ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಲ್ಲಾ ಶಾಲೆಗಳಲ್ಲಿ ಮಾದಕ ವಸ್ತುಗಳ ಜಾಗೃತಿಗೆ ಸಹಾಯವಾಣಿ

By Nayana
|
Google Oneindia Kannada News

ಬೆಂಗಳೂರು, ಮೇ 19: ಬೆಂಗಳೂರು ನಗರ ಪೊಲೀಸರು ಆರಂಭಿಸಿದ್ದ 1908 ಎಂಬ ಸಹಾಯವಾಣಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ರಾಜ್ಯದ ಎಲ್ಲ ಶಾಲೆಗಳಲ್ಲೂ ಪರಿಚಯಿಸಲು ಕ್ರಮ ಕೈಗೊಂಡಿದೆ.

ಮಾದಕ ವಸ್ತುಗಳ ಮಾರಾಟ ಮತ್ತು ಬಳಕೆಯ ವಿರುದ್ಧ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರಲ್ಲಿ ಜಾಗೃತಿ ಮೂಡಿಸಲು ಬೆಂಗಳೂರು ನಗರ ಪೊಲೀಸರು ಈ ಸಹಾಯವಾಣಿಯನ್ನು ಆರಂಭಿಸಿದ್ದರು. ಸಾರ್ವಜನಿಕರು ಗೌಪ್ಯವಾಗಿ ಈ ನಾಲ್ಕು ಅಂಕಿಗಳ ಶುಲ್ಕ ರಹಿತ ಸಹಾಯವಾಣಿಗೆ ಮಾದಕ ವಸ್ತುಗಳ ಮಾರಾಟ ಮತ್ತು ಬಳಕೆ ಬಗ್ಗೆ ಮಾಹಿತಿ ಒದಗಿಸಬಹುದು.

ಖಾಸಗಿ ಶಾಲೆಗಳ ಶುಲ್ಕ ನಿಗದಿ ನಿಯಂತ್ರಣಕ್ಕೆ ಸರ್ಕಾರ ಆದೇಶ! ಖಾಸಗಿ ಶಾಲೆಗಳ ಶುಲ್ಕ ನಿಗದಿ ನಿಯಂತ್ರಣಕ್ಕೆ ಸರ್ಕಾರ ಆದೇಶ!

ಬೆಂಗಳೂರು ನಗರ ಪೊಲೀಸರು ಪರಿಷಯಿಸಿದ ಈ ಸಹಾಯವಾಣಿಗೆ ಈಗಾಗಲೇ ಸಾಕಷ್ಟು ದೂರುಗಳು ಬಂದಿವೆ. ಹಲವು ಬಗೆಯ ಜಾಹಿರಾತು, ಬ್ಯಾನರ್ ಹಾಗೂ ಸ್ಟಿಕರ್ ಗಳನ್ನು ಸಿದ್ಧಪಡಿಸಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತರು, ಆವುಗಳನ್ನು ಇತರೆ ಇಲಾಖೆಗಳಿಗೂ ನೀಡಿ ಸಾರ್ವಹಜನಿಕರಲ್ಲಿ ಅರಿವು ಮೂಡಿಸುವಂತೆ ಸರ್ಕಾರವನ್ನು ಕೋರಿದ್ದರು.

Education dept extends anti drugs helpline to across the state.

ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲೆಗಳಲ್ಲಿ 1908 ನಾಲ್ಕು ಅಂಕಿಗಳ ಸಂಖ್ಯೆಯನ್ನು ಪರಿಚಯಿಸಲು ಕ್ರಮ ಕೈಗೊಳ್ಳುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕ ಬಿಕೆ ಬಸವರಾಜು ಸುತ್ತೋಲೆ ಹೊರಡಿಸಿದ್ದಾರೆ.

English summary
Education department has decided to extends anti drugs helpline to across the state which was operating by Bangalore police to curb drugs and Nicotines in schools premises soon.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X