ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೆನರಾ ಬ್ಯಾಂಕ್ ವತಿಯಿಂದ ಸರ್ಕಾರಿ ಮಾದರಿ ಶಾಲೆಗೆ ಸ್ಕೂಲ್ ಬಸ್ ಉಡುಗೊರೆ

|
Google Oneindia Kannada News

ಬೆಂಗಳೂರು: ಮಾ. 30: ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ರಾಜ್ಯ ಸರ್ಕಾರ ಗ್ರಾಮ ಪಂಚಾಯಿತಿಗೆ ಒಂದು ಸರ್ಕಾರಿ ಮಾದರಿ ಶಾಲೆ ಅಭಿವೃದ್ಧಿ ಪಡಿಸಲು ಯೋಜನೆ ರೂಪಿಸಿದೆ. ಇದೀಗ ಈ ಶಾಲೆಗಳಿಗೆ ದಾಖಲಾತಿ ಪಡೆಯುವ ದೂರದ ಊರಿನ ಮಕ್ಕಳಿಗೆ ಶಾಲೆ ಬಸ್ ಸೌಲಭ್ಯ ಕಲ್ಪಿಸಲಾಗುತ್ತಿದೆ.

ರಾಜ್ಯದಲ್ಲಿ ಗ್ರಾಮ ಪಂಚಾಯಿತಿಗೆ ಸರ್ಕಾರಿ 'ಮಾದರಿ ಶಾಲೆ' ಅಭಿವೃದ್ಧಿಪಡಿಸುವ ರಾಜ್ಯ ಸರ್ಕಾರದ ಯೋಜನೆಯ ಭಾಗವಾಗಿ ಮಕ್ಕಳನ್ನು ಮನೆಯಿಂದ ಶಾಲೆ ಮತ್ತು ಶಾಲೆಯಿಂದ ಮನೆಗೆ ಪಿಕಪ್-ಡ್ರಾಪ್ ಮಾಡಲು ಖಾಸಗಿ ಸಂಸ್ಥೆಗಳ ಸಹಯೋಗದೊಂದಿಗೆ ವಾಹನಗಳನ್ನು ಒದಗಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.

ಕೆನರಾ ಬ್ಯಾಂಕ್ ವತಿಯಿಂದ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ (ಸಿಎಸ್ಆರ್) ಅಡಿ ಒದಗಿಸಲಾಗಿರುವ 2 ಮಾರುತಿ ಇಕೋ ವಾಹನಗಳನ್ನು ಗೃಹ ಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಶಿಕ್ಷಣ ಇಲಾಖೆಗೆ ಹಸ್ತಾಂತರಿಸಿದರು.

Education Minister B.C. Nagesh announcement about Govt model schools

ಯೋಜನೆ ಕುರಿತು ಮಾತನಾಡಿದ ಸಚಿವ ನಾಗೇಶ್ ಅವರು, 'ರಾಜ್ಯದ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಗತ್ಯ ಕಟ್ಟಡ ಮತ್ತು ಕೊಠಡಿ, ಆಟದ ಮೈದಾನ, ಕಂಪ್ಯೂಟರ್ ಲ್ಯಾಬ್ ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ಹೊಂದಿರುವ ಸರ್ಕಾರಿ ಶಾಲೆಗಳನ್ನು ಆಯ್ಕೆ ಮಾಡಲಾಗುತ್ತದೆ. ಆ ಶಾಲೆಗಳಲ್ಲಿ ತರಗತಿಗೊಬ್ಬ ಶಿಕ್ಷಕರನ್ನು ನೇಮಿಸಲಾಗುತ್ತದೆ. ಇದರಿಂದ ಆ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಳವಾಗುತ್ತದೆ. ಅಂತಹ ಶಾಲೆಗಳಿಗೆ ಮಕ್ಕಳನ್ನು ಆಕರ್ಷಿಸಿ ಶಾಲೆಗೆ ಕರೆ ತರಲು ವಾಹನಗಳ ವ್ಯವಸ್ಥೆ ಮಾಡಲಾಗುತ್ತದೆ' ಎಂದು ಇದೇ ವೇಳೆ ತಿಳಿಸಿದರು.

Education Minister B.C. Nagesh announcement about Govt model schools

ಕಾರ್ಪೊರೇಟ್ ಕಂಪನಿಗಳು, ಬ್ಯಾಂಕ್‌ಗಳು, ಕಂಪನಿಗಳು, ಕೈಗಾರಿಕೆಗಳು, ಶೈಕ್ಷಣಿಕ ಕ್ಷೇತ್ರದ ಅಭಿವೃದ್ಧಿಗೆ ಆಸಕ್ತಿ ಹೊಂದಿರುವ ಸಂಸ್ಥೆಗಳು, ವ್ಯಕ್ತಿಗಳ ಮೂಲಕ ಮಾದರಿ ಶಾಲೆಗಳಿಗೆ ವಾಹನಗಳ ವ್ಯವಸ್ಥೆ ಮಾಡಲಾಗುತ್ತದೆ. ನಿರ್ದಿಷ್ಟ ಅವಧಿಗೆ ವಾಹನಕ್ಕೆ ಚಾಲಕರು, ಇಂಧನ ಮತ್ತು ನಿರ್ವಹಣೆಯನ್ನು ಆಯಾ ಸಂಸ್ಥೆಗಳೇ ನಿರ್ವಹಿಸುವ ಕುರಿತು ಒಪ್ಪಂದ ಮಾಡಿಕೊಳ್ಳಲಾಗುತ್ತದೆ ಎಂದು ಸಚಿವರು ಹೇಳಿದರು.

ರಾಜ್ಯದ ಕೆಲವು ಭಾಗಗಳಲ್ಲಿರುವ ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಕರೆತರಲು ಖಾಸಗಿ ಸಹಭಾಗಿತ್ವದಲ್ಲಿ ವಾಹನಗಳ ವ್ಯವಸ್ಥೆ ಇದೆ. ಸಾಕಷ್ಟು ಮಕ್ಕಳು ವಾಹನಗಳ ಪ್ರಯೋಜನ ಪಡೆದು ಶಾಲೆಗೆ ಆಗಮಿಸುತ್ತಿದ್ದಾರೆ. ಶಾಲೆ ಅಭಿವೃದ್ಧಿ ಮೇಲುಸ್ತುವಾರಿ ಸಮಿತಿ (ಎಸ್‌ಡಿಎಂಸಿ), ಗ್ರಾಮಸ್ಥರು, ಶಿಕ್ಷಣ ಇಲಾಖೆಯ ಆಸಕ್ತಿಯಿಂದ ಇಂತಹ ಪ್ರಯತ್ನಗಳು ಯಶಸ್ವಿಯಾಗಿವೆ. ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಳ, ಎಲ್ಲ ಭಾಷೆ ಮತ್ತು ವಿಷಯಗಳಿಗೆ ಶಿಕ್ಷಕರ ಲಭ್ಯತೆ, ಮಕ್ಕಳ ನಡುವೆ ಸ್ಪರ್ಧಾತ್ಮಕ ಮನೋಭಾವ ಮೂಡಿಸುವುದು ಮತ್ತು ಮೂಲಸೌಕರ್ಯಗಳ ಸಂಪೂರ್ಣ ಸದುಪಯೋಗ ಮಾಡಿಕೊಳ್ಳುವ ಗುರಿಯನ್ನು ಹೊಂದಲಾಗಿದೆ ಎಂದು ನಾಗೇಶ್ ಸ್ಪಷ್ಟಪಡಿಸಿದರು.

Education Minister B.C. Nagesh announcement about Govt model schools

ಶಿಕ್ಷಣದ ಅಭಿವೃದ್ಧಿ, ಸಮಾಜ ಸೇವೆಯ ಮನೋಭಾವದಿಂದ ಆಸಕ್ತಿ ಇರುವ ಯಾವುದೇ ಕಂಪನಿ, ಸಂಘ-ಸಂಸ್ಥೆಗಳು ಸರ್ಕಾರಿ ಶಾಲೆಗಳಿಗೆ ವಾಹನ ಒದಗಿಸಲು ಮುಂದೆ ಬರಬಹುದು. ಹಂತ ಹಂತವಾಗಿ ಸರ್ಕಾರಿ ಶಾಲೆಗಳನ್ನು ಮಾದರಿ ಶಾಲೆಗಳಾಗಿ ಅಭಿವೃದ್ಧಿಪಡಿಸಲಾಗುತ್ತದೆ ಎಂದು ಇದೇ ವೇಳೆ ಹೇಳಿದರು. ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್. ಸೆಲ್ವಕುಮಾರ್, ಕೆನರಾ ಬ್ಯಾಂಕ್ ಬೆಂಗಳೂರು ವಲಯದ ಚೀಫ್ ಜನರಲ್ ಮ್ಯಾನೇಜರ್ ದೇಬಾನಂದ ಸಾಹು ಹಾಜರಿದ್ದರು.

English summary
School buses will be provided to Government Model Schools in this academic year says education Minister B.C. Nagesh know more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X