ಸಂಪುಟ ವಿಸ್ತರಣೆ, ನಿಗಮ-ಮಂಡಳಿ ನೇಮಕಕ್ಕೆ ಇಂದಿನಿಂದ ಶ್ರೀಕಾರ!
ಬೆಂಗಳೂರು, ನವೆಂಬರ್ 6: ಐದು ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶಕ್ಕೆ ಇನ್ನೇನು ಕ್ಷಣಗಣನೆ ಆರಂಭವಾಗಿದೆ. ಉಪ ಚುನಾವಣೆ ಫಲಿತಾಂಶ ದೊರೆತ ನಂತರ ನಿಗಮ-ಮಂಡಳಿ, ಸಂಪುಟ ವಿಸ್ತರಣೆ ಕಸರತ್ತು ಆರಂಭವಾಗಿದೆ.
ಸಂಪುಟ ವಿಸ್ತರಣೆ ಹಾಗೂ ಬಿಗಮ-ಮಂಡಳಿ ನೇಮಕ ಉಪ ಚುನಾವಣೆ ಫಲಿತಾಂಶದ ಬಳಿಕ ನಡೆಯಲಿದೆ ಎಂದು ಹೇಳಿದ್ದರು. ಅದಕ್ಕೆ ಕಾಂಗ್ರೆಸ್ ಮುಖಂಡರು ಕಾತುರದಿಂದ ಕಾಯುತ್ತಿದ್ದಾರೆ. ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್ ಬೆಂಗಳೂರಿನಲ್ಲಿದ್ದುಕೊಂಡೇ ಮೊದಲ ಹಂತದ ಅಭಿಪ್ರಾಯ ಸಂಗ್ರಹ ಮಾಡಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿ ಪ್ರಮುಖ ನಾಯಕರೊಂದಿಗೆ ಸಭೆ ನಡೆಸಿ ಆಕಾಂಕ್ಷಿಗಳ ಒಂದು ಪಟ್ಟಿಯನ್ನು ತಯಾರಿಸಲಿದ್ದಾರೆ.
ಜಾತಿ, ಧರ್ಮ, ಪ್ರಾದೇಶಿಕ, ಹಿರಿತನ ಹೊರತಾಗಿ ಇದೀಗ ಪಕ್ಷದಲ್ಲಿ ತೊಡಗಿಕೊಳ್ಳುವಿಕೆ ಕೂಡ ಮಂತ್ರಿ ಸ್ಥಾನಕ್ಕೆ ಮಾನದಂಡವಾಗಿರುವುದು ವಿಶೇಷ ಎಂದೇ ಹೇಳಬಹುದು. ದೀಪಾವಳಿ ಮುಗಿದ ಬಳಿಕ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಭೇಟಿಗೆ ಸಮಯಾವಕಾಶ ದೆಹಲಿಗೆ ತೆರಳಿ ಪಟ್ಟಿ ಅಂತಿಮಗೊಳಿಸಲಾಗುತ್ತದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಪಕ್ಷದ ಅಭ್ಯರ್ಥಿ ಪರ ಉತ್ತಮ ಪ್ರಚಾರ ಮಾಡಿ, ಗೆಲುವಿಗೆ ಶ್ರಮಿಸಿ ಸಫಲರಾದವರಿಗೆ ಆದ್ಯತೆ ಮೇರೆಗೆ ಸಚಿವ ಸ್ಥಾನಕ್ಕೆ ಪರಿಗಣಿಸಲಾಗುವುದು ಎಂದು ಹೇಳಿಕೊಂಡಿತ್ತು. ಆ ಭರವಸೆ ಮೇಲೆಯೇ ಸಚಿವಾಕಾಂಕ್ಷಿಗಳು ಮನ-ಧನ ಪೂರ್ವಕವಾಗಿ ಕೆಲಸ ಮಾಡಿದ್ದು ಸಚಿವ ಸ್ಥಾನ ಸಿಕ್ಕೇ ಬಿಟ್ಟಿತೆಂಬ ನಿರೀಕ್ಷೆಯಲ್ಲಿದ್ದಾರೆ.











Click it and Unblock the Notifications