ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆತಂಕ ಬೇಡ ಸದ್ಯಕ್ಕೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಲ್ಲ: ಸಚಿವ ಸುರೇಶ್ ಕುಮಾರ್!

|
Google Oneindia Kannada News

ಬೆಂಗಳೂರು, ಜೂ. 09: ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ದ್ವಿತೀಯ ಪಿಯು ಪರೀಕ್ಷೆ ರದ್ದು ಮಾಡಲಾಗಿದೆ. ಪಿಯು ಪರೀಕ್ಷೆ ರದ್ದು ಮಾಡಲಾಗಿದ್ದರೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ತೀರ್ಮಾನ ಮಾಡಿದೆ. ಮುಂದಿನ ವಿದ್ಯಾಭ್ಯಾಸದ ಹಿನ್ನೆಲೆಯಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಮಹತ್ವದ್ದಾಗಿರುವುದರಿಂದ ಪರೀಕ್ಷೆ ಪ್ರಾಮುಖ್ಯತೆ ಪಡೆದುಕೊಂಡಿದೆ.

Recommended Video

SSLC ಮಕ್ಕಳಿಗೆ ಸಂಪೂರ್ಣ ಸ್ಪಷ್ಟನೆ ನೀಡಿದ ಶಿಕ್ಷಣ ಸಚಿವರು | Oneindia Kannada

ಕೊರೊನಾ ಸಂಕಷ್ಟದ ಮಧ್ಯೆ ಪರೀಕ್ಷೆ ನಡೆಸುತ್ತಿರುವುದು ಪಾಲಕರಲ್ಲಿ ಸಹಜವಾಗಿಯೇ ಆತಂಕ ಸೃಷ್ಟಿಸಿದೆ. ಪಾಲಕರ ಆತಂಕವನ್ನು ಕಡಿಮೆ ಮಾಡಲು ಹಾಗೂ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬುವ ನಿಟ್ಟಿನಲ್ಲಿ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಮಾಹಿತಿ ನೀಡಿದ್ದಾರೆ. ಜೊತೆಗೆ ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಹೇಗಿರುತ್ತದೆ? ಪ್ರಶ್ನೆ ಪತ್ರಿಕೆ ಹೇಗಿರುತ್ತದೆ? ಜೊತೆಗೆ ಈ ಬಾರಿ ಪರೀಕ್ಷೆ ಯಾವಾಗ ನಡೆಯುತ್ತದೆ? ಎಂಬುದರ ಕುರಿತು ಅವರು ಸಂಪೂರ್ಣವಾಗಿ ವಿವರಿಸಿದ್ದಾರೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ2021: ಮಾದರಿ OMR ಉತ್ತರ ಪತ್ರಿಕೆ ಬಗ್ಗೆ ತಿಳಿದುಕೊಳ್ಳಿ!ಎಸ್‌ಎಸ್‌ಎಲ್‌ಸಿ ಪರೀಕ್ಷೆ2021: ಮಾದರಿ OMR ಉತ್ತರ ಪತ್ರಿಕೆ ಬಗ್ಗೆ ತಿಳಿದುಕೊಳ್ಳಿ!

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಹಿನ್ನೆಲೆಯಲ್ಲಿ ರಾಜ್ಯದ 34 ಶೈಕ್ಷಣಿಕ ಜಿಲ್ಲೆಗಳ ಉಪನಿರ್ದೇಶಕರು, ಬಿಇಒ ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸುರೇಶ್ ಕುಮಾರ್ ಅವರು ವಿಡಿಯೋ ಸಂವಾದ ಮಾಡಿದ್ದಾರೆ. ಈ ಬಾರಿ ಬದಲಾಗಿರುವ ಪರೀಕ್ಷಾ ಮಾದರಿ ಕುರಿತು ಮಕ್ಕಳಿಗೆ ಶಿಕ್ಷಕರು ಸೂಕ್ತ ತಿಳಿವಳಿಕೆ ಕೊಡಬೇಕು ಎಂದು ಸೂಚಿಸಿದ್ದಾರೆ.

ಸದ್ಯಕ್ಕೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಲ್ಲ!

ಸದ್ಯಕ್ಕೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಲ್ಲ!

ಕೊರೊನಾ ವೈರಸ್ ಆತಂಕದ ಮಧ್ಯೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸುವುದಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ವಿದ್ಯಾರ್ಥಿಗಳಿಗೆ ಹಾಗೂ ಪಾಲಕರಿಗೆ ಭರವಸೆ ಕೊಟ್ಟಿದ್ದಾರೆ. ಮುಖ್ಯವಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಕೋವಿಡ್-19 ಸೋಂಕು ಹತೋಟಿಗೆ ಬಂದ ನಂತರವೇ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಜೊತೆಗೆ ಹೊಸ ಮಾದರಿಯಲ್ಲಿ ಈ ಬಾರಿ ಪರೀಕ್ಷೆ ನಡೆಯಲಿರುವುದರಿಂದ ಈ ವಾರಂತ್ಯಕ್ಕೆ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಎಲ್ಲ ಶಾಲೆಗಳಿಗೆ ಆಯಾ ಬಿಇಒ ಕಚೇರಿಗಳ ಮೂಲಕ ತಲುಪಿಸಲಾಗುವುದು ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.

ಈ ಸಲದ ಪರೀಕ್ಷೆ ಹೀಗೆ ಎದುರಿಸಿ!

ಈ ಸಲದ ಪರೀಕ್ಷೆ ಹೀಗೆ ಎದುರಿಸಿ!

ಇನ್ನು ಬದಲಾದ ಮಾದರಿಯ ಪರೀಕ್ಷೆಯನ್ನು ಹೇಗೆ ಎದುರಿಸಬೇಕು ಎಂಬುದನ್ನು ಸುರೇಶ್ ಕುಮಾರ್ ತಿಳಿಸಿದ್ದಾರೆ. ಮಕ್ಕಳಿಗೆ ಒಎಂಆರ್ ಶೀಟ್ ರೂಪದಲ್ಲಿರುವ ಪ್ರಶ್ನೆ ಪತ್ರಿಕೆಗಳಿಗೆ ಹೇಗೆ ಉತ್ತರಿಸಬೇಕೆಂಬ ಕುರಿತು ಶಿಕ್ಷಕರು ಸಲಹೆ ನೀಡಬೇಕು. ಈಗಾಗಲೇ ಹಲವಾರು ಜಿಲ್ಲೆಗಳಲ್ಲಿ ಅಧಿಕಾರಿಗಳು ಮತ್ತು ಶಿಕ್ಷಕರು ವಿವಿಧ ರೀತಿಯಲ್ಲಿ ಮಕ್ಕಳನ್ನು ಸಂಪರ್ಕಿಸಿ ಅವರನ್ನು ಪರೀಕ್ಷೆಗೆ ಸಜ್ಜುಗೊಳಿಸುವ ಕೆಲಸ ಮಾಡುತ್ತಿದ್ದಾರೆ. ಅದನ್ನು ಉಳಿದ ಜಿಲ್ಲೆಯ ಶಿಕ್ಷಕರು ಹಾಗೂ ಅಧಿಕಾರಿಗಳು ಅನುಸರಿಸಬೇಕೆಂದು ಸುರೇಶ್ ಕುಮಾರ್ ಸೂಚಿಸಿದ್ದಾರೆ.

ಈ ಬಾರಿ ಪರೀಕ್ಷೆ ಹೇಗೆ ಬರೆಯಬೇಕು?

ಈ ಬಾರಿ ಪರೀಕ್ಷೆ ಹೇಗೆ ಬರೆಯಬೇಕು?

ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತಲಾ ಒಂದು ವಿಷಯಕ್ಕೆ ತಲಾ 40 ಅಂಕಗಳ ಪ್ರಶ್ನೆಪತ್ರಿಕೆ ಇರುತ್ತದೆ. ಅದರಲ್ಲಿಯೇ ಇರುವ ನಾಲ್ಕು ಉತ್ತರಗಳಲ್ಲಿ ಒಂದು ಉತ್ತರವನ್ನು ಗುರುತು ಮಾಡಬೇಕು. ಪ್ರಶ್ನೆಗಳು ನೇರವಾಗಿರುತ್ತವೆ ಹಾಗೂ ಸುಲಭವಾಗಿರುತ್ತವೆ. ಆದ್ದರಿಂದ ಮಕ್ಕಳಿಗೆ ಹೆಚ್ಚಿನ ಗೊಂದಲವಾಗುವುದಿಲ್ಲ. ಆದರೂ ಈ ಕುರಿತು ಮಕ್ಕಳಿಗೆ ಸುಲಭವಾಗಿ ಅರ್ಥೈಸುವಂತೆ ಮಾಹಿತಿ ನೀಡಿ ಈ ಹೊಸ ಪದ್ಧತಿ ಕುರಿತು ಹೆಚ್ಚಿನ ತಿಳಿವಳಿಕೆ ಮೂಡಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಸುರೇಶ್ ಕುಮಾರ್ ಭರವಸೆ ನೀಡಿದ್ದಾರೆ. ಮಕ್ಕಳಿಗೆ ಪರೀಕ್ಷೆ ಕುರಿತು ಸಂಪೂರ್ಣ ತಿಳಿವಳಿಕೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮೇಲ್ವಿಚಾರಕರಿಕೆ ಲಸಿಕೆ ಕಡ್ಡಾಯ!

ಮೇಲ್ವಿಚಾರಕರಿಕೆ ಲಸಿಕೆ ಕಡ್ಡಾಯ!

ಮಕ್ಕಳ ಹಿತದೃಷ್ಟಿಯಿಂದ ಎರಡು ದಿನಗಳ ಪರೀಕ್ಷೆಯನ್ನು ಮಾತ್ರ ನಡೆಸಲಾಗುತ್ತಿದೆ. ಕಳೆದ ಸಲಕ್ಕಿಂತ ಹೆಚ್ಚಿನ ಸುರಕ್ಷತಾ ವಾತಾವರಣದಲ್ಲಿ ಪರೀಕ್ಷೆ ನಡೆಸಲಾಗುವುದು. ಜೊತೆಗೆ ಕೋವಿಡ್ 19ರ ಲಸಿಕೆ ಪಡೆದ ಶಿಕ್ಷಕರನ್ನು ಮಾತ್ರ ಕೊಠಡಿ ಮೇಲ್ವಿಚಾರಕರನ್ನಾಗಿ ನೇಮಿಸಿಕೊಳ್ಳಬೇಕಾಗಿದೆ. ಹೀಗಾಗಿ ಶಿಕ್ಷಕರಿಗೆ ಕೊರೊನಾ ಲಸಿಕೆ ನೀಡಲು ಕ್ರಮ ವಹಿಸುವಂತೆ ಈಗಾಗಲೇ ಆರೋಗ್ಯ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಬಗ್ಗೆ ಕಲಬುರಗಿ, ಧಾರವಾಡ ಅಪರ ಆಯುಕ್ತರು ವಿಶೇಷ ಗಮನ ಹರಿಸಿ ಲಸಿಕೆ ಪಡೆದ ಶಿಕ್ಷಕರನ್ನೇ ಮೇಲ್ವಿಚಾರಕರನ್ನಾಗಿ ನೇಮಿಸಬೇಕೆಂದು ಸುರೇಶ್ ಕುಮಾರ್ ಸೂಚಿಸಿದ್ದಾರೆ.

ಕಳೆದ ಬಾರಿಯಂತೆ ಈ ಬಾರಿಯೂ ಮಕ್ಕಳು ತಮ್ಮ ಮನೆಯ ಸಮೀಪದ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಅವಕಾಶವಿದೆ. ಈ ಸಲ ಕಳೆದ ಸಲಕ್ಕಿಂತ 30 ಸಾವಿರ ಮಕ್ಕಳು ಹೆಚ್ಚಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ನೊಂದಾಯಿಸಿಕೊಂಡಿದ್ದಾರೆ. ಜೊತೆಗೆ ಪರೀಕ್ಷೆಗೆ ಹಾಜರಾಗಲಿರುವ ಎಲ್ಲ ಮಕ್ಕಳಿಗೂ ಎನ್-95 ಮಾಸ್ಕ್‌ಗಳನ್ನು ಒದಗಿಸಲಾಗುವುದು ಎಂದು ವಿಡಿಯೋ ಕಾನ್ಫರೆನ್ಸ್‌ನಲ್ಲಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

English summary
Education Minister Suresh Kumar has explained how to take the SSLC exam this time. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X