ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೋದಿ ಕಾರ್ಯಕ್ರಮಕ್ಕೆ ಪಿಯು ವಿದ್ಯಾರ್ಥಿಗಳನ್ನು ಕರೆತರಲು ಸುತ್ತೋಲೆ

|
Google Oneindia Kannada News

ಬೆಂಗಳೂರು, ನವೆಂಬರ್ 8: ಪ್ರಧಾನ ಮಂತ್ರಿ ಮೋದಿ ನವೆಂಬರ್‌ 11ಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನಲೆ ಜಿಲ್ಲೆಯ ಎಲ್ಲಾ ಪದವಿವೀಪೂರ್ವ ಕಾಲೇಜು ವಿದ್ಯಾರ್ಥಿಗಳನ್ನು ಕರೆತರಲು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.

ಮಂಗಳವಾರ ಈ ಕುರಿತು ಸುತ್ತೋಲೆ ಹೊರಡಿಸಲಿದ್ದು, ಅದರಲ್ಲಿ ಸರಕಾರಿ, ಅನುದಾನಿತ, ಅನುದಾನ ರಹಿತ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರು ತಮ್ಮ ಕಾಲೇಜು ವಿದ್ಯಾರ್ಥಿಗಳನ್ನು ಕಾರ್ಯಕ್ರಮಕ್ಕೆ ಕರೆತರಬೇಕು ಎಂದು ಸೂಚಿಸಲಾಗಿದೆ.

ನವೆಂಬರ್ 11ರಂದು ಮೋದಿ ಕರ್ನಾಟಕ ಭೇಟಿ; 5 ಕಾರ್ಯಕ್ರಮಗಳುನವೆಂಬರ್ 11ರಂದು ಮೋದಿ ಕರ್ನಾಟಕ ಭೇಟಿ; 5 ಕಾರ್ಯಕ್ರಮಗಳು

ನವೆಂಬರ್ 2ರಂದು ನಡೆದ ಪೂರ್ವಭಾವಿ ಸಭೆಯಲ್ಲಿ ಚರ್ಚಿಸಿ ತೀರ್ಮಾನಿಸಿದಂತೆ ತಮ್ಮ ಕಾಲೇಜಿನಿಂದ ನಿಗದಿಪಡಿಸಿದಷ್ಟು ವಿದ್ಯಾರ್ಥಿಗಳನ್ನು ನಿಯೋಜಿಸಿರುವ ಬಸ್‍ನ ನೋಡಲ್ ಅಧಿಕಾರಿಗಳು ಹಾಗೂ ಪ್ರಾಂಶುಪಾಲರು ನಿಗದಿತ ಸಮಯಕ್ಕೆ ಕಾಲೇಜಿನಿಂದ ಹೊರಡುವ ಬಸ್‌ನಲ್ಲಿ ಕಾರ್ಯಕ್ರಮಕ್ಕೆ ಕ್ಷೇಮವಾಗಿ ಕರತರಲು ಹಾಗೂ ಕಾರ್ಯಕ್ರಮ ಮುಗಿದ ನಂತರ ವಾಪಸ್ ಕರೆದುಕೊಂಡು ಹೋಗಲು ಸೂಚಿಸಿದೆ. ತಪ್ಪಿದ್ದಲ್ಲಿ ಮುಂದಿನ ಆಗುಹೋಗುಗಳಿಗೆ ಸಂಬಂಧಪಟ್ಟ ಕಾಲೇಜಿನ ಪ್ರಾಂಶುಪಾಲರೇ ಜವಾಬ್ದಾರರಾಗಿರುತ್ತಾರೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಇನ್ನು ಶಿಕ್ಷಣ ಇಲಾಖೆ ಈ ಸುತ್ತೋಲೆಯನ್ನು ಕ್ರಮವನ್ನು ಕಾಂಗ್ರೆಸ್‌ ವಿಧಾನಪರಿಷತ್‌ ಸದಸ್ಯ ಪ್ರಕಾಶ ರಾಥೋಡ್ ಅಕ್ರೋಶ ವ್ಯಕ್ತಪಡಿಸಿದ್ದು,"ಜನ ಬೇಕು ಸ್ವಾಮಿ ಜನಾ.. ಪ್ರಧಾನಿ ಮೋದಿಯವರ ಭಾಷಣಕ್ಕೆ ಜನ‌ ಬೇಕು ಸ್ವಾಮಿ ಜನಾ.. ಮಾನ್ಯ ನರೇಂದ್ರ ಮೋದಿಯವರ ಜನಪ್ರಿಯತೆ ಈ ಮಟ್ಟಕ್ಕೆ ಕುಸಿದಿದೆ. ಸರಕಾರದ ಆದೇಶದ ಮೂಲಕ ಮೋದಿ ಅವರ ಕಾರ್ಯಕ್ರಮಕ್ಕೆ ಜನರನ್ನು ಲೋಡುಗಟ್ಟಲೆ ಸಾಗಿಸಲು‌ ಆದೇಶಿಸಲಾಗಿದೆ. ಶಿಕ್ಷಣ ಸಚಿವರೇ ನಿಮ್ಮ ಇಲಾಖೆ ಇಂಥಾದ್ದೊಂದು ಆದೇಶ ಹೊರಡಿಸಬಹುದೇ? ನಿಮಗೆ Shame ಅಲ್ಲವೇ?" ಎಂದು ಪ್ರಶ್ನಿಸಿ ಟ್ವೀಟ್ ಮಾಡಿದ್ದಾರೆ.

ಕೆಐಎ ಬಳಿ ಕೆಂಪೇಗೌಡ ಪ್ರತಿಮೆ ಅನಾವರಣಕ್ಕೆ ಭರದ ಸಿದ್ಧತೆಕೆಐಎ ಬಳಿ ಕೆಂಪೇಗೌಡ ಪ್ರತಿಮೆ ಅನಾವರಣಕ್ಕೆ ಭರದ ಸಿದ್ಧತೆ

ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ

ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ

ನವೆಂಬರ್ 11 ರಂದು ನರೇಂದ್ರ ಮೋದಿ ಕರ್ನಾಕಕ್ಕೆ ಆಗಮಿಸಲಿದ್ದು, ಬೆಂಗಳೂರಿನಲ್ಲಿ 5 ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಶಾಸಕರ ಭವನದ ಆವರಣದಲ್ಲಿ ಕನಕದಾಸರ ಪ್ರತಿಮೆಗೆ ಗೌರವ ಸಲ್ಲಿಸಲಿದ್ದಾರೆ. ಬಳಿಕ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ. ಈ ಕಾರ್ಯಕ್ರಮ ಮೊದಲು ನಿಗದಿಯಾಗಿರಲಿಲ್ಲ. ಶಾಸಕರ ಒತ್ತಾಯದ ಬಳಿಕ ಇದನ್ನು ಕಾರ್ಯಕ್ರಮಗಳ ಪಟ್ಟಿಯಲ್ಲಿ ಸೇರಿಸಲಾಗಿದೆ.

ವಂದೇ ಭಾರತ್‌ ರೈಲಿಗೆ ಚಾಲನೆ

ವಂದೇ ಭಾರತ್‌ ರೈಲಿಗೆ ಚಾಲನೆ

ನಂತರ 2ನೇ ಕಾರ್ಯಕ್ರಮ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ನಡೆಯಲಿದ್ದು, ಚೆನ್ನೈ-ಬೆಂಗಳೂರು-ಮೈಸೂರು ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ.

3ನೇ ಕಾರ್ಯಕ್ರಮ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ನಡೆಯಲಿದ್ದು, 2ನೇ ಟರ್ಮಿನಲ್‌ ಅನ್ನು ಮೋದಿ ಉದ್ಘಾಟನೆ ಮಾಡಲಿದ್ದಾರೆ. 4.41 ಲಕ್ಷ ಚದರ ಮೀಟರ್ ಜಾಗದಲ್ಲಿ ಟರ್ಮಿನಲ್ ನಿರ್ಮಾಣ ಮಾಡಲಾಗಿದೆ.

108 ಅಡಿ ಕಂಚಿನ ಪ್ರತಿಮೆ ಅನಾವರಣ

108 ಅಡಿ ಕಂಚಿನ ಪ್ರತಿಮೆ ಅನಾವರಣ

ಪ್ರಧಾನಿ ನರೇಂದ್ರ ಮೋದಿ 4ನೇ ಹಾಗೂ ಕರ್ನಾಟಕ ಪ್ರವಾಸದ ಕಾರ್ಯಕ್ರಮ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಿರ್ಮಾಣಗೊಂಡಿರುವ ನಾಡಪ್ರಭು ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆ ಅನಾವರಣ ಆಗಿದೆ. ಕರ್ನಾಟಕ ಸರಕಾರ ಈ ಪ್ರಗತಿ ಪ್ರತಿಮೆಗೆ 'ಪ್ರಗತಿ ಪ್ರತಿಮೆ' ಎಂದು ನಾಮಕರಣ ಮಾಡಿದೆ. 20 ಕೋಟಿ ರೂ. ವೆಚ್ಚದಲ್ಲಿ ಕೆಂಪೇಗೌಡ ಪ್ರತಿಮೆ ನಿರ್ಮಾಣ ಮಾಡಲಾಗಿದೆ

ಥೀಮ್ ಪಾರ್ಕ್ ಉದ್ಘಾಟನೆ

ಥೀಮ್ ಪಾರ್ಕ್ ಉದ್ಘಾಟನೆ

ವಿಮಾನ ನಿಲ್ದಾಣದ ಬಳಿ ನಿರ್ಮಾಣಗೊಂಡಿರುವ ನಾಡಪ್ರಭು ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆ ಬಳಿಯಲ್ಲಿಯೇ ಕೆಂಪೇಗೌಡ ಥೀಮ್ ಪಾರ್ಕ್ ನಿರ್ಮಾಣ ಮಾಡಲಾಗಿದೆ. ಕೆಂಪೇಗೌಡ ಅವರ ಇತಿಹಾಸ, ಸಾಧನೆ ಮತ್ತು ಪರಂಪರೆಯನ್ನು ಸಾರುವ ಆಕರ್ಷಕ ಕೆಂಪೇಗೌಡ ಥೀಮ್ ಪಾರ್ಕ್ ಅನ್ನು ಮೋದಿ ಲೋಕಾರ್ಪಣೆಗೊಳ್ಳುತ್ತಿದೆ. ಥೀಮ್ ಪಾರ್ಕ್ ಸ್ಥಾಪನೆಗೆ ಸರಕಾರವು 30 ಕೋಟಿ ವಿನಿಯೋಗಿಸುತ್ತಿದೆ. 23 ಎಕರೆಯಲ್ಲಿ ಹೆರಿಟೇಜ್ ಪಾರ್ಕ್ ನಿರ್ಮಾಣವಾಗಿದೆ.

English summary
Education department issued notice to bring PUC students for PM Narendra Modi Program to be held in Bengaluru on November 11
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X