ಈದ್ ಮಿಲಾದ್‌ ರಜೆಯಲ್ಲಿ ಮಹತ್ವದ ಬದಲಾವಣೆ; ಇಂದು ಯಾವ ಜಿಲ್ಲೆಗಳಲ್ಲಿ ರಜೆ?

ಬೆಂಗಳೂರು: ಈದ್ ಮಿಲಾದ್‌ ಹಬ್ಬದ ಸಾರ್ವತ್ರಿಕ ರಜೆ ದಿನಾಂಕದಲ್ಲಿ ಕರ್ನಾಟಕ ಸರ್ಕಾರ ಮಹತ್ವದ ಬದಲಾವಣೆ ಮಾಡಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಇಂದು (ಆಗಸ್ಟ್‌ 25) ರಜೆ ಘೋಷಿಸಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಈ ಹಿಂದೆ ನಿಗದಿಪಡಿಸಿದಂತೆ ಆಗಸ್ಟ್‌ 26ರಂದು ರಜೆ ಇರಲಿದೆ. ಚಂದ್ರದರ್ಶನದ ವ್ಯತ್ಯಾಸದಿಂದ ಕರಾವಳಿ ಜಿಲ್ಲೆಗಳಲ್ಲಿ ಈದ್ ಮಿಲಾದ್‌ ಆಚರಣೆಯ ದಿನಾಂಕ ಬದಲಾಗಿರುವ ಹಿನ್ನೆಲೆಯಲ್ಲಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

ಈ ಹಿಂದೆ ರಾಜ್ಯಾದ್ಯಂತ ಆಗಸ್ಟ್‌ 26ರಂದು ಈದ್ ಮಿಲಾದ್‌ ಸಾರ್ವತ್ರಿಕ ರಜೆ ನಿಗದಿಪಡಿಸಲಾಗಿತ್ತು. ಆದರೆ ಕರಾವಳಿ ಜಿಲ್ಲೆಗಳಲ್ಲಿ ಹಬ್ಬದ ಆಚರಣೆಯ ದಿನಾಂಕದಲ್ಲಿ ಬದಲಾವಣೆಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಡಳಿತಗಳು ರಜೆ ದಿನಾಂಕ ಬದಲಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದವು. ಇಸ್ಲಾಮಿಕ್‌ ತಿಂಗಳ ಆರಂಭದ ಚಂದ್ರದರ್ಶನದಲ್ಲಿ ವ್ಯತ್ಯಾಸವಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿಯ ವಿವಿಧ ಮಸೀದಿಗಳ ಖಾಝಿಗಳು ಆಗಸ್ಟ್‌ 25ರಂದು ಈದ್ ಮಿಲಾದ್ ಆಚರಿಸಲು ನಿರ್ಧರಿಸಿದ್ದರು. ಈ ಹಿನ್ನೆಲೆಯಲ್ಲಿ ಆ ದಿನ ಮೆರವಣಿಗೆ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

Eid Milad Holiday Changed in Karnataka Dakshina Kannada Udupi Get Holiday on August 25

ಜಿಲ್ಲಾಧಿಕಾರಿಗಳಿಗೆ ಸರ್ಕಾರದ ಸೂಚನೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾಧಿಕಾರಿಗಳ ಮನವಿಯನ್ನು ಪರಿಗಣಿಸಿರುವ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (DPAR), ಸ್ಥಳೀಯ ಪರಿಸ್ಥಿತಿಗೆ ಅನುಗುಣವಾಗಿ ಆಗಸ್ಟ್‌ 25ರಂದು ಸಾರ್ವತ್ರಿಕ ರಜೆ ನೀಡಲು ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಆದೇಶಿಸಿದೆ.

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಜ್ ಮತ್ತು ವಕ್ಸ್‌ ಸಚಿವ, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್‌ ಅವರು ಕೂಡ ಕರಾವಳಿ ಜಿಲ್ಲೆಗಳಲ್ಲಿ ರಜೆ ದಿನಾಂಕ ಬದಲಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದರು. ಹೀಗಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಆಗಸ್ಟ್‌ 25ರಂದು ಸರ್ಕಾರಿ ರಜೆ , ಉಳಿದ ಕರ್ನಾಟಕದಲ್ಲಿ ಆಗಸ್ಟ್‌ 26ರಂದು ಈದ್ ಮಿಲಾದ್‌ ರಜೆ ಮುಂದುವರಿಯಲಿದೆ.

ಸರ್ಕಾರಿ ಆದೇಶದಲ್ಲಿ ಏನಿದೆ?

ಈ ಹಿಂದೆ ಹೊರಡಿಸಲಾಗಿದ್ದ ಅಧಿಸೂಚನೆಯಂತೆ ರಾಜ್ಯಾದ್ಯಂತ ಆಗಸ್ಟ್‌ 26ರಂದು ಈದ್ ಮಿಲಾದ್ ಸಾರ್ವತ್ರಿಕ ರಜೆ ನಿಗದಿಯಾಗಿತ್ತು. ಆದರೆ, ಕರಾವಳಿ ಭಾಗದಲ್ಲಿ ಹಬ್ಬದ ಆಚರಣೆ ಹಾಗೂ ಸ್ಥಳೀಯ ಅಗತ್ಯತೆಗಳಿಗೆ ಅನುಗುಣವಾಗಿ ಆಗಸ್ಟ್‌ 25ರಂದೇ ರಜೆ ನೀಡುವಂತೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾಧಿಕಾರಿಗಳು ಸರ್ಕಾರಕ್ಕೆ ಪತ್ರ ಬರೆದು ಪ್ರಸ್ತಾವನೆ ಸಲ್ಲಿಸಿದ್ದರು.

ಜಿಲ್ಲಾಧಿಕಾರಿಗಳ ಕೋರಿಕೆಯನ್ನು ಪರಿಗಣಿಸಿರುವ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಡಿಪಿಎಆರ್), ಆಗಸ್ಟ್‌ 25ರಂದು ಸಾರ್ವತ್ರಿಕ ರಜೆ ಘೋಷಿಸಲು ತಮ್ಮ ಹಂತದಲ್ಲೇ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಅಧಿಕೃತ ಆದೇಶ ಹೊರಡಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+