ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಿಕ್ಷಣ ಸಚಿವರಿಂದ ಮಕ್ಕಳಲ್ಲಿ ಆತ್ಮ ವಿಶ್ವಾಸ ಮೂಡಿಸುವ ಕಾರ್ಯಕ್ರಮ

|
Google Oneindia Kannada News

ಬೆಂಗಳೂರು, ಏಪ್ರಿಲ್ 20: ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಲಾಕ್‌ಡೌನ್ ಘೋಷಣೆಯಾಗಿ ‌ಎಸ್.ಎಸ್.ಎಲ್.ಸಿ. ಪರೀಕ್ಷೆಗಳನ್ನು ಮುಂದೂಡಿರುವುದರಿಂದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ರಾಜ್ಯದ ನಾನಾ ಭಾಗದ ಮಕ್ಕಳೊಂದಿಗೆ ಸೋಮವಾರ ತಾವೇ ದೂರವಾಣಿ ಕರೆ ಮಾತನಾಡಿ ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸಿದರು.

ಸೋಮವಾರ ಬೆಳಗ್ಗೆ ತಮ್ಮ ಕಚೇರಿಯಿಂದ ಮಕ್ಕಳಿಗೆ ತಾವೇ ಟೆಲಿಪೋನ್ ಮೂಲಕ ಸಂಪರ್ಕಿಸಿ, ಮಕ್ಕಳ ಪರೀಕ್ಷಾ ಸಿದ್ಧತೆ, ಆರೋಗ್ಯ ಕುರಿತು ವಿಚಾರಿಸಿದರಲ್ಲದೇ ಶಿಕ್ಷಣ ಇಲಾಖೆ ವತಿಯಿಂದ ದೂರದರ್ಶನ ಮತ್ತು ಆಕಾಶವಾಣಿ ಸೇರಿದಂತೆ ಹಲವು ಮಾಧ್ಯಮಗಳ ಮೂಲಕ ‌ಎಸ್.ಎಸ್.ಎಲ್.ಸಿ.ವಿದ್ಯಾರ್ಥಿಗಳ ಪೂರ್ವ ಸಿದ್ಧತೆಗೆ ಮಾರ್ಗದರ್ಶಿ ತರಗತಿಗಳನ್ನು ಇಷ್ಟರಲ್ಲಿಯೇ ಬಿತ್ತರಿಸಲಾಗುವುದಿದ್ದು, ಇದನ್ನು ಅದನ್ನು ಫಾಲೋ ಮಾಡಬೇಕೆಂದು ಸಲಹೆ ನೀಡಿದರು.

ಮುಂಬೈನಲ್ಲಿ ಪತ್ರಕರ್ತರ ಮೇಲೆ ದಾಳಿ ಮಾಡಿದ ಕೊರೊನಾ!ಮುಂಬೈನಲ್ಲಿ ಪತ್ರಕರ್ತರ ಮೇಲೆ ದಾಳಿ ಮಾಡಿದ ಕೊರೊನಾ!

ಪರೀಕ್ಷೆ ಮುಂದಕ್ಕೆ ಹೋಗಿದ್ದರಿಂದ ಮಕ್ಕಳು ಆತ್ಮವಿಶ್ವಾಸ ಕಳೆದುಕೊಳ್ಳದಂತೆ ಮಾಡಲು ಕ್ರಮಗಳನ್ನು ಕೈಗೊಳ್ಳಬೇಕೆಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಿದ್ದರು. ಇಲಾಖೆಯ ಆಯುಕ್ತರ ಹಂತದಿಂದ ಹಿಡಿದು ನಿರ್ದೇಶಕರು, ಉಪನಿರ್ದೇಶಕರು, ಬಿಇಒ, ಕ್ಲಸ್ಟರ್ ಹಾಗೂ ಶಾಲಾಮುಖ್ಯೋಪಾಧ್ಯಾಯರು, ಶಿಕ್ಷಕರು ಹಂತದವರೆಗೂ ಎಲ್ಲರೂ ವಿದ್ಯಾರ್ಥಿಗಳೊಂದಿಗೆ ಸಂಪರ್ಕ ಸಾಧಿಸಿ ಆತ್ಮವಿಶ್ವಾಸ ಮೂಡಿಸುವ ಕೆಲಸ ಸಮರೋಪಾದಿಯಲ್ಲಿ ಮಾಡಬೇಕು ಎಂದು ಸೂಚನೆ ನೀಡಿದ್ದರು. ಅದರ, ಭಾಗವಾಗಿ ಇಂದು ತಾವೇ ಮಕ್ಕಳೊಂದಿಗೆ ಮಾತನಾಡಿ ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸಿದ್ದು ವಿಶೇಷವಾಗಿತ್ತು.

Education Minister Suresh Kumar Telephone Intraction With SSLC Students Ahead Of SSLC Exams

ಲಾಕ್ಡೌನ್ ಮುಗಿಯುತ್ತಿದ್ದಂತೆ ಪರೀಕ್ಷೆ ಆರಂಭವಾಗುತ್ತೇ, ನೀವು ಯಾವ ಕಾರಣಕ್ಕೂ ವಿಶ್ವಾಸ ಕಳೆದುಕೊಳ್ಳಬೇಡಿ ಎಂದು ಸಚಿವರು ಮಕ್ಕಳಿಗೆ ಹೇಳಿದರು. ಆ ಕಡೆಯಿಂದ ಮಕ್ಕಳೂ ಸಹ ಸಚಿವರಿಗೆ ಪ್ರಶ್ನೆ ಕೇಳಿ ತಮ್ಮ ಸಂದೇಹಗಳನ್ನು ಬಗೆಹರಿಸಿಕೊಂಡರು.

English summary
Education Minister Suresh Kumar Telephone Intraction With SSLC Students Ahead Of SSLC Exams. still exams postfoned due to lockdown.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X