ಖಾಸಗಿ ಶಾಲೆಗಳಿಗೆ ಶಿಕ್ಷಣ ಇಲಾಖೆಯ ಖಡಕ್ ಎಚ್ಚರಿಕೆ
ಬೆಂಗಳೂರು, ಮೇ. 13 : ಖಾಸಗಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳು ಸರ್ಕಾರಿ ಮತ್ತು ಅನುದಾನಿತ ಮತ್ತು ಇತರೆ ಶಾಲೆಗಳಿಗೆ ದಾಖಲಾಗಲು ಬಯಸಿ, ವರ್ಗಾವಣೆ ಪತ್ರಕ್ಕೆ ಮನವಿ ಮಾಡುತ್ತಾರೆ. ಆದರೆ, ಮನವಿಯನ್ನು ಸಲ್ಲಿಸಿದ್ದರೂ, ಖಾಸಗಿ ಶಾಲೆಯ ಆಡಳಿತ ಮಂಡಳಿಗಳು ವರ್ಗಾವಣೆ ಪತ್ರವನ್ನು ವಿತರಿಸಿರುವುದಿಲ್ಲ. ಹೀಗಾಗಿ ಅಂತಹ ಶಾಲೆಗಳಿಗೆ ಶಿಕ್ಷಣ ಇಲಾಖೆ ಖಡಕ್ ಎಚ್ಚರಿಕೆ ನೀಡಿದೆ.
ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಶಾಲೆಗಳಲ್ಲಿ ವಿದ್ಯಾರ್ಥಿಗಳ ವರ್ಗಾವಣೆ ಪತ್ರವನ್ನು ಸಕಾಲದಲ್ಲಿ ವಿತರಿಸುವ ಕುರಿತಂತೆ ಆದೇಶ ಹೊರಡಿಸಿದ್ದಾರೆ. ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಪೋಷಕರು ಆರ್ಥಿಕ ಸಂಕಷ್ಟದಿಂದಾಗಿ ತಮ್ಮ ಮಕ್ಕಳನ್ನು ಆ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡಿಸಲು ಸಾಧ್ಯವಾಗದೇ ಇರುವುದರಿಂದ ಅಂತಹ ಮಕ್ಕಳನ್ನು ಸರ್ಕಾರಿ, ಅನುದಾನಿತ ಮತ್ತು ಇತರೆ ಶಾಲೆಗಳಿಗೆ ದಾಖಲು ಮಾಡುತ್ತಾರೆ.

ಈ ವಿದ್ಯಾರ್ಥಿಗಳ ವರ್ಗಾವಣೆ ಪತ್ರವನ್ನು ವಿತರಿಸಬೇಕೆಂದು ಸಂಬಂಧಪಟ್ಟ ಖಾಸಗಿ ಅನುದಾನರಹಿತ ಶಾಲೆಗಳಿಗೆ ಮನವಿಯನ್ನು ಸಲ್ಲಿಸಿದ್ದರೂ, ಸದರಿ ಆಡಳಿತ ಮಂಡಳಿಗಳು ವರ್ಗಾವಣೆ ಪತ್ರವನ್ನು ವಿತರಿಸಿರುವುದಿಲ್ಲ. ಹೀಗಾಗಿ ಅವರು ಇಲಾಖೆಗೆ ಮನವಿ ಸಲ್ಲಿಸಿರುತ್ತಾರೆ. ಈ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸಂಬಂಧಪಟ್ಟ ಶಾಲೆಗೆ ವರ್ಗಾವಣೆ ಪತ್ರವನ್ನು ವಿತರಿಸುವಂತೆ ತಿಳಿಸಿದ್ದರೂ ವರ್ಗಾವಣೆ ಪತ್ರವನ್ನು ವಿತರಿಸದೇ ವಿಳಂಬ ಮಾಡುತ್ತಿದ್ದು ಇಂತಹ ವಿದ್ಯಾರ್ಥಿಗಳು ಅಧಿಕೃತವಾಗಿ ಶಾಲೆಗೆ ದಾಖಲಾಗದೇ ಶೈಕ್ಷಣಿಕ ಪ್ರಗತಿಗೆ ಆತಂಕದಲ್ಲಿ ಸಿಲುಕಿರುತ್ತಾರೆ ಎಂದು ಆಯುಕ್ತರು ಟೀಕಿಸಿದ್ದಾರೆ.
ಈಗಾಗಲೇ 2021-22ನೇ ಸಾಲಿನ ಶೈಕ್ಷಣಿಕ ವರ್ಷವು ಪ್ರಾರಂಭವಾಗಿ ಅರ್ಧ ವಾರ್ಷಿಕ ಮುಕ್ತಾಯವಾಗಿದ. ಮಕ್ಕಳು ಈವರೆಗೂ ಅಧಿಕೃತವಾಗಿ ದಾಖಲಾತಿಯಾಗದೇ ಶೈಕ್ಷಣಿಕ ಚಟುವಟಿಕೆಗಳಿಂದ ವಂಚಿತರಾಗಿರುತ್ತಾರೆ. ಈ ಬಗ್ಗೆ ರಾಷ್ಟ್ರದ ವಿವಿಧ ರಾಜ್ಯಗಳ ರಾಜ್ಯ ಉಚ್ಚನ್ಯಾಯಾಲಯಗಳಲ್ಲಿ ದಾಖಲಾಗಿರುವ ದಾವೆಗಳ ತೀರ್ಪಿನ ಅಡಿಯಲ್ಲಿ ವಿದ್ಯಾರ್ಥಿಗಳು ಶೈಕ್ಷಣಿಕ ಶೈಕ್ಷಣಿಕ ಚಟುವಟಿಕೆಗಳು ಮುಂದುವರೆಯಲು ವಿದ್ಯಾರ್ಥಿ/ವಿದ್ಯಾರ್ಥಿನಿಯ ಪೋಷಕರು ಬಯಸಿದಲ್ಲಿ ಆರ್.ಟಿ.ಇ ಕಾಯ್ದೆ ಸೆಕ್ಷನ್ -2 ಹಾಗೂ 5 ಮತ್ತು ಉಪ ಸೆಕ್ಷನ್ ಗಳ ಅನ್ವಯ ಅರ್ಜಿ ಸಲ್ಲಿಸಿದ 15 ದಿನಗಳ ಒಳಗಾಗಿ ವರ್ಗಾವಣೆ ಪತ್ರವನ್ನು ನೀಡಬೇಕಾಗುತ್ತದೆ.
ಈ ಸಂಬಂಧ ಇಲಾಖೆಯು ಕರ್ನಾಟಕ ಶಿಕ್ಷಣ ಕಾಯ್ದೆ-1983ರ ಅಡಿಯಲ್ಲಿ ನಿಯಮಗಳನ್ನು ಹಾಗೂ ಆರ್.ಟಿ.ಇ ಸೆಕ್ಷನ್-2 ಹಾಗೂ 5 ಮತ್ತು ಉಪ ಸೆಕ್ಷನ್ ಗಳ ಅಡಿಯಲ್ಲಿ ಈಗಾಗಲೇ ಜಾರಿಗೆ ತಂದಿರುವ ಆರ್.ಟಿ.ಇ ನಿಯಮ 2012ಕ್ಕೆ ತಿದ್ದುಪಡಿಗಳನ್ನು ರಚಿಸಲಾಗುತ್ತಿದೆ. ಈ ನಿಯಮಗಳನ್ನು ಜಾರಿಗೆ ತರಲು ಕಾಲಾವಕಾಶವಾಗುವುದರಿಂದ 2021-22ನೇ ಸಾಲಿನಲ್ಲಿ ಬೇರೆ ಶಾಲೆಗಳಿಗೆ (ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ) ದಾಖಲಾಗಿರುವ ವಿದ್ಯಾರ್ಥಿಗಳ ವರ್ಗಾವಣೆ ಪತ್ರವನ್ನು ಖಾಸಗಿ ಅನುದಾನರಹಿತ ಶಾಲೆಗಳು ವಿತರಿಸದೇ ವಿಳಂಬ ಮಾಡುತ್ತಿದೆ. ಇಂತಹ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ತೊಂದರೆಯಾಗುತ್ತಿರುವುದರಿಂದ ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳನ್ನು ಪರಿಗಣಿಸಿ ಕರ್ನಾಟಕ ಶಿಕ್ಷಣ ಕಾಯ್ದೆ 1983 ಸೆಕ್ಷನ್ 133ರ ಹಾಗೂ ಸೆಕ್ಷನ್ 106(2)(ಬಿ)ರ ಅಡಿಯಲ್ಲಿ ವರ್ಗಾವಣೆ ಪತ್ರ ವಿತರಣೆ ಮಾಡಲು ಕ್ರಮವಹಿಸುವಂತೆ ಆದೇಶಿಸಿದೆ.

ಶಿಕ್ಷಣ ಇಲಾಖೆ ಆದೇಶ
ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ದಾಖಲಾತಿ ಮಾಡಿದ್ದಾರೆ. ಆ ಶಾಲೆಗೆ ವರ್ಗಾವಣೆ ಪತ್ರವನ್ನು ವಿತರಿಸುವಂತೆ ಕೋರಿಕೆ ಸಲ್ಲಿಸಿದ್ದಲ್ಲಿ ಉಚಿತ ಮತ್ತು ಕಡ್ಡಾಯ ಶಿಕ್ಷಣ ಕಾಯ್ದೆ 2009ರ ಹಾಗೂ ಮಕ್ಕಳ ಹಕ್ಕುಗಳ ರಕ್ಷಣಾ ನೀತಿ 2016ರ ಅಡಿಯಲ್ಲಿ ಹಾಗೂ ಕರ್ನಾಟಕ ಶಿಕ್ಷಣ ಕಾಯ್ದೆ 1983 ಸೆಕ್ಷನ್ 133ರಡಿಯಲ್ಲಿ ಅಂತಹ ವರ್ಗಾವಣೆ ಪತ್ರವನ್ನು ಒಂದು ವಾರದೊಳಗೆ ವಿತರಿಸಲು ಆದೇಶಿಸಿದೆ.
ಖಾಸಗಿ ಅನುದಾನರಹಿತ ಶಾಲೆಗಳ ಮುಖ್ಯ ಶಿಕ್ಷಕರು ಒಂದು ವಾರದೊಳಗೆ ಕಡ್ಡಾಯವಾಗಿ ವರ್ಗಾವಣೆ ಪತ್ರವನ್ನು ವಿತರಿಸಬೇಕು. ಇಲ್ಲದೆ ಹೋದರೆ ಪೋಷಕರು ಸಂಬಂಧಪಟ್ಟ ವ್ಯಾಪ್ತಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಬೇಕು. ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಗಳು ಆ ಶಾಲೆಯ ಆಡಳಿತ ಮಂಡಳಿ ಮತ್ತು ಮುಖ್ಯ ಶಿಕ್ಷಕರಿಗೆ ಒಂದುವಾರದೊಳಗೆ ವರ್ಗಾವಣೆ ಪತ್ರವನ್ನು ವಿತರಿಸುವಂತೆ ತಿಳುವಳಿಕೆ ಪತ್ರ ನೀಡಬೇಕು.
ಕ್ಷೇತ್ರ ಶಿಕ್ಷಣಾಧಿಕಾರಿಗಳು ನೀಡಿದ ಕಾಲಾವಧಿಯಲ್ಲಿ ವರ್ಗಾವಣೆ ಪತ್ರ ನೀಡಲು ವಿಫಲವಾದ ಆಡಳಿತ ಮಂಡಳಿ ಮತ್ತು ಮುಖ್ಯ ಶಿಕ್ಷಕರ ವಿರುದ್ದ ಕಾನೂನಿನ ಅಡಿ ಕ್ರಮವಹಿಸಿ ಮಕ್ಕಳು ಶೈಕ್ಷಣಿಕ ಚಟುವಟಿಕೆಗಳಿಂದ ವಂಚಿತರಾಗದಂತೆ ಹಾಗೂ ಕರ್ನಾಟಕ ಶಿಕ್ಷಣ ಕಾಯ್ದೆ ನಿಯಮ 1983ರ ಸೆಕ್ಷನ್ 106(2)(ಬಿ) ರಲ್ಲಿ ತಿಳಿಸಿರುವಂತೆ ಕ್ರಮವಹಿಸಲು ಸೂಚಿಸಲಾಗಿದೆ.
-
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
CBSE ಶಾಲೆಗಳಲ್ಲಿ ಋತುಚಕ್ರ ನೈರ್ಮಲ್ಯ ಕಡ್ಡಾಯ: ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ಹೊಸ ನಿಯಮ ಜಾರಿ -
UPSC ಪೂರ್ವಭಾವಿ ಪರೀಕ್ಷೆ ಮುಗಿದ ತಕ್ಷಣವೇ ಕೀ ಉತ್ತರಗಳ ಬಿಡುಗಡೆಗೆ ಕೇಂದ್ರ ಸರ್ಕಾರದ ನಿರ್ಧಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications