ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ ವಿವಿಗಳ ಕಾಯ್ದೆ ತಿದ್ದುಪಡಿಗೆ ಸಂಪುಟ ಅನುಮೋದನೆ: ಅಶ್ವತ್ಥ್ ನಾರಾಯಣ

|
Google Oneindia Kannada News

ಬೆಂಗಳೂರುಆ. 25: ರಾಜ್ಯದಲ್ಲಿ ನೂತನವಾಗಿ ಎಂಟು ವಿಶ್ವ ವಿದ್ಯಾಲಯಗಳ ಸ್ಥಾಪನೆಗೆ ಅನುವು ಮಾಡಿಕೊಡುವ ಉದ್ದೇಶದಿಂದ 'ಕರ್ನಾಟಕ ವಿವಿಗಳ ಕಾಯ್ದೆ-2000'ಕ್ಕೆ ತಿದ್ದುಪಡಿ ತರಲು ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ ಎನ್ ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು, ಇದರಿಂದಾಗಿ ಚಾಮರಾಜನಗರ, ಹಾವೇರಿ, ಹಾಸನ, ಕೊಡಗು, ಕೊಪ್ಪಳ, ಬಾಗಲಕೋಟೆ, ಬೀದರ್ ಮತ್ತು ಮಂಡ್ಯ ವಿ.ವಿ.ಗಳ ಸ್ಥಾಪನೆ ಸುಗಮವಾಗಲಿದೆ ನಡೆಯಲಿದೆ. ಇದಕ್ಕಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದಿದ್ದಾರೆ.

ತೆಲಂಗಾಣ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ ಅಮಿತ್ ಶಾ-ಜೂನಿಯರ್ ಎನ್‌ಟಿಆರ್ ಭೇಟಿ ತೆಲಂಗಾಣ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ ಅಮಿತ್ ಶಾ-ಜೂನಿಯರ್ ಎನ್‌ಟಿಆರ್ ಭೇಟಿ

ಹೊಸ ವಿ.ವಿ.ಗಳ ಪೈಕಿ ಕ್ರಮವಾಗಿ ಚಾಮರಾಜನಗರ ವಿ.ವಿ.ಯಲ್ಲಿ 18, ಹಾಸನ ವಿ.ವಿ.ಯಲ್ಲಿ 36, ಹಾವೇರಿ 40, ಬೀದರ್ 140, ಕೊಡಗು 24, ಕೊಪ್ಪಳ 40 ಮತ್ತು ಬಾಗಲಕೋಟೆ ವಿವಿಗಳು 71 ಕಾಲೇಜುಗಳನ್ನು ಹೊಂದಿರಲಿವೆ. ಇವುಗಳ ಜತೆಗೆ ಮಂಡ್ಯ ವಿ.ವಿ. ವ್ಯಾಪ್ತಿಗೆ ಆ ಜಿಲ್ಲೆಯ ಪ್ರಥಮ ದರ್ಜೆ ಕಾಲೇಜುಗಳು ಬರಲಿವೆ ಸಚಿವರು ಸ್ಪಷ್ಪಡಿಸಿದರು.

Eight new University will start in Karnataka says Higher Education Minister Ashwanth Narayan

ಮಂಡ್ಯ ವಿವಿ ಒಂದನ್ನು ಹೊರತುಪಡಿಸಿ ಮಿಕ್ಕ 7 ವಿ.ವಿ.ಗಳ ಆರಂಭವನ್ನು ಈ ವರ್ಷದ ಬಜೆಟ್‌ನಲ್ಲಿ ಘೋಷಿಸಲಾಗಿತ್ತು. ಇದಕ್ಕಾಗಿ ಈಗಾಗಲೇ ತಲಾ 2 ಕೋಟಿ ರೂ.ಗಳಂತೆ ಒಟ್ಟು 14 ಕೋಟಿ ರೂಪಾಯಿ ಒದಗಿಸಲಾಗಿದೆ. ಏಕೀಕೃತ ವಿವಿಯಾಗಿದ್ದ ಮಂಡ್ಯದ ಸರಕಾರಿ ಕಾಲೇಜನ್ನು ಪೂರ್ಣ ಪ್ರಮಾಣದ ವಿ.ವಿ.ಯಾಗಿ ಮಾಡುವ ತೀರ್ಮಾನವನ್ನು ಇತ್ತೀಚೆಗೆ ಕೈಗೊಳ್ಳಲಾಗಿತ್ತು ಎಂದು ಅವರು ವಿವರಿಸಿದರು.

ಜಿಲ್ಲೆಗೊಂದು ವಿವಿ ಇರಬೇಕು ಎನ್ನುವುದು ಸರಕಾರದ ತೀರ್ಮಾನವಾಗಿದೆ. ಈ ಮೂಲಕ ಶೈಕ್ಷಣಿಕ ಅಸಮತೋಲನ ನಿವಾರಣೆ ಮಾಡಲಾಗುವುದು. ಜೊತೆಗೆ, ಯುವಜನರಿಗೆ ಮನೆ ಬಾಗಿಲಲ್ಲೇ ಗುಣಮಟ್ಟದ ಶಿಕ್ಷಣ ನೀಡುವ ಸದಾಶಯ ಇದರ ಹಿಂದಿದೆ ಎಂದು ಸಚಿವರು ಹೇಳಿದರು.

Eight new University will start in Karnataka says Higher Education Minister Ashwanth Narayan

ನೂತನ ವಿ.ವಿ.ಗಳ ಸ್ಥಾಪನೆಗೆ ಆರ್ಥಿಕ ಮತ್ತು ಯೋಜನಾ ಇಲಾಖೆಗಳು ಒಪ್ಪಿಗೆ ನೀಡಿವೆ. ಇವು ಕಡಿಮೆ ಸ್ಥಳ, ಕಡಿಮೆ ಸಿಬ್ಬಂದಿ ಮತ್ತು ಕಡಿಮೆ ವೆಚ್ಚದೊಂದಿಗೆ ಕಾರ್ಯ ಚಟುವಟಿಕೆ ನಡೆಸಲಿವೆ ಎಂದು ಅವರು ಹೇಳಿದರು.

English summary
State Cabinet approved to the Amendment of Karnataka University act 2000 says Higher Education Minister CN Ashwanth Narayana know more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X