ಕರ್ನಾಟಕದ ಶಾಲೆಗಳಲ್ಲಿ ಹಿಜಾಬ್ ನಿಷೇಧ ಮುಂದುವರಿಕೆ: ಸಚಿವ ಬಿ ಸಿ ನಾಗೇಶ್

ಬೆಂಗಳೂರು, ಅಕ್ಟೋಬರ್ 13: ಕರ್ನಾಟಕ ಹಿಜಾಬ್ ನಿಷೇಧ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ವಿಭಾಗೀಯ ಪೀಠದಿಂದ ಉತ್ತಮ ತೀರ್ಪಿನ ನಿರೀಕ್ಷೆ ಅನ್ನು ಇಟ್ಟುಕೊಳ್ಳಲಾಗಿತ್ತು ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಪ್ರತಿಕ್ರಿಯೆ ನೀಡಿದ್ದಾರೆ.

ಸುಪ್ರೀಂ ಕೋರ್ಟ್ ವಿಭಾಗೀಯ ಪೀಠದಲ್ಲಿ ವಿಭಿನ್ನ ಅಭಿಪ್ರಾಯ ವ್ಯಕ್ತವಾದ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿದ ಅವರು, ಸದ್ಯಕ್ಕೆ ರಾಜ್ಯದ ಶಾಲೆಗಳಲ್ಲಿ ಹಿಜಾಬ್ ನಿಷೇಧದ ನಿಯಮಗಳೇ ಜಾರಿಯಲ್ಲಿರುತ್ತದೆ ಎಂದು ಹೇಳಿದರು.

ಕರ್ನಾಟಕ ಹೈಕೋರ್ಟ್ ಈ ಹಿಂದೆ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸುವುದಕ್ಕೆ ನಿರ್ಬಂಧವನ್ನು ವಿಧಿಸಿತ್ತು. ಇದಕ್ಕೆ ಸಂಬಂಧಿಸಿದಂತೆ ಹಲವು ನಿಯಮಗಳನ್ನು ಜಾರಿಗೊಳಿಸಲಾಗಿತ್ತು. ಸುಪ್ರೀಂಕೋರ್ಟ್ ಅಂತಿಮ ತೀರ್ಪು ಹೊರ ಬೀಳುವವರೆಗೂ ಹೈಕೋರ್ಟ್ ನೀಡಿದ ಆದೇಶವೇ ಮುಂದುವರಿಯಲಿದೆ ಎಂದು ಸಚಿವ ಬಿಸಿ ನಾಗೇಶ್ ತಿಳಿಸಿದರು.

Education minister BC Nagesh Reaction to Supreme Court Split Verdict on Hijab Ban

ವಿಸ್ತೃತ ಪೀಠದಿಂದ ಉತ್ತಮ ತೀರ್ಪಿನ ನಿರೀಕ್ಷೆ:

"ಕರ್ನಾಟಕ ಶೈಕ್ಷಣಿಕ ಕಾಯ್ದೆ ಅಡಿಯಲ್ಲಿ ಬರುವ ಹಾಗೂ ರಾಜ್ಯ ಹೈಕೋರ್ಟ್ ನೀಡಿದ ತೀರ್ಪಿನಲ್ಲಿ ಉಲ್ಲೇಖಿಸಿದಂತೆ ನಿಯಮಗಳಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಬೇಕಿದೆ. ಅದೇ ನಿಯಮಗಳ ಪಾಲನೆಯನ್ನು ಮುಂದುವರಿಸಬೇಕಿದೆ. ಸುಪ್ರೀಂಕೋರ್ಟ್ ತ್ರಿಸದಸ್ಯ ಪೀಠವು ರಾಜ್ಯದ ಮಕ್ಕಳ ಶೈಕ್ಷಣಿಕ ಭವಿಷ್ಯವನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಉತ್ತಮ ತೀರ್ಪು ನೀಡುವುದು ಎಂಬ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ," ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಹೇಳಿದರು.

ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಲ್ಲಿ ವಿಭಿನ್ನ ಅಭಿಪ್ರಾಯ:

ಹಿಜಾಬ್ ನಿಷೇಧಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ನೇತೃತ್ವದ ವಿಭಾಗೀಯ ಪೀಠವು ಹೈಕೋರ್ಟ್ ತೀರ್ಪಿನ ಮೇಲ್ಮನವಿಯನ್ನು ವಜಾಗೊಳಿಸಿತು. ಈ ಪ್ರಕರಣದಲ್ಲಿ ವಿಭಿನ್ನ ಅಭಿಪ್ರಾಯ ವ್ಯಕ್ತವಾದ ಹಿನ್ನೆಲೆ ವಿಸ್ತೃತ ಪೀಠಕ್ಕೆ ಪ್ರಕರಣವನ್ನು ವರ್ಗಾಯಿಸಲಾಗುವುದು ಎಂದು ಹೇಳಿತು.

ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ನಿಷೇಧಿಸುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ವಿಭಾಗೀಯ ಪೀಠದ ನ್ಯಾಯಮೂರ್ತಿಗಳಲ್ಲಿ ಗುರುವಾರ ಭಿನ್ನ ಅಭಿಪ್ರಾಯ ವ್ಯಕ್ತವಾಗಿತು. ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿದ ರಾಜ್ಯ ಸರ್ಕಾರದ ಆದೇಶವನ್ನು ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಹೇಮಂತ್ ಗುಪ್ತಾ ವಜಾಗೊಳಿಸಿದರು. ಅದೇ ರೀತಿ ನ್ಯಾಯಮೂರ್ತಿ ಸುಧಾಂಶು ಧುಲಿಯಾ ಮೇಲ್ಮನವಿಗಳನ್ನು ಅನುಮತಿಸಿದ್ದು, ಕರ್ನಾಟಕ ಹೈಕೋರ್ಟ್ ಆದೇಶವನ್ನು ರದ್ದುಗೊಳಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+