ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಬಗ್ಗೆ ಕಿವಿಗೊಡಬೇಡಿ: ಬಿ.ಸಿ. ನಾಗೇಶ್
ಬೆಂಗಳೂರು, ಏ. 08: ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಹಾಕಲಾಗಿದೆ. ಇದಕ್ಕೆ ಯಾರೂ ಮಹತ್ವ ಕೊಡಬೇಡಿ. ಇದರಿಂದ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳು ಗಾಬರಿಗೆ ಒಳಗಾಗುತ್ತಾರೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.
Recommended Video
ಬೆಂಗಳೂರು ನಗರದ ಪ್ರತಿಷ್ಠಿತ ಏಳು ಶಾಲೆಗಳಿಗೆ ಬಾಂಬ್ ಬೆದರಿಕೆ ಇ ಮೇಲ್ ಬಂದ ಘಟನೆ ಬಗ್ಗೆ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

ಶಾಲೆಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಿ ಇ ಮೇಲ್ ಮಾಡಿದ್ದಾರೆ. ಇದೊಂದು ಹುಸಿ ಬಾಂಬ್ ಬೆದರಿಕೆ. ಇದಕ್ಕೆ ಮಹತ್ವ ಕೊಡಬಾರದು. ಎಸ್ಎಸ್ಎಲ್‌ಸಿ ಪರೀಕ್ಷೆ ನಡೆಯುತ್ತಿದ್ದು, ಭೀತಿಗೆ ಒಳಗಾಗುತ್ತಾರೆ. ಬೆದರಿಕೆ ಇ-ಮೇಲ್ ಅನ್ನು ಗೃಹ ಇಲಾಖೆ ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸುತ್ತದೆ. ತಪ್ಪಿತಸ್ಥರನ್ನು ಪತ್ತೆ ಮಾಡಿ ಕ್ರಮ ಕೂಡ ಜರುಗಿಸಲಾಗುತ್ತದೆ. ಈ ಹುಸಿ ಬಾಂಬ್ ಬೆದರಿಕೆಗಳಿಗೆ ಯಾರೂ ಕಿವಿಗೊಡಬಾರದು ಎಂದು ಮನವಿ ಮಾಡಿದ್ದಾರೆ.

ಈ ಹಿಂದೆ ಕೂಡ ಇದೇ ರೀತಿ ಶಾಲೆಗೆ ಬಾಂಬ್ ಇಡಲಾಗಿದೆ ಎಂದು ಬೆದರಿಕೆ ಕರೆ ಬಂದಿತ್ತು. ಪೊಲೀಸರು ತನಿಖೆ ನಡೆಸಿದಾಗ ಪರೀಕ್ಷೆಗೆ ತಯಾರಿ ನಡೆಸದ ವಿದ್ಯಾರ್ಥಿ ಬೆದರಿಕೆ ಹಾಕಿ ಸಿಕ್ಕಿಬಿದ್ದಿದ್ದ. ವಿಚಾರಣೆ ವೇಳೆ ಪರೀಕ್ಷೆಗೆ ತಯಾರಿ ಆಗಿರದ ಹಿನ್ನೆಲೆಯಲ್ಲಿಬೆದರಿಕೆ ಹಾಕಿದ್ದಾಗಿ ಹೇಳಿದ್ದ. ಪರೀಕ್ಷೆಗೆ ಸಿದ್ಧವಾಗದೇ ಇರುವರು ಇಂತಹ ಕೆಲಸ ಮಾಡುತ್ತಾರೆ. ಇಂತಹ ಹುಸಿ ಬಾಂಬ್ ಬೆದರಿಕೆಗಳಿಗೆ ಕಿವಿಕೊಡಬೇಡಿ ಎಂದು ಮನವಿ ಮಾಡಿದರು.

ಕೋವಿಡ್ ನಿಂದಾಗಿ ಎರಡು ವರ್ಷ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಿದೆ. ನಿರೀಕ್ಷೆಗೂ ಮೀರಿ ಮಕ್ಕಳು ಪರೀಕ್ಷೆ ಬರೆಯುತ್ತಿದ್ದಾರೆ. ಎಲ್ಲಾ ಕಡೆ ಸುಗಮವಾಗಿ ಎಸ್ಎಸ್ಎಲ್‌ಸಿ ಪರೀಕ್ಷೆ ನಡೆಯುತ್ತಿದೆ. ಯಾರೂ ಗೊಂದಲಕ್ಕೆ ಒಳಗಾಗಬಾರದು ಎಂದರು.
-
Chandrika Dixit: ಒಂದು ರಾತ್ರಿ ನನ್ನ ಜೊತೆ ಮಲಗಿದ್ರೆ 50 ಲಕ್ಷ ಕೊಡ್ತೇನೆ; ಚಂದ್ರಿಕಾಗೆ ಖ್ಯಾತ ಉದ್ಯಮಿ ಆಫರ್ -
2025ರ ದ್ವಿತೀಯ PUC ಪರೀಕ್ಷೆಯಲ್ಲಿ ವಿಜ್ಞಾನ, ವಾಣಿಜ್ಯ, ಕಲಾ ವಿಭಾಗದಲ್ಲಿ ಮಿಂಚಿದ ಪ್ರತಿಭೆಗಳು; ಇಲ್ಲಿದೆ ಟಾಪರ್ಗಳ ಪಟ್ಟಿ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು












Click it and Unblock the Notifications