ಬಸ್-ಲಾರಿ ಡಿಕ್ಕಿ: 13 ಜನರ ದಾರುಣ ಸಾವು
ಮುಳುಬಾಗಿಲು, ಸೆ. 8: ತಾಲೂಕಿನ ಕೊಪ್ಪಲಮಡಗು ಎಂಬಲ್ಲಿ ಮರಳು ಸಾಗಾಟದ ಲಾರಿ ಮತ್ತು ಕೆಎಸ್‌ಆರ್‌ಟಿಸಿ ಬಸ್ ನಡುವೆ ಸೋಮವಾರ ಮಧ್ಯಾಹ್ನ ಮುಖಾಮುಖಿ ಡಿಕ್ಕಿ ಸಂಭವಿಸಿ ಬಸ್ಸಿನಲ್ಲಿದ್ದ 13 ಜನರು ದಾರುಣವಾಗಿ ಮೃತಪಟ್ಟಿದ್ದಾರೆ.
ಡಿಕ್ಕಿ ರಭಸಕ್ಕೆ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉಳಿದ ಎಂಟು ಜನರನ್ನು ಆಸ್ಪತ್ರಗೆ ದಾಖಲಿಸಿದ್ದರೂ ಪ್ರಯೋಜನವಾಗಲಿಲ್ಲ.(ಕಂಬಾಲಪಲ್ಲಿ ಪ್ರಕರಣ: ಎಲ್ಲಾ 32 ಆರೋಪಿಗಳು ಖುಲಾಸೆ)

ಬೆಂಗಳೂರಿನಿಂದ ತಿರುಪತಿಗೆ ಸಂಚರಿಸುತ್ತಿದ್ದ ಬಸ್‌ಗೆ ಮುಳಬಾಗಿಲು ಬಳಿ ಮರಳು ಲಾರಿ ಡಿಕ್ಕಿಯಾಗಿದೆ. ಬಸ್‌ನಲ್ಲಿದ್ದ ಉಳಿದ ಪ್ರಯಾಣಿಕರಿಗೂ ಸಣ್ಣ ಪುಟ್ಟ ಗಾಯಗಳಾಗಿವೆ. ಮುಳಬಾಗಿಲು ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗಾಯಾಳುಗಳನ್ನು ಮುಳುಬಾಗಿಲು ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಾಲಕ ಮತ್ತು ನಿರ್ವಾಹಕರ ಕುರಿತು ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.












Click it and Unblock the Notifications