ಎಂಟು ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ : ಜಮೀರ್ ಅಹಮದ್ ಖಾನ್

ಬೆಂಗಳೂರು, ಫೆಬ್ರವರಿ 13: ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ನಿರ್ದೇಶನಾಲಯದಿಂದ ಪ್ರಾಥಮಿಕ ಹಂತದಿಂದ ಉನ್ನತ ಶಿಕ್ಷಣದವರೆಗೆ 7.85 ಲಕ್ಷ ವಿದ್ಯಾರ್ಥಿಗಳಿಗೆ 290 ಕೋಟಿ ರೂ. ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ ಎಂದು ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ. ಈಗಾಗಲೇ 6.25 ಲಕ್ಷ ವಿದ್ಯಾರ್ಥಿಗಳಿಗೆ ಡಿಬಿಟಿ ಮೂಲಕ 180 ಕೋಟಿ ರೂ. ವರ್ಗಾವಣೆ ಮಾಡಲಾಗಿದ್ದು, 1.60 ಲಕ್ಷ ವಿದ್ಯಾರ್ಥಿಗಳಿಗೆ 100 ಕೋಟಿ ರೂ. ಅನುದಾನ ಅಗತ್ಯ ಇರುವ ಬಗ್ಗೆ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ.

ವಿದ್ಯಾಸಿರಿ ಯೋಜನೆಯಡಿಯಲ್ಲಿ ಜನವರಿ ಅಂತ್ಯ ದವರೆಗೆ ಹಾಸ್ಟೆಲ್ ಗಳಲ್ಲಿ 23 ಸಾವಿರ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲಾಗಿದ್ದು, ಹಾಸ್ಟೆಲ್ ನಲ್ಲಿ ಪ್ರವೇಶ ಸಿಗದ 5753 ವಿದ್ಯಾರ್ಥಿಗಳಿಗೆ ಮಾಸಿಕ 1500 ರೂ. ನಂತೆ ಹತ್ತು ತಿಂಗಳ ಮೊತ್ತ 15 ಸಾವಿರ ರೂ. ವರ್ಗಾವಣೆ ಮಾಡಲಾಗಿದೆ. ಅದಕ್ಕಾಗಿ 8.63 ಕೋಟಿ ರೂ. ವೆಚ್ಚ. ಮಾಡಲಾಗಿದೆ. ಇನ್ನು 200 ವಿದ್ಯಾರ್ಥಿಗಳ ಆಧಾರ್ ಲಿಂಕ್ ಸಮಸ್ಯೆ ಇದ್ದು ಅದು ಸರಿ ಹೋದ ನಂತರ ಅವರಿಗೂ ಹಣ ವರ್ಗಾವಣೆ ಆಗಲಿದ್ದು, ಶೇ. 100 ವಿದ್ಯಾರ್ಥಿಗಳಿಗೆ ಪ್ರವೇಶ ನೀಡಿದಂತಾಗಲಿದೆ ಎಂದು ವಿವರಿಸಿದ್ದಾರೆ.

Eight lakh students receive scholarships Minister Zameer Ahmed Khan

ನಿರ್ದೇಶನಾಲಯಕ್ಕೆ ಪ್ರಸಕ್ತ ವರ್ಷ 2292 ಕೋಟಿ ರೂ. ನಿಗದಿಯಾಗಿ 1941 ಕೋಟಿ ರೂ. ಬಿಡುಗಡೆಯಗಿದ್ದು ಅದರಲ್ಲಿ 1608 ಕೋಟಿ ರೂ. ವೆಚ್ಚ ಮಾಡಲಾಗಿದ್ದು ಶೇ. 83 ರಷ್ಟು ಖರ್ಚು ಮಾಡಲಾಗಿದೆ ಎಂದು ಹೇಳಿದ್ದಾರೆ.

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ವತಿಯಿಂದ 7500 ವಿದ್ಯಾರ್ಥಿಗಳಿಗೆ ಅರಿವು ಯೋಜನೆ ಹಾಗೂ ವಿದೇಶಿ ವಿದ್ಯಾಭ್ಯಾಸ ನೆರವು ಯೋಜನೆಯಡಿಯಲ್ಲಿ 92.50 ಕೋಟಿ ರೂ. ಸಾಲ ವಿತರಿಸಲಾಗಿದೆ ಎಂದು ತಿಳಿಸಿದ್ದಾರೆ. ಇದೇ ರೀತಿ ವಖ್ಫ್ ಬೋರ್ಡ್ ಗೆ 157 ಕೋಟಿ ರೂ. ಅನುದಾನ ಬಿಡುಗಡೆ ಯಾಗಿದ್ದು 125 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಹೇಳಿದರು.

ಬಜೆಟ್ ಪೂರ್ವ ಬಾವಿ ಸಭೆ ನಡೆಸಿದ ಜಮೀರ್

ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಅವರು ಬಜೆಟ್ ಪೂರ್ವಬಾವಿಯಾಗಿ ಕ್ರೈಸ್ತ, ಸಿಖ್, ಬೌದ್ಧ ಹಾಗೂ ಜೈನ ಸಮುದಾಯದ ಮುಖಂಡರ ಜತೆ ಸಭೆ ನಡೆಸಿದರು. ಕ್ರೈಸ್ತ ಸಮುದಾಯದ ಅಭಿವೃದ್ಧಿಗೆ ನಿಗಮ ಸ್ಥಾಪನೆ ಮಾಡಿರುವಂತೆ ಜೈನ, ಬೌದ್ಧ ಹಾಗೂ ಸಿಖ್ ಸಮುದಾಯದ ಅಭಿವೃದ್ಧಿಗೆ ನಿಗಮ ಅಥವಾ ಮಂಡಳಿ ಸ್ಥಾಪನೆ ಮಾಡುವಂತೆ ಸಮುದಾಯದ ಮುಖಂಡರು ಮನವಿ ಮಾಡಿದರು.
ಜತೆಗೆ ಬಜೆಟ್ ನಲ್ಲಿ ಸಮುದಾಯದ ಅಭಿವೃದ್ಧಿಗೆ ಹೆಚ್ಚು ಅನುದಾನ ನೀಡುವಂತೆ ಮನವಿ ಸಲ್ಲಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಸಚಿವ ಜಮೀರ್ ಅಹಮದ್ ಖಾನ್, ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಎಲ್ಲ ಅಲ್ಪಸಂಖ್ಯಾತ ಸಮುದಾಯದ ಅಭಿವೃದ್ಧಿಗೆ ಬದ್ಧ ವಾಗಿದೆ. ಮುಖ್ಯಮಂತ್ರಿ ಯವರ ಜತೆ ಚರ್ಚಿಸಿ ನಿಮ್ಮ ಬೇಡಿಕೆಗೆ ಸ್ಪಂದಿಸಲಾಗುವುದು. ಈ ಬಾರಿಯ ಬಜೆಟ್ ನಲ್ಲಿ ಹೆಚ್ಚು ಅನುದಾನ ಕ್ಕೆ ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು ಭರವಸೆ ನೀಡಿದರು. ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ನಿಸಾರ್ ಅಹಮದ್, ಇಲಾಖೆ ಕಾರ್ಯದರ್ಶಿ ಮನೋಜ್ ಜೈನ್, ನಿರ್ದೇಶಕ ಜಿಲಾನಿ ಮೊಕಾಶಿ ಉಪಸ್ಥಿತರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+