ವೃದ್ಧ ದಂಪತಿಗೆ ನಗ್ನ ‌ಚಿತ್ರಗಳಿವೆ ಎಂದು‌ ಬೆದರಿಕೆ- ಹೆದರಿ ಆತ್ಮಹತ್ಯೆಗೆ ಶರಣಾದ ಇಳಿ ಜೀವಗಳು

ಬೆಳಗಾವಿ, ಮಾರ್ಚ್‌ 29: ವಿಡಿಯೋ ಕಾಲ್‌ ಮಾಡಿ ನಗ್ನ ಚಿತ್ರಗಳಿವೆ ಎಂದು ಸೈಬರ್‌ ವಂಚಕರ ಬೆದರಿಕೆಗೆ ಹೆದರಿ ವೃದ್ಧ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ ನಡೆದಿದೆ. ನಿವೃತ್ತ ರೈಲೈ ಉದ್ಯೋಗಿ ಡಿಯಾಗೋ ನಜರತ್‌(83), ಪಾವಿಯಾ ನಜರತ್‌(79) ಆತ್ಯಹತ್ಯ ಮಾಡಿಕೊಂಡ ದಂಪತಿ ಎಂದು ಗುರುತಿಸಲಾಗಿದೆ.

ಸೈಬರ್ ವಂಚಕರ ಕಾಟ ತಾಳಲಾರದೇ ಬೀಡಿ ಗ್ರಾಮದಲ್ಲಿ ವೃದ್ಧ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ಗೊತ್ತಾಗಿದೆ. ಪತ್ನಿ ಗುರುವಾರ ರಾತ್ರಿ ನಿದ್ರೆ ಮಾತ್ರೆ ಸೇವಿಸಿದ್ದರೆ, ಪತಿ ಚಾಕುವಿನಿಂದ ತಮ್ಮ ಕುತ್ತಿಗೆಗೆ ಚುಚ್ಚಿ ಕೊಂಡು, ಮನೆಯ ಹಿಂದಿನ ನೀರಿನ ತೊಟ್ಟಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Elderly couple die by suicide over alleged harassment by cyber fraudsters in Karnataka

ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ್ ಗುಳೇದ್ ಅವರು ಈ ಕುರಿತು ಮಾತನಾಡಿ, ಸೈಬರ್ ವಂಚಕರಿಂದ ಬೆದರಿಕೆ ಕರೆಗಳು ಬಂದ ನಂತರ ದಂಪತಿಗಳು 50 ಲಕ್ಷ ರೂ.ಗಳಿಗೂ ಹೆಚ್ಚು ಹಣವನ್ನು ವರ್ಗಾಯಿಸಿದ್ದರು. ನಂತರ ಸೈಬರ್ ವಂಚಕ ಕಿರುಕುಳ ನಿರಂತರವಾಗಿ ಮುಂದುವರಿದಾಗ ತಮ್ಮ ಜೀವನವನ್ನು ಕೊನೆಗೊಳಿಸಲು ನಿರ್ಧರಿಸಿದ್ದಾರೆ ಎಂದು ತಿಳಿಸಿದ್ದಾರೆ. ಪಾವಿಯಾ ಅವರ ಮನೆಯೊಳಗೆ ಶವವಾಗಿ ಬಿದ್ದಿರುವುದು ಕಂಡುಬಂದರೆ, ಡಿಯಾಗೋ ಅವರ ಮನೆಯ ನೀರಿನ ಟ್ಯಾಂಕ್‌ನಲ್ಲಿ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಶವಗಳನ್ನು ಕಂಡ ತಕ್ಷಣ, ಅವರ ನೆರೆಹೊರೆಯವರು ನಂದಗಡ ಪೊಲೀಸರಿಗೆ ಮಾಹಿತಿ ನೀಡಿದರು ಮತ್ತು ಶವಗಳನ್ನು ಖಾನಾಪುರದ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು.

ಸೈಬರ್ ವಂಚಕರ ಕಾಟ ತಾಳದೇ ಸಾಯು ತ್ತಿರುವುದಾಗಿ ಡಿಯಾಗೋ ಬರೆದಿಟ್ಟ 'ಡೆತ್‌ನೋಟ್' ಪೊಲೀಸರಿಗೆ ಸಿಕ್ಕಿದೆ. ಡಿಯಾಗೋ ಅವರು ಮಹಾರಾಷ್ಟ್ರದಲ್ಲಿ ಬಿಎಸ್‌ಎನ್‌ಎಲ್ ಸಂಸ್ಥೆಯ ಹಿರಿಯ ಅಧಿಕಾರಿಯಾಗಿ, ಮಹಾರಾಷ್ಟ್ರ ಸಚಿವಾಲಯದಲ್ಲಿ ಕರ್ತವ್ಯ ನಿರ್ವಹಿಸಿ, ನಿವೃತ್ತರಾಗಿದ್ದರು. ನಿವೃತ್ತಿ ಬಳಿಕ ಡಿಯಾಗೋ ಅವರು ಪತ್ನಿ ಜೊತೆ ತಮ್ಮ ಮೂಲ ಊರಾದ ಬೀಡಿಯಲ್ಲಿ ವಾಸಿಸುತ್ತಿದ್ದರು. ಅವರಿಗೆ ಮಕ್ಕಳಿರಲಿಲ್ಲ. ಸಮಾಜ ಸೇವೆಯಲ್ಲಿ ತೊಡಗಿಕೊಂಡಿದ್ದರು. ಕೆಲ ವಿದ್ಯಾರ್ಥಿ ಗಳಿಗೆ ಎಂಬಿಬಿಎಸ್ ಶುಲ್ಕ ಕಟ್ಟಿ ಶಿಕ್ಷಣಕ್ಕೆ ನೆರವಾಗಿದ್ದರು ಎಂದು ಡಿಯಾಗೋ ಕುಟುಂಬದವರು ತಿಳಿಸಿದ್ದಾರೆ.

ಇನ್ನೂ ಈ ವೃದ್ಧ ದಂಪತಿಗಳು ಸಮಾಜಸೇವೆಗೆ ಹಣ ಖರ್ಚು ಮಾಡುತ್ತಿರುವುದನ್ನು ಗಮನಿಸಿದ ಸೈಬರ್ ವಂಚಕರು, ದೆಹಲಿಯಿಂದ ವಿಡಿಯೊ ಕಾಲ್ ಮೂಲಕ ಬೆದರಿಕೆ ಒಡ್ಡುತ್ತಿದ್ದರು. ಅಲ್ಲದೇ 50 ಲಕ್ಷ ಪಡೆದರೂ ಕಿರುಕುಳ ನಿಲ್ಲಿಸಿರಲಿಲ್ಲ ಎಂದು ಮೂಲಗಳು ತಿಳಿಸಿವೆ.

ದೆಹಲಿಯಲ್ಲಿ ಉನ್ನತ ಹುದ್ದೆಯಲ್ಲಿ ಇರುವುದಾಗಿ ಹೇಳಿಕೊಂಡ ವ್ಯಕ್ತಿಯೊಬ್ಬರು ನಮಗೆ ಪದೇಪದೇ ಬೆದರಿಕೆ ಹಾಕಿದ್ದಾರೆ. ನನ್ನ ಸಿಮ್‌ಾರ್ಡ್ ದುರ್ಬಳಕೆ ಮಾಡಿಕೊಂಡಿದ್ದಾರೆ. ಅನಿಲ್ ಯಾದವ್ ಎಂಬ ವ್ಯಕ್ತಿ ಕರೆ ಮಾಡಿ, ನಿಮ್ಮ ನಂಬರಿನಿಂದ ನನಗೆ ಬೆತ್ತಲೆ ಚಿತ್ರಗಳು, ಅಶ್ಲೀಲ ಸಂದೇಶಗಳು ರವಾನೆಯಾಗಿವೆ. ನಿಮ್ಮ ವಿರುದ್ಧ ಸೈಬ‌ರ್ ಸೆಲ್‌ಗೆ ದೂರು ನೀಡಿದ್ದೇನೆ ಎಂದು ಹೇಳಿದ್ದರು ಎಂದು ಡಿಯಾಗೋ ಅವರು ಇಂಗ್ಲಿಷ್‌ನಲ್ಲಿ ಡೆತ್‌ನೋಟ್ ಬರೆದಿಟ್ಟಿದ್ದಾರೆ.

ಬಳಿಕ ಸುಮಿತ ಬಿಸ್ರಾ ಹೆಸರಿನ ವ್ಯಕ್ತಿ ಕರೆ ಮಾಡಿ ಅನಿಲ ಅವರ ದೂರಿನ ಮೇಲೆ ನಿಮ್ಮ ಮೇಲೆ ಪ್ರಕರಣ ದಾಖಲಾಗಿದ್ದು, ನಿಮ್ಮನ್ನು ಡಿಜಿಟಲ್ ಅರೆಸ್ಟ್ ಮಾಡುತ್ತೇನೆ ಎಂದು ಬೆದರಿಸಿದರು. ಹಣ ನೀಡದೇ ಇದ್ದರೆ ನಿಮ್ಮ ಸಂದೇಶ ಹಾಗೂ ಫೋಟೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಮಾಡುವುದಾಗಿ ಹೇಳಿದ್ದರು. ಹಣ ಪಡೆದರೂ ಕಿರುಕುಳ ನಿಲ್ಲಿಸಿಲ್ಲ. ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ. ನಮ್ಮ ದೇಹಗಳನ್ನು ವೈದ್ಯ ವಿದ್ಯಾರ್ಥಿಗಳ ಅಧ್ಯಯನಕ್ಕೆ ದಾನ ನೀಡಿ ಎಂದೂ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+