ರಾಜ್ಯದಲ್ಲಿರುವ ಅಕ್ರಮ ಶಾಲೆಗಳು, ಪಿಯು ಕಾಲೇಜುಗಳ ಲೆಕ್ಕ ಕೊಟ್ಟ ಶಿಕ್ಷಣ ಸಚಿವ

ಮಂಗಳೂರು, ಸೆಪ್ಟೆಂಬರ್‌ 25: ರಾಜ್ಯದಲ್ಲಿ 1,600 ಕ್ಕೂ ಹೆಚ್ಚು ಶಾಲೆಗಳು ಮತ್ತು ಪಿಯು ಕಾಲೇಜುಗಳು ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಆ ಸಂಸ್ಥೆಗಳಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸರ್ಕಾರವು ಅವುಗಳ ವಿರುದ್ಧ ಕ್ರಮ ತೆಗೆದುಕೊಳ್ಳುವಲ್ಲಿ ಎಚ್ಚರಿಕೆ ವಹಿಸುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಬಂಗಾರಪ್ಪ, ಈ ಸಂಸ್ಥೆಗಳನ್ನು ನಡೆಸಲು ಅನುಮತಿ ಪಡೆದಿರುವ ಆಡಳಿತ ಮಂಡಳಿಗಳು ಮತ್ತು ನಿಜವಾಗಿ ನಡೆಸುತ್ತಿರುವವರು ಬೇರೆ ಬೇರೆ ಹಾಗೂ ನಮೂದಿಸಿರುವ ವಿಳಾಸಗಳೂ ಬೇರೆ ಬೇರೆಯಾಗಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಅನುಮತಿ ಪಡೆಯಲು ನಿಯಮಗಳನ್ನು ಇನ್ನಷ್ಟು ಕಟ್ಟುನಿಟ್ಟಾಗಿ ಜಾರಿಗೆ ತರಲಾಗಿದೆ ಎಂದು ಅವರು ಹೇಳಿದರು.

Education Minister Madhu Bangarappa gave an account of illegal schools and PU colleges in the state

ಈ ಅಕ್ರಮ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ. ಇದು ವರ್ಷದ ಮಧ್ಯಭಾಗವಾಗಿದ್ದು, ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರುತ್ತದೆ. ಅನಧಿಕೃತ ಸಂಸ್ಥೆಗಳಿಗೆ ತಪ್ಪುಗಳನ್ನು ಸರಿಪಡಿಸಲು ಸಮಯ ನೀಡಲಾಗಿದೆ. ಪ್ರಸ್ತುತ ಶಾಲಾ ಬ್ಯಾಗ್‌ಗಳ ತೂಕಕ್ಕೆ ಹೋಲಿಸಿದರೆ 1/3 ರಷ್ಟು ಕಡಿಮೆ ಮಾಡಲು ತಮ್ಮ ಇಲಾಖೆಯು ಸೂತ್ರವನ್ನು ರೂಪಿಸಿದೆ ಎಂದು ಹೇಳಿದರು.

9 ಮತ್ತು 11 ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ನಡೆಸುವ ಸರ್ಕಾರದ ನಿರ್ಧಾರವನ್ನು ಅವರು ಸಮರ್ಥಿಸಿಕೊಂಡು, ಇದು 10 ಮತ್ತು 12 ನೇ ತರಗತಿಗಳಲ್ಲಿ ಸಾರ್ವಜನಿಕ ಪರೀಕ್ಷೆಗಳಿಗೆ ಸಿದ್ಧರಾಗಲು ಸಹಾಯ ಮಾಡುತ್ತದೆ. ರಾಜ್ಯದಲ್ಲಿ 53,000 ಸರ್ಕಾರಿ ಶಾಲಾ ಶಿಕ್ಷಕರ ಹುದ್ದೆಗಳು ಖಾಲಿ ಉಳಿದಿವೆ. ಒಂದು ವರ್ಷದಲ್ಲಿ ಈ ನಿಟ್ಟಿನಲ್ಲಿ ಗಮನಾರ್ಹ ಸುಧಾರಣೆ ಕಂಡುಬರಲಿದೆ ಎಂದು ತಿಳಿಸಿದರು.

ಸುಮಾರು 2,000 ದ್ವಿಭಾಷಾ ಕರ್ನಾಟಕ ಸಾರ್ವಜನಿಕ ಶಾಲೆಗಳನ್ನು (ಕೆಪಿಎಸ್) ತೆರೆಯಲಾಗುವುದು ಮತ್ತು ಪ್ರತಿ 2-3 ಗ್ರಾಮ ಪಂಚಾಯಿತಿಗಳಿಗೆ ಒಂದು ಕೆಪಿಎಸ್ ಇರುತ್ತದೆ. ಕೆಲವು ಪಿಯು ಕಾಲೇಜುಗಳು ದಿನಕ್ಕೆ 12 ಗಂಟೆಗಳ ಕಾಲ ತರಗತಿಗಳನ್ನು ನಡೆಸುವುದು ಸ್ವೀಕಾರಾರ್ಹವಲ್ಲ. ಇಂತಹ ಅಭ್ಯಾಸಗಳನ್ನು ನಿಲ್ಲಿಸುವಂತೆ ಕರೆ ನೀಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+