• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

'ವಿದ್ಯಾಗಮ' ಕಾರ್ಯಕ್ರಮ ಸ್ಥಗಿತಕ್ಕೆ ಸುರೇಶ್ ಕುಮಾರ್ ಆದೇಶ!

|

ಬೆಂಗಳೂರು, ಅ. 10: ಇಡೀ ರಾಜ್ಯಾದ್ಯಂತ ವಿದ್ಯಾಗಮ ಕಾರ್ಯಕ್ರಮದ ಕುರಿತು ಆತಂಕ ವ್ಯಕ್ತವಾದ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ತಾತ್ಕಾಲಿಕವಾಗಿ ವಿದ್ಯಾಗಮ ಕಾರ್ಯಕ್ರಮವನ್ನು ನಿಲ್ಲಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.

ವಿದ್ಯಾಗಮ ಕಾರ್ಯಕ್ರಮದ ರೂವಾರಿ ದಿಢೀರ್ ಎತ್ತಂಗಡಿ!

ರಾಜ್ಯದಲ್ಲಿ ಜಾರಿ ತಂದಿರುವ ವಿದ್ಯಾಗಮ ಕಾರ್ಯಕ್ರಮದ ಕುರಿತು ಕೆಲವು ವಲಯಗಳಲ್ಲಿ ವಿರೋಧದ ಅಭಿಪ್ರಾಯಗಳು ವ್ಯಕ್ತವಾಗಿರುವುದನ್ನು ಗಮನಿಸಿದ್ದೇನೆ. ಕಾರ್ಯಕ್ರಮವು ಸಮಾಜದ ಕೆಳ ಸ್ಥರದ, ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬಗಳ ಮಕ್ಕಳ ಹಿತವನ್ನು ಮನದಲ್ಲಿ ಇಟ್ಟುಕೊಂಡು ಯೋಜಿಸಿರುವ ಕಾರ್ಯಕ್ರಮ.

'ವಿದ್ಯಾಗಮ' ಕುರಿತು ಮಹತ್ವದ ಪ್ರಕಟಣೆ ಹೊರಡಿಸಿದ ಸುರೇಶ್ ಕುಮಾರ್!

ಆದರೂ ವಿವಿಧ ವಲಯಗಳಿಂದ ಪ್ರಕಟವಾಗುತ್ತಿರುವ ಕಾಳಜಿಗೆ ಮನ್ನಣೆ ಕೊಟ್ಟು ಕಾರ್ಯಕ್ರಮ ನಿಲ್ಲಿಸಲಾಗಿದೆ. ವಿದ್ಯಾಗಮ ಸಂದರ್ಭದಲ್ಲಿ ಕೊರೊನಾ ವೈರಸ್ ಹರಡಿರುವ ಕುರಿತು ಜಿಲ್ಲಾವಾರು ಅಂಕಿ ಅಂಶಗಳನ್ನು ಸಂಗ್ರಹಿಸಿ ವಿಶ್ಲೇಷಣೆ‌ ಮಾಡಲಾಗುತ್ತಿದೆ. ಅಲ್ಲಿಯವರೆಗೂ ವಿದ್ಯಾಗಮ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಸೂಚಿಸಿದ್ದೇವೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

ವಿದ್ಯಾಗಮ ಕಾರ್ಯಕ್ರಮದಲ್ಲಿ ಅಭ್ಯಾಸ ಮಾಡುತ್ತಿದ್ದ ಮಕ್ಕಳಿಗೆ ಬೆಳಗಾವಿ ಹಾಗೂ ಕಲಬುರಗಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿರುವುದು ದೃಢಪಟ್ಟಿತ್ತು. ಶಿಕ್ಷಕರಿಂದಲೇ ಮಕ್ಕಳಿಗೆ ಸೋಂಕು ಹರಡಿದೆ ಎಂದು ಸ್ಥಳೀಯರು ಆರೋಪಿಸಿದ್ದರು.

English summary
Education Minister S Suresh Kumar Ordered to Temporarily Stop Vidyagama Scheme,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X