಗಿ ನಡೆದುಕೊಳ್ಳುತ್ತಿದೆ. ಇ.ಡಿ.ಯವರು ಲೋಕಾಯುಕ್ತದೊಂದಿಗೆ ಮಾಹಿತಿ ಹಂಚಿಕೊಂಡು, ಆ ಮಾಹಿತಿಯನ್ನು ಸೋರಿಕೆ ಮಾಡಿರುವ ಹಿಂದಿನ ಉದ್ದೇಶವೇನು ಎಂದು ಅವರು ಪ್ರಶ್ನಿಸಿದ್ದಾರೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಮಾತನಾಡಿ, ಸಿಬಿಐ ಹಾಗೂ ಇಡಿ ತನಿಖಾ ಸಂಸ್ಥೆಗಳು ಕೇಂದ್ರ ಸರ್ಕಾರದ ಕೈಗೊಂಬೆಯಾಗಿವೆ. ರಾಜ್ಯ ಬಿಜೆಪಿ ಸಂಕಷ್ಟದಲ್ಲಿ ಇದೆ. ಯಾವ ರಾಜ್ಯದಲ್ಲಿ ಬಿಜೆಪಿ ದುರ್ಬಲವಾಗಿದೆಯೋ ಅಲ್ಲಿ ಸಿಬಿಐ ಹಾಗೂ ಇಡಿಯನ್ನು ಛೂ ಬಿಡುತ್ತಿದ್ದಾರೆ ಎಂದು ದೂರಿದರು.

ಇಲ್ಲಿಯವರೆಗೆ ಇಡಿ ಏಕೆ ಮಧ್ಯಪ್ರವೇಶಿಸಿಲ್ಲ ಎನ್ನುವುದು ಆಶ್ಚರ್ಯವಾಗಿದೆ. ಲೋಕಾಯುಕ್ತ ಎಫ್‌ಐಆರ್‌ ದಾಖಲಿಸಿದ 24 ಗಂಟೆಯ ಒಳಗಾಗಿ ಇಡಿ ಪ್ರಕರಣ ದಾಖಲಿಸಿಕೊಂಡಿದೆ. ಇಡಿಯವರಿಗೆ ಇಲ್ಲಿಯ ವರೆಗೆ ದಾಖಲೆಗಳು ಸಿಕ್ಕಿಲ್ಲ. ಸೈಟ್‌ಗಳನ್ನು ವಾಪಸ್‌ ಕೊಟ್ಟಿರುವ ಕಾರಣಕ್ಕಾಗಿ ಉದ್ದೇಶಪೂರ್ವಕವಾಗಿ ಪತ್ರಗಳನ್ನು ಸೋರಿಕೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಅಧಿವೇಶನದ ಸಂದರ್ಭದಲ್ಲಿ ಉದ್ದೇಶಪೂರ್ಕವಾಗಿಯೇ ಈ ರೀತಿ ಮಾಡಲಾಗಿದೆ. ಅಧಿವೇಶನ ಇರುವುದಕ್ಕೆ ಈ ರೀತಿ ಮಾಡಲಾಗಿದೆ ಎಂದು ಅವರು ಆರೋಪ ಮಾಡಿದ್ದಾರೆ.

ಕಳೆದ ಕೆಲವು ದಿನಗಳಿಂದ ಮುಡಾ ಹಗರಣ ವಿಚಾರವು ತಣ್ಣಗಾಗಿತ್ತು. ಅಲ್ಲದೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಮೈಸೂರು ಅಭಿವೃದ್ಧಿ ಪ್ರಾಧಿಕಾರದಿಂದ ನೀಡಲಾಗಿದ್ದ 14 ಸೈಟುಗಳನ್ನು ಹಿಂದಿರುಗಿಸಿದ ಮೇಲೆ ಈ ಪ್ರಕರಣ ಅರ್ಧ ತಣ್ಣಗಾಗಿತ್ತು. 3 ವಿಧಾನಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆದ್ದ ಮೇಲೆ ಈ ವಿಷಯ ಮುಂದೆ ಅಷ್ಟಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಇಲ್ಲ ರಾಜ್ಯ ಸರ್ಕಾರದ ಮೇಲೆ ಪ್ರಭಾವ ಬೀರಲ್ಲ ಎಂದೇ ಹೇಳಲಾಗಿತ್ತು. ಆದರೆ, ಆ ಲೆಕ್ಕಾಚಾರಗಳು ತಲೆಕೆಳಗಾಗಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+