School Trips : ಎರಡು ವರ್ಷದ ಬಳಿಕ ಸರ್ಕಾರಿ ಶಾಲಾ ಮಕ್ಕಳಿಗೆ ಪ್ರವಾಸ ಭಾಗ್ಯ

ಬೆಂಗಳೂರು, ನವೆಂಬರ್ 16: ಕರ್ನಾಟಕ ರಾಜ್ಯದ ಸರ್ಕಾರಿ ಶಾಲೆಗಳು ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವಾರ್ಷಿಕ ಪ್ರವಾಸ ಕೈಗೊಳ್ಳುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಪ್ರವಾಸದಲ್ಲಿ ಕೋವಿಡ್ ಮಾರ್ಗಸೂಚಿ ಅನುಸರಿಸುವುದು ಸೇರಿದಂತೆ ಕೆಲವು ಷರತ್ತುಗಳನ್ನು ವಿಧಿಸಿದೆ.

ಕೋವಿಡ್ ಕಾರಣದಿಂದ ಎರಡು ವರ್ಷ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಯಾವುದೇ ಪ್ರವಾಸ ಕೈಗೊಂಡಿರಲಿಲ್ಲ. ಅಲ್ಲದೇ ಸುಸೂತ್ರವಾಗಿ ಎಷ್ಟೋ ದಿವಸಗಳ ಕಾಲ ತರಗತಿಗಳೇ ನಡೆದಿರಲ್ಲ. ಎರಡು ವರ್ಷದ ಬಳಿಕ ಶೈಕ್ಷಣಿಕ ಚಟುವಟಿಕೆಗಳು ಆರಂಭಗೊಂಡಿದ್ದು, ಶಾಲೆಗಳು ಸಹಜ ಸ್ಥಿತಿಗೆ ಮರಳಿವೆ.

ಇದರ ಬೆನ್ನಲ್ಲೇ ಇದೀಗ ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿ ಮುಂದಿನ ಡಿಸೆಂಬರ್ ಅಂತ್ಯದೊಳಗಾಗಿ ಮಕ್ಕಳಿಗೆ ವಾರ್ಷಿಕ ಪ್ರವಾಸವನ್ನು ಕೈಗೊಳ್ಳುವಂತೆ ನಿರ್ದೇಶಿಸಿದೆ.

Education dept issues circular for govt school to taking the Annual school trip before December end

ಪ್ರವಾಸ ಕೈಗೊಳ್ಳುವಾಗ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸುವುದು ಕಡ್ಡಾಯವಾಗಿದೆ. 2022ರ ಡಿಸೆಂಬರ್ ಅಂತ್ಯದೊಳಗೆ ಮಕ್ಕಳನ್ನು ವಾರ್ಷಿಕ ಪ್ರವಾಸಕ್ಕೆ ಕರೆದುಕೊಂಡು ಹೋಗಬೇಕು. ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದೊಯ್ಯುವ ಕುರಿತು ಅವರ ಪೋಷಕರಿಂದ ಕಡ್ಡಾಯವಾಗಿ ಒಪ್ಪಿಗೆ ಪತ್ರ ಪಡೆಯಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಡಾ. ವಿಶಾಲ್ ಆರ್ ಸೂಚಿಸಿದ್ದಾರೆ.

KSRTC ಬಸ್ ಬಾಡಿಗೆ ಪಡೆಯುವುದು ಕಡ್ಡಾಯ; ಪ್ರವಾಸಕ್ಕಾಗಿ ಸರ್ಕಾರಿ ಶಾಲೆಗಳು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಅಥವಾ ಪ್ರವಾಸೋದ್ಯಮ ಇಲಾಖೆಯಿಂದ ವಾಹನಗಳನ್ನು ಬಾಡಿಗೆಗೆ ಪಡೆಯುವುದು ಸಹ ಕಡ್ಡಾಯವಾಗಿದೆ. ಶಾಲಾ ಪ್ರವಾಸಗಳಿಗೆ ಖಾಸಗಿ ವಾಹನಗಳನ್ನು ಬಾಡಿಗೆಗೆ ತೆಗೆದುಕೊಳ್ಳಲು ಶಾಲೆಗಳಿಗೆ ಅನುಮತಿ ಇರುವುದಿಲ್ಲ ಎಂದು ಇಲಾಖೆ ಆಯುಕ್ತರು ಸುತ್ತೋಲೆಯಲ್ಲಿ ಕಟ್ಟುನಿಟ್ಟಾಗಿ ತಾಕೀತು ಮಾಡಿದ್ದಾರೆ.

Education dept issues circular for govt school to taking the Annual school trip before December end

ವಿದ್ಯಾರ್ಥಿನಿಯರ ಸುರಕ್ಷತೆ ಬಗ್ಗೆ ಕಾಳಜಿ ವಹಿಸಿರುವ ಸಾರ್ವಜನಿಕ ಶಿಕ್ಷಣ ಇಲಾಖೆಯು ಪ್ರವಾಸದಲ್ಲಿ ಬಾಲಕಿಯರ ಮೇಲ್ವಿಚಾರಣೆಗೆ ಮಹಿಳಾ ಶಿಕ್ಷಕರನ್ನು ನಿಯೋಜಿಸಬೇಕೆಂದು ಶಾಲೆಗಳಿಗೆ ಸೂಚಿಸಿದೆ. ಜೊತೆಗೆ ಪ್ರವಾಸದ ಸಂದರ್ಭದಲ್ಲಿ ಅಪಘಾತಗಳು ಅಥವಾ ಅಹಿತಕರ ಏನಾದರೂ ನಡೆದಲ್ಲಿ ಇಲಾಖೆ ಇಲ್ಲವೇ ಶಾಲಾ ಆಡಳಿತ ಮಂಡಳಿ ಜವಾಬ್ದಾರಿ ಆಗಿರುವುದಿಲ್ಲ ಎಂದು ತಿಳಿಸಲಾಗಿದೆ.

ಕೊರೋನಾ ಕಾರಣದಿಂದ 2020 ಮಾರ್ಚ್ 24ರಿಂದ ರಾಜ್ಯಾದ್ಯಂತ ಶಾಲೆಗಳು ಬಂದ್ ಆದವು. ಬಹುತೇಕ ವರ್ಷಗಳ ಕಾಲ ತರಗತಿಗಳು ನಡೆದಿರಲಿಲ್ಲ. ಶೈಕ್ಷಣಿಕ ಚಟುವಟಿಕೆಗಳು ಅಷ್ಟಕ್ಕಷ್ಟೆ ಎಂಬ ಸ್ಥಿತಿ ಇತ್ತು. ಕಳೆದ ಒಂದು ವರ್ಷದಿಂದ ಹಂತ ಹಂತವಾಗಿ ಎಲ್ಲವು ಸಹಜ ಸ್ಥಿತಿಗೆ ಬಂದ ಬೆನ್ನಲ್ಲೇ ಸಾರ್ವಜನಿಕ ಶಿಕ್ಷಣ ಇಲಾಖೆ ಮಹತ್ವದ ಸುತ್ತೋಲೆ ಹೊರಡಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+