ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯ ಸರ್ಕಾರದ ನಿರ್ಲಕ್ಷ್ಯದಿಂದ 1.62 ಲಕ್ಷ ಮಕ್ಕಳ ಶಾಲಾ ದಾಖಲಾತಿ ಕುಸಿತ: ಎಎಪಿ

|
Google Oneindia Kannada News

ನವೆಂಬರ್ 26, ಬೆಂಗಳೂರು: ಕರ್ನಾಟಕ ರಾಜ್ಯದ 1.62 ಲಕ್ಷ ವಿದ್ಯಾರ್ಥಿಗಳು ಈ ವರ್ಷ ಸರ್ಕಾರಿ ಶಾಲೆಯನ್ನು ತ್ಯಜಿಸಿ ಖಾಸಗಿ ಶಾಲೆ ಸೇರಿರುವುದಕ್ಕೆ ರಾಜ್ಯ ಬಿಜೆಪಿ ಸರ್ಕಾರ ನಿರ್ಲಕ್ಷ್ಯವೇ ಕಾರಣ ಎಂದು ಆಮ್‌ ಆದ್ಮಿ ಪಾರ್ಟಿ ಬೆಂಗಳೂರು ಅಧ್ಯಕ್ಷ ಮೋಹನ್‌ ದಾಸರಿ ಹೇಳಿದರು.

ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್‌ನಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಲಕ್ಷಕ್ಕೂ ಅಧಿಕ ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಯಿಂದ ಬಿಡಿಸಿ ಸರ್ಕಾರಿ ಶಾಲೆಗೆ ಸೇರಿಸಿದ್ದರು. ಆದರೆ ಕ್ಕೆ ಶಿಕ್ಷಣ ಕ್ಷೇತ್ರದ ಮೇಲಿರುವ ಸರ್ಕಾರ ನಿರ್ಲಕ್ಷ್ಯ ಹಾಗೂ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ರವರ ಅಸಮರ್ಥತೆಯಿಂದ ವಿದ್ಯಾರ್ಥಿಗಳ ದಾಖಲಾತಿ ಸಂಖ್ಯೆ ಕುಸಿದಿದೆ.

ಪೋಷಕರು ಸರ್ಕಾರಿ ಶಾಲೆಗಳ ದುಸ್ಥಿತಿಗೆ ಬೇಸತ್ತು ತಮ್ಮ ಮಕ್ಕಳನ್ನು ಪುನಃ ಖಾಸಗಿ ಶಾಲೆಗೆ ಸೇರಿಸಲಾಗುತ್ತಿದೆ. ಒಂದರಿಂದ ಹತ್ತನೇ ತರಗತಿವರೆಗಿನ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳ ಸಂಖ್ಯೆ ರಾಜ್ಯ 1.62 ಲಕ್ಷ ಕುಸಿದಿದ ಎಂದು ವಿವರಸಿದರು.

Education Minister and Gvot Neglect School Enrollment Of 1.62 Lakh Children Is Falling

ರಾಜ್ಯದಲ್ಲಿರುವ 47,585 ಸರ್ಕಾರಿ ಶಾಲೆಗಳ ಪೈಕಿ 6,529 ಶಾಲೆಗಳಲ್ಲಿ ಕೇವಲ ಒಬ್ಬರೇ ಶಿಕ್ಷಕರಿದ್ದಾರೆ. ಬಹುತೇಕ ಶಾಲೆಗಳಲ್ಲಿ ಮೂಲ ಸೌಕರ್ಯಗಳು ಹಾಗೂ ಶಿಕ್ಷಕರ ಕೊರತೆ ಎದ್ದುಕಾಣುತ್ತದೆ. ಶಾಲೆಗಳು ಹಾಗೂ ಕಾಲೇಜುಗಳಲ್ಲಿ ಕೋಮು ರಾಜಕೀಯಕ್ಕೆ ನೀಡುವ ಆದ್ಯತೆಯನ್ನು ಅಭಿವೃದ್ಧಿಗೆ ನೀಡುತ್ತಿಲ್ಲ.

ದೆಹಲಿಯ ಆಮ್‌ ಆದ್ಮಿ ಪಾರ್ಟಿ ಸರ್ಕಾರವು ಸರ್ಕಾರಿ ಶಾಲೆಗಳಲ್ಲಿ ವಿಶ್ವದರ್ಜೆಯ ಮೂಲ ಸೌಕರ್ಯಗಳನ್ನು ಅಳವಡಿಸಿದೆ. ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆಯು ಗಣನೀಯವಾಗಿ ಏರಿಕೆಯಾಗುತ್ತಿದೆ. ಕರ್ನಾಟಕದಲ್ಲೂ ಅಂತಹ ಶೈಕ್ಷಣಿಕ ಕ್ರಾಂತಿಗಾಗಿ ಆಮ್‌ ಆದ್ಮಿ ಪಾರ್ಟಿ ಸರ್ಕಾರ ಅಧಿಕಾರಕ್ಕೆ ಬರಬೇಕು ಎಂದು ಹೇಳಿದರು.

Education Minister and Gvot Neglect School Enrollment Of 1.62 Lakh Children Is Falling

ಬಿಜೆಪಿಯ ಹೇಡಿತನ ಬಟಾಬಯಲು

ಮೀಸಲಾತಿ ನಿಗದಿಗೆ ಮೂರು ತಿಂಗಳು ಸಮಯ ಬೇಕೆಂದು ರಾಜ್ಯ ಸರ್ಕಾರವು ಕೋರ್ಟ್‌ಗೆ ಮನವಿ ಸಲ್ಲಿಸಿದೆ. ಈ ಬಗ್ಗೆ ಮಾತನಾಡಿದ ಮೋಹನ್‌ ದಾಸರಿ, 2020ರಲ್ಲಿ ನಡೆಯಬೇಕಾಗಿದ್ದ ಬಿಬಿಎಂಪಿ ಚುನಾವಣೆ ಮುಂದೂಡಲು, ಕೋರ್ಟ್‌ ಛೀಮಾರಿ ಹಾಕಿದ್ದರೂ ರಾಜ್ಯ ಸರ್ಕಾರ ಪ್ರಯತ್ನಿಸುತ್ತಿರುವುದು ಬಿಜೆಪಿಯ ಹೇಡಿತನಕ್ಕೆ ಸಾಕ್ಷಿ. ಪ್ರತಿಪಕ್ಷಗಳಾದ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷಗಳ ಬೆಂಗಳೂರು ಶಾಸಕರು ಕೂಡ ಬಿಬಿಎಂಪಿ ಚುನಾವಣೆಗೆ ಒತ್ತಾಯಿಸುತ್ತಿಲ್ಲ. ಮೂರೂ ಪಕ್ಷಗಳಿಗೆ ಸೋಲುವ ಭಯ ಕಾಡುತ್ತಿದ್ದು, ಆದ್ದರಿಂದಲೇ ಚುನಾವಣೆ ಮುಂದೂಡುವುದರಲ್ಲಿ ಒಗ್ಗಟ್ಟು ಪ್ರದರ್ಶಿಸುತ್ತಿವೆ" ಎಂದು ಹೇಳಿದರು.

ಬಿಬಿಎಂಪಿ ಚುನಾವಣೆಯಲ್ಲಿನ ಮುಖಭಂಗವು ವಿಧಾನಸಭಾ ಚುನಾವಣೆಯ ಮೇಲೆ ಪರಿಣಾಮ ಬೀರಲಿದೆ ಎಂದು ಬಿಜೆಪಿಗೆ ತಿಳಿದಿದೆ. ಆದ್ದರಿಂದ ವಿಧಾನಸಭಾ ಚುನಾವಣೆಯ ಜೊತೆಗೆ ಅಥವಾ ಅದರ ನಂತರದಲ್ಲಿ ಬಿಬಿಎಂಪಿ ಚುನಾವಣೆ ನಡೆಸಲು ಸರ್ಕಾರ ಪಿತೂರಿ ನಡೆಸುತ್ತಿದೆ. ಆದರೆ ಬೆಂಗಳೂರು ಹಾಗೂ ರಾಜ್ಯಾದ್ಯಂತ ಆಮ್‌ ಆದ್ಮಿ ಪಾರ್ಟಿಗೆ ಉತ್ತಮ ಜನಬೆಂಬಲ ವ್ಯಕ್ತವಾಗುತ್ತಿದೆ. ಯಾವುದೇ ಸಮಯದಲ್ಲಿ ಬಿಬಿಎಂಪಿ ಹಾಗೂ ವಿಧಾನಸಭೆ ಚುನಾವಣೆ ನಡೆದರೂ ನಮಗೆ ಬಹುಮತ ದೊರೆಯಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

English summary
Education minister BC Nagesh and Karnataka government neglect school enrollment of 1.62 lakh children is falling.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X