ಕಾಫಿನಾಡಲ್ಲಿ ಚಿಪ್ಪು ಹಂದಿ ಪತ್ತೆ, ಬೇಟೆಯಾಡಲು ಹೋದವರು ಪೊಲೀಸರ ಬಲೆಗೆ
ಚಿಕ್ಕಮಗಳೂರು, ಸೆಪ್ಟೆಂಬರ್.07: ಕಾಫಿನಾಡಿನ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಹದಿನೆಂಟುವರೆ ಕೆ.ಜಿ.ತೂಕದ ಚಿಪ್ಪು ಹಂದಿ ಪತ್ತೆಯಾಗಿದೆ.
ಸುಮಾರು ಎರಡರಿಂದ ಮೂರು ಲಕ್ಷ ಬೆಲೆಬಾಳುವ ಈ ಚಿಪ್ಪು ಹಂದಿ ಪತ್ತೆಯಾದ ಬೆನ್ನಲ್ಲೇ ಬೇಟೆಯಾಡಿ ಬೇರೆಡೆ ಸಾಗಿಸಲು ಹೊಂಚು ಹಾಕುತ್ತಿದ್ದ ಇಬ್ಬರಲ್ಲಿ ಓರ್ವ ಆರೋಪಿಯನ್ನು ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಅರಣ್ಯ ಸಿಬ್ಬಂದಿಗಳು ಬಂಧಿಸಿದ್ದಾರೆ.
ಹಲಸೂರು ಮೀಸಲು ಅರಣ್ಯದಲ್ಲಿ ಪ್ರದೀಪ್ ಹಾಗೂ ಪ್ರಕಾಶ್ ಎಂಬ ಇಬ್ಬರು ಯುವಕರು ಚಿಪ್ಪು ಹಂದಿಯನ್ನು ಬೇಟೆಯಾಡಿದರು. ಬೇಟೆಯ ಬಳಿಕ ಹಂದಿಯನ್ನು ಬೇರೆಡೆ ಸಾಗಿಸಲು ಹೊಂಚು ಹಾಕುತ್ತಿದ್ದರು.

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಬಾಳೆಹೊನ್ನೂರು ಎ.ಸಿ.ಎಫ್ ಲೋಹಿತ್ ಕುಮಾರ್, ಆರ್.ಎಫ್.ಓ ತನುಜಕುಮಾರ್ ಹಾಗೂ ಡಿ.ಆರ್.ಎಫ್.ಓ ಸುಂದ್ರೇಶ್ ಪ್ರದೀಪ್ ಎಂಬಾತನನ್ನು ಬಂಧಿಸಿ ಚಿಪ್ಪು ಹಂದಿಯನ್ನು ರಕ್ಷಿಸಿದ್ದಾರೆ.
ಆದ್ರೆ, ಮತ್ತೋರ್ವ ಆರೋಪಿ ಪ್ರಕಾಶ್ ನಾಪತ್ತೆಯಾಗಿದ್ದು, ಅರಣ್ಯಾಧಿಕಾರಿಗಳು ಪ್ರಕಾಶ್ ಗಾಗಿ ಬಲೆ ಬೀಸಿದ್ದಾರೆ. ಈ ಚಿಪ್ಪು ಹಂದಿಗೆ ವಿದೇಶದಲ್ಲಿ ಭಾರೀ ಬೇಡಿಕೆ ಇದೆ.












Click it and Unblock the Notifications