ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

25,600 ಅತಿಥಿ ಶಿಕ್ಷಕರ ನೇಮಕಕ್ಕೆ ಶಿಕ್ಷಣ ಇಲಾಖೆ ಸುತ್ತೋಲೆ

By Manjunatha
|
Google Oneindia Kannada News

ಬೆಂಗಳೂರು, ಜೂನ್ 16: ರಾಜ್ಯಾದ್ಯಂತ ಸರ್ಕಾರಿ ಪ್ರಾಥಮಿಕ, ಮಾಧ್ಯಮಿಕ ಹಾಗೂ ಪ್ರೌಢಶಾಲೆಗಳಿಗೆ 25,600 ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು ರಾಜ್ಯ ಶಿಕ್ಷಣ ಇಲಾಖೆ ಮುಂದಾಗಿದೆ.

ವಿದ್ಯಾರ್ಥಿಗಳಿಗೆ ಶೈಕ್ಷಣಿಕ ವರ್ಷ ಪ್ರಾರಂಭವಾಗಿದೆ ಆದರೆ ರಾಜ್ಯದ ಹಲವು ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಸೂಕ್ತ ಸಂಖ್ಯೆಯಲ್ಲಿ ಶಿಕ್ಷಕರೇ ಇಲ್ಲ ಹಾಗಾಗಿ ಅರ್ಹ ಶಿಕ್ಷಣ ತರಬೇತಿ ಪಡೆದವರನ್ನು ಅತಿಥಿ ಶಿಕ್ಷಕರನ್ನಾಗಿ ನೇಮಿಸಿಕೊಳ್ಳಲು ಶಿಕ್ಷಣ ಇಲಾಖೆ ನಿರ್ಣಯಿಸಿದೆ.

ಶಿಕ್ಷಣ ಸಚಿವರ ಜಿಲ್ಲೆಯಲ್ಲಿಯೇ ಮುಚ್ಚಲಿವೆ 91 ಶಾಲೆಗಳು!ಶಿಕ್ಷಣ ಸಚಿವರ ಜಿಲ್ಲೆಯಲ್ಲಿಯೇ ಮುಚ್ಚಲಿವೆ 91 ಶಾಲೆಗಳು!

ಪ್ರಾಥಮಿಕ 12,500, ಮಾಧ್ಯಮಿಕ ಶಾಲೆಗಳಲ್ಲಿ 10 ಸಾವಿರ ಹಾಗೂ ಪ್ರೌಢಶಾಲೆಗಳಲ್ಲಿ 3,100 ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಇಲಾಖೆಯು ಈಗಾಗಲೇ ಸುತ್ತೋಲೆ ಹೊರಡಿಸಿದೆ.

Education department planing to take 25600 guest teachers

ನಿಗದಿತ ವಿದ್ಯಾರ್ಹತೆ ಮತ್ತು ಮೆರಿಟ್ ಆಧಾರದ ಮೇಲೆ ಅತಿಥಿ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಿದ್ದು. ಅತಿಥಿ ಶಿಕ್ಷಕರಿಗೆ ಗೌರವ ಧನವಾಗಿ ರೂ.7500-8000 ನೀಡಲಾಗುವುದು ಎಂದು ಶಿಕ್ಷಣ ಇಲಾಖೆ ಹೇಳಿದೆ.

ಮುಂದಿನ 3 ವರ್ಷ ಖಾಸಗಿ ಶಾಲೆ ತೆರೆಯಲು ಅನುಮತಿ ಇಲ್ಲ?ಮುಂದಿನ 3 ವರ್ಷ ಖಾಸಗಿ ಶಾಲೆ ತೆರೆಯಲು ಅನುಮತಿ ಇಲ್ಲ?

ಮಾಧ್ಯಮಿಕ ಶಾಲೆಯಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ತುಂಬುವ ಕಾರ್ಯ ನಡೆಯುತ್ತಿದ್ದು ಅದು ಇನ್ನೂ ಐದು ಅಥವಾ ಆರು ತಿಂಗಳು ಹಿಡಿಯಲಿದೆ. ಖಾಲಿ ಇರುವ ಸ್ಥಾನ ತುಂಬಿದ ಕೂಡಲೇ ಅಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರ ಸೇವೆ ಅಲ್ಲಿಗೆ ಮುಗಿಯಲಿದೆ.

English summary
State Education department taking 25600 guest teachers for primary, middle and high schools. recruitment will be according to education qualification and merit.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X