ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯದ 105 ಸರ್ಕಾರಿ ಶಾಲೆಗಳ ಅಭಿವೃದ್ದಿಗೆ ಸತ್ವ ಕಂಪನಿ ಜೊತೆ ಒಡಂಬಡಿಕೆ

|
Google Oneindia Kannada News

ಬೆಂಗಳೂರು, ಸೆಪ್ಟಂಬರ್ 22 : ರಾಷ್ಟ್ರೀಯ ಶಿಕ್ಷಣ ನೀತಿ-2022 ಆಶಯಗಳಿಗೆ ಪೂರಕವಾಗಿ ರಾಜ್ಯದ 105 ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಲು ಸತ್ವ ಮೀಡಿಯಾ ಆ್ಯಂಡ್ ಕನ್ಸಲ್ಟಿಂಗ್ ಪ್ರೈ. ಲಿ. ಜೊತೆಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಒಡಂಬಡಿಕೆ ಮಾಡಿಕೊಂಡಿದೆ.

ಬುಧವಾರ (ಸೆ.21) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರೇಸ್ ಕೋರ್ಸ್ ನಿವಾಸದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ಸಮ್ಮುಖದಲ್ಲಿ ಒಡಂಬಡಿಕೆ ಮಾಡಿಕೊಳ್ಳಲಾಯಿತು. ರಾಜ್ಯದ ಯಾದಗಿರಿ, ಹಾವೇರಿ, ತುಮಕೂರು ಹಾಗೂ ದಾವಣಗೆರೆ ಜಿಲ್ಲೆಯ ಒಟ್ಟು 105 ಸರ್ಕಾರಿ ಶಾಲೆಗಳನ್ನು ಒಪ್ಪಂದದ ಅನ್ವಯ ಅಭಿವೃದ್ಧಿಪಡಿಸಲಾಗುತ್ತದೆ.

ಶಾಲೆಯಲ್ಲಿ ಬೋಧನಾ ಅವಧಿ ಐದೂವರೆ ತಾಸು ಮಾತ್ರ- ನಿಯಮ ಉಲ್ಲಂಘಿಸಿದ ಖಾಸಗಿ ಶಾಲೆಗೆ ನೋಟೀಸ್!ಶಾಲೆಯಲ್ಲಿ ಬೋಧನಾ ಅವಧಿ ಐದೂವರೆ ತಾಸು ಮಾತ್ರ- ನಿಯಮ ಉಲ್ಲಂಘಿಸಿದ ಖಾಸಗಿ ಶಾಲೆಗೆ ನೋಟೀಸ್!

ಶಾಲೆಗಳು ಹಾಗೂ ಶಾಲೆಗಳ ಸಮೀಪದ ಅಂಗನವಾಡಿ ಕೇಂದ್ರಗಳಲ್ಲಿ ಕಲಿಕೆ ಮತ್ತು ಫಲಿತಾಂಶ ಸುಧಾರಣೆ, ಮಕ್ಕಳ ನೋಂದಣಿ ಹೆಚ್ಚಳಕ್ಕೆ ವಿಶೇಷ ಆದ್ಯತೆ ನೀಡಲಾಗುತ್ತದೆ. ಪಠ್ಯಕ್ರಮ, ತರಗತಿಯಲ್ಲಿ ಬೋಧನೆ ಕ್ರಮಗಳ ಸುಧಾರಣೆ ಸೇರಿದಂತೆ ಇನ್ನಿತರ ಉತ್ತಮ ರೂಢಿಗಳ ಕುರಿತು ಶಿಕ್ಷಕರು, ಮುಖ್ಯ ಶಿಕ್ಷಕರು, ಕ್ಷೇತ್ರ ಸಂಪನ್ಮೂಲ ಸಂಯೋಜಕರು, ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿಗಳ ವೃತ್ತಿ ಸಾಮರ್ಥ್ಯವನ್ನು ವೃದ್ಧಿಪಡಿಸಲಾಗುತ್ತದೆ.

ಸ್ಪೋಕನ್ ಇಂಗ್ಲಿಷ್ ಗೆ ಉತ್ತೇಜನ

ಸ್ಪೋಕನ್ ಇಂಗ್ಲಿಷ್ ಗೆ ಉತ್ತೇಜನ

ಶಿಕ್ಷಣ ಇಲಾಖೆಯ ಒಡಂಬಡಿಕೆಯಿಂದಾಗಿ ಶಾಲೆಗಳಲ್ಲಿ ಅಗತ್ಯವಾದ ಎಲ್ಲ ಕಲಿಕಾ ಸಾಮಗ್ರಿಗಳನ್ನು ಒದಗಿಸುವುದು ಮತ್ತು ಉತ್ತಮಪಡಿಸುವುದು, ಅಗತ್ಯ ಸಾರಿಗೆ ವ್ಯವಸ್ಥೆ ಕಲ್ಪಿಸುವ ಜೊತೆಗೆ ಕಂಪ್ಯೂಟರ್ ಲ್ಯಾಬ್ ಸೌಲಭ್ಯ ಒದಗಿಸಲಾಗುತ್ತದೆ. ಸ್ಪೋಕನ್ ಇಂಗ್ಲೀಷ್, 'ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್ ಮತ್ತು ಗಣಿತ' (STEM) ಲ್ಯಾಬ್, ನೈತಿಕ ವಿಜ್ಞಾನ ತರಗತಿ, ಉದ್ಯಮಶೀಲತೆ ಗುಣಗಳು, ಆಲೋಚನೆಗಳ ಕುರಿತು ತರಬೇತಿ, ಕೌಶಲ್ಯ ಮತ್ತು ಭವಿಷ್ಯದಲ್ಲಿ ವೃತ್ತಿ ಜೀವನ ರೂಪಿಸಿಕೊಳ್ಳುವ ಕುರಿತು ಮಕ್ಕಳಿಗೆ ವಿವಿಧ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ.

ಕರ್ನಾಟಕ ಸರ್ಕಾರಿ ಶಾಲೆ: 47000 ಖಾಯಂ ಶಿಕ್ಷಕರು, 24000 ರೂಮ್‌ಗಳ ಕೊರತೆ!ಕರ್ನಾಟಕ ಸರ್ಕಾರಿ ಶಾಲೆ: 47000 ಖಾಯಂ ಶಿಕ್ಷಕರು, 24000 ರೂಮ್‌ಗಳ ಕೊರತೆ!

ಶಾಲೆಯ ಅಭಿವೃದ್ದಿ ಯೋಜನೆ

ಶಾಲೆಯ ಅಭಿವೃದ್ದಿ ಯೋಜನೆ

ಸರ್ಕಾರಿ ಶಾಲೆಗಳ ಅಭಿವೃದ್ಧಿಯಲ್ಲಿ ಶಾಲಾಭಿವೃದ್ಧಿ ಸಮಿತಿ, ಶಾಲೆ ಮೇಲುಸ್ತುವಾರಿ ಸಮಿತಿ, ಪಾಲಕರು, ಹಳೇ ವಿದ್ಯಾರ್ಥಿಗಳನ್ನು ಸೇರಿಸಿ ಸಮುದಾಯಗಳ ತೊಡಗಿಸಿಕೊಳ್ಳುವಿಕೆ ಮೂಲಕ ಭವಿಷ್ಯದಲ್ಲಿ ಶಾಲೆಯನ್ನು ಅಭಿವೃದ್ಧಿಪಡಿಸುವ ಜೊತೆಗೆ ನಿರಂತರವಾಗಿ ಬೆಳವಣಿಗೆಯಾಗುವಂತೆ ನೋಡಿಕೊಳ್ಳುವ ಪ್ರಯತ್ನಗಳನ್ನು ಮಾಡುವ ಉದ್ದೇಶವನ್ನು ಶಿಕ್ಷಣ ಇಲಾಖೆ ಹೊಂದಿದೆ.

ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ಕ್ರಮ

ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ಕ್ರಮ

"ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆ (ಡಯಟ್), ಶಿಕ್ಷಣ ಇಲಾಖೆಯ ಜೊತೆ ಸಂಯೋಜನೆಯೊಂದಿಗೆ ಕಾರ್ಯ ನಿರ್ವಹಿಸುವ ಮೂಲಕ ಈ ಶಾಲೆಗಳು, ಸಮೀಪದ ಇನ್ನಿತರ ಶಾಲೆಗಳಿಗೆ ಮಾದರಿಯಾಗಿ ಅಭಿವೃದ್ಧಿಯಾಗುವ ವಿಶ್ವಾಸವಿದೆ. ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಮತ್ತು ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸಲಾಗುತ್ತದೆ" ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವರಾದ ಬಿ.ಸಿ. ನಾಗೇಶ್ ಹೇಳಿದರು.

ಸತ್ವ ಮೀಡಿಯಾ ಅಂಡ್ ಕನ್ಸಲ್ಟಿಂಗ್ ಪ್ರೈ. ಲಿ ಜೊತೆ ಒಡಂಬಡಿಕೆ

ಸತ್ವ ಮೀಡಿಯಾ ಅಂಡ್ ಕನ್ಸಲ್ಟಿಂಗ್ ಪ್ರೈ. ಲಿ ಜೊತೆ ಒಡಂಬಡಿಕೆ

ರಾಜ್ಯದ 105 ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಲು , ರಾಜ್ಯ ಯೋಜನಾ ನಿರ್ದೇಶಕರಾದ ಬಿ.ಬಿ. ಕಾವೇರಿ ಹಾಗೂ ಸತ್ವ ಮೀಡಿಯಾ ಅಂಡ್ ಕನ್ಸಲ್ಟಿಂಗ್ ಪ್ರೈ. ಲಿ.ನ ಶ್ರೀಕೃಷ್ಣ ಶಾಲೆಗಳ ಅಭಿವೃದ್ಧಿಗೆ ಸಂಬಂಧಿಸಿದ ಒಡಂಬಡಿಕೆ ಪತ್ರಗಳನ್ನು ವಿನಿಮಯ ಮಾಡಿಕೊಂಡರು. ಸ್ಟಾರ್ಟಪ್ ವಿಷನ್ ಗ್ರೂಪ್‌ನ ಅಧ್ಯಕ್ಷ ಪ್ರಶಾಂತ್ ಪ್ರಕಾಶ್ ಈ ವೇಳೆ ಉಪಸ್ಥಿತರಿದ್ದರು.

English summary
Sattva Media and Consulting Pvt.Ltd to develop 105 government schools in the state to complement the aspirations of the National Education Policy-2022 Besides, the School Education and Literacy Department has entered into an agreement, Know More,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X