ರಾಜ್ಯದ ಎಲ್ಲಾ ಶಾಲೆಗಳಿಗೆ ಶಿಕ್ಷಣ ಇಲಾಖೆಯಿಂದ ಮಹತ್ವದ ಸೂಚನೆ
Karnataka Schools: ರಾಜ್ಯದಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕೆ ತಕ್ಕಂತೆ ಶಿಕ್ಷಣ ಇಲಾಖೆ ಆಗಾಗ ಹೊಸ ಹೊಸ ಯೋಜನೆಗಳನ್ನು ಜಾರಿಗೆ ತುರುತ್ತಲೇ ಇದೆ. ಹಾಗೆಯೇ ಇದೀಗ ಮತ್ತೊಂದು ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಹಾಗಾದ್ರೆ ಅದೇನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಪ್ರತಿ ತಿಂಗಳಲ್ಲಿ ಒಂದು ಶನಿವಾರ ಸಂಭ್ರಮ ದಿನವನ್ನು ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಆಚರಣೆ ಮಾಡಲು ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಇದರ ಉದ್ದೇಶ ಏನು ಎನ್ನುವ ಮಾಹಿತಿಯನ್ನು ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ.

ಮಕ್ಕಳನ್ನು ಚಟುವಟಿಕೆಗಳಲ್ಲಿ ಬಹುಮುಖ ತೊಡಗಿಸುವುದರ ಮೂಲಕ ನಾಗರಿಕ ಪ್ರಜ್ಞೆ ಬೆಳೆಸಲು, ವಿವಿಧ ಥೀಮ್‌ಳನ್ನು ಆಧರಿಸಿ ವಿದ್ಯಾರ್ಥಿಗಳಿಗೆ 10 ಸ್ವಯಂವಿವರಣಾತ್ಮಕ ಮಾದರಿ ಹಾಗೂ ಶಿಕ್ಷಕರಿಗೆ ಮಾರ್ಗದರ್ಶಿ ಕೈಪಿಡಿಯನ್ನು ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಈಗಾಗಲೇ ನೀಡಿದೆ.
2025-26ನೇ ಸಾಲಿನಲ್ಲಿ ಪ್ರತಿ ತಿಂಗಳು 3ನೇ ಶನಿವಾರ ಶಾಲಾ ಹಂತದಲ್ಲಿ ಸದರಿ ಚಟುವಟಿಕೆಗಳನ್ನು ಆಯೋಜನೆ ಮಾಡಲು ತಿಳಿಸಿದೆ. ಮಕ್ಕಳನ್ನು ಬಹುಮುಖ ಚಟುವಟಿಕೆಗಳಲ್ಲಿ ತೊಡಗಿಸುವುದರ ಮೂಲಕ ನಾಗರಿಕ ಪ್ರಜ್ಞೆಯನ್ನು ಬೆಳೆಸಲು ವಿವಿಧ ವಿಷಯಗಳಲ್ಲಿ ವಿದ್ಯಾರ್ಥಿಗಳಿಗಾಗಿ 10 ಸ್ವಯಂ ವಿವರಣಾತ್ಮಕ ಮಾಡ್ಯೂಲ್‌ಗಳನ್ನು ಹಾಗೂ ಶಿಕ್ಷಕರಿಗೆ ಮಾರ್ಗದರ್ಶಿ ಕೈಪಿಡಿಗಳನ್ನು ಸಿದ್ದಪಡಿಸಲಾಗಿದೆ.
ಸಂಭ್ರಮ ಶನಿವಾರ ದಿನದಂದು ಜಿಲ್ಲಾ ಹಂತ ಮತ್ತು ಬ್ಲಾಕ್ ಹಂತದ ಎಲ್ಲಾ ಅಧಿಕಾರಿಗಳು ಹಾಗೂ ಸಿಆರ್‌ಪಿಗಳು ಕಡ್ಡಾಯವಾಗಿ ಶಾಲೆಗಳಿಗೆ ಭೇಟಿ ನೀಡಿ ಅನುಪಾಲಿಸುವುದು ಹಾಗೂ ಅಗತ್ಯ ಮಾರ್ಗದರ್ಶನ ನೀಡುವುದು ಕಾರ್ಯಕ್ರಮದ ಯಶಸ್ಸಿಗೆ ಪಾಲ್ಗೊಳ್ಳಬೇಕೆಂದು ಸೂಚನೆ ನೀಡಿದೆ.
ರಾಜ್ಯದ ಉರ್ದು ಶಾಲೆಗಳಲ್ಲಿ ಶನಿವಾರ ಪೂರ್ಣ ದಿನ ಆಗಿದ್ದು, ಶುಕ್ರವಾರ ಅರ್ಧ ದಿನ ಶಾಲೆ ನಡೆಯುವುದರಿಂದ ಪ್ರತಿ ತಿಂಗಳ 3ನೇ ಶುಕ್ರವಾರ 'ಬ್ಯಾಗ್ ರಹಿತ' ದಿನವನ್ನಾಗಿ ಆಚರಣೆ ಮಡಲು ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಹೀಗೆ ಆಗಾಗ ಮಕ್ಕಳ ಅನುಕೂಲಕ್ಕೆ ತಕ್ಕಂತೆ ಹೊಸ ಹೊಸ ಯೋಜನೆಗಳನ್ನಯ ಜಾರಿಗೊಳಿಸುತ್ತಲಿರುತ್ತದೆ.
ಎಲ್ಲೆಲ್ಲಿ ರಜೆ: ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಭಾರೀ ಮಳೆ ಮುಂದುವರೆಯುವ ಎಚ್ಚರಿಕೆ ಹಿನ್ನೆಲೆ ಮಕ್ಕಳ ಹಿತದೃಷ್ಟಿಯಿಂದ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ ಮತ್ತು ಯಲ್ಲಾಪುರ ತಾಲ್ಲೂಕುಗಳಲ್ಲಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಮಂಗಳವಾರ (ಜೂ 17) ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದರು.
ಹಾಗೆಯೇ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ ಜೂನ್ 17ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ, ಪದವಿ ಪೂರ್ವ ಕಾಲೇಜು, ಐಟಿಐ ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದರು. ಇನ್ನು ದ್ವಿತೀಯ ಪಿ.ಯು.ಸಿ ಪರೀಕ್ಷೆ-3 ಎಂದಿನಂತೆ ನಡೆಯುತ್ತವೆ ಎಂದು ತಿಳಿಸಲಾಗಿತ್ತು.












Click it and Unblock the Notifications