Code of Conduct: ಸರ್ಕಾರಿ ಕಾರ್ಯಕ್ರಮಗಳನ್ನು ರದ್ದು ಮಾಡಿದ ಬಸವರಾಜ ಬೊಮ್ಮಾಯಿ
ಕರ್ನಾಟಕ, ಮಾರ್ಚ್, 29: ಕೇಂದ್ರ ಚುನಾವಣಾ ಆಯೋಗವು ಬುಧಾವಾರ (ಮಾರ್ಚ್ 29) ಬೆಳಗ್ಗೆ 11:30ಕ್ಕೆ ಕರ್ನಾಟಕ ವಿಧಾನಸಭೆಗೆ ನಡೆಯಲಿರುವ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಲಿದೆ.
ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಹಾಗೂ ಎಎಪಿ ಪಕ್ಷಗಳು ಕರ್ನಾಟಕ ಚುನಾವಣಾ ಅಖಾಡಕ್ಕೆ ಸಿದ್ಧತೆ ನಡೆಸುತ್ತಿದೆ. ಮತ್ತೊಂದೆಡೆ ಇಂದಿನಿಂದಲೇ ನೀತಿಸಂಹಿತೆ ಜಾರಿಯಾಗುವ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿಯವರ ಸರ್ಕಾರಿ ಕಾರ್ಯಕ್ರಮಗಳು ರದ್ದಾಗಿವೆ.

ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗುವ ಹಿನ್ನೆಲೆಯಲ್ಲಿ ಸಿಎಂ ಬೊಮ್ಮಾಯಿಯವರು ಕೊಪ್ಪಳ ಹಾಗೂ ತವರು ಕ್ಷೇತ್ರದಲ್ಲಿ ವಿವಿಧ ಕಾರ್ಯಕ್ರಮಗಳನ್ನು ರದ್ದುಪಡಿಸಿದ್ದಾರೆ. ಕೊಪ್ಪಳ ಜಿಲ್ಲೆಯಲ್ಲಿ ನೀರಾವರಿ ಯೋಜನೆಗೆ ಚಾಲನೆ ನೀಡಲು ಕಾರ್ಯಕ್ರಮ ನಿಗಧಿಯಾಗಿತ್ತು.
ಹಾಗೆಯೇ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಚಾಲನೆ ಹಾಗೂ ಶಿಗ್ಗಾಂವಿ, ರಾಣೆಬೆನ್ನೂರಿನಲ್ಲಿ ನಡೆಯಬೇಕಿದ್ದ ಕಾರ್ಯಕ್ರಮಗಳನ್ನು ಕೂಡ ರದ್ದುಪಡಿಸಿದ್ದಾರೆ.
ರಾಜ್ಯ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಗೆ ಕೆಲವೇ ಕ್ಷಣಗಳು ಬಾಕಿಯಿರುವಾಗಲೇ ಖಾಸಗಿ ಗದಗದಲ್ಲಿ ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ದೇಗುಲ ಮಹಾದ್ವಾರದ ಉದ್ಘಾಟನೆಯನ್ನು ಮಾಡಿದ್ದಾರೆ. ಗದಗದ ಚೇತನಾ ಕ್ಯಾಂಟೀನ್ ಸರ್ಕಲ್ನಲ್ಲಿ ಇರುವ ಶ್ರೀ ಕ್ಷೇತ್ರ ಕೈಲಾಸ ವರಸಿದ್ಧಿ ಗಣಪತಿ ದೇವಸ್ಥಾನದ ಮಹಾದ್ವಾರವನ್ನು ಸಿ.ಸಿ.ಪಾಟೀಲ್ ಅವರು ಉದ್ಘಾಟನೆ ಮಾಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಚುನಾವಣಾ ದಿನಾಂಕವನ್ನು ಘೋಷಣೆ ಮಾಡುವ ಸಂಬಂಧ ಪತ್ರಿಕಾಗೋಷ್ಠಿಯನ್ನು ಬುಧವಾರ (ಮಾ 29) ಬೆಳಗ್ಗೆ 11.30ಕ್ಕೆ ವಿಜ್ಞಾನಭವನದಲ್ಲಿ ಕರೆದಿದ್ದರು. ಎಲ್ಲಾ ಕ್ಷೇತ್ರಗಳ ಚುನಾವಣೆ ಒಂದೇ ಹಂತದಲ್ಲಿ ನಡೆಯಲಿದೆ ಎಂದು ಘೋಷಿಸಿದರು.
ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ಪಕ್ಷವು ಈಗಾಗಲೇ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕಾಂಗ್ರೆಸ್ ಸಹ 124 ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಚುನಾವಣೆ ದಿನಾಂಕಗಳು ಪ್ರಕಟವಾದ ಬಳಿಕ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ತೀವ್ರ ಹಣಾಹಣಿಯಲ್ಲಿ ತೊಡಗಿವೆ. ಅರವಿಂದ ಕೇಜ್ರಿವಾಲರ ಎಎಪಿ ಪಕ್ಷವು ಈ ಬಾರಿಯ ಚುನಾವಣೆಯಲ್ಲಿ ಕಣಕ್ಕಿಳಿದಿರುವುದು ತೀವ್ರ ಕುತೂಹಲ ಕೆರಳಿಸಿದೆ. ಚುನಾವಣೆಗೆ ಕಾಂಗ್ರೆಸ್ ಸಂಪೂರ್ಣವಾಗಿ ಸಿದ್ಧತೆ ಮಾಡಿಕೊಂಡಿದೆ. ಈ ಸರ್ಕಾರವನ್ನು ಕೆಳಗಿಸಬೇಕೆಂದು ನಾವು ಬಯಸುತ್ತೇವೆ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
"ಈ ಚುನಾವಣೆಯು ಅಭಿವೃದ್ಧಿ ಆಧಾರಿತ ಮತ್ತು ಭ್ರಷ್ಟಾಚಾರ ಮುಕ್ತ ರಾಜ್ಯಕ್ಕಾಗಿ ನಡೆಯಲಿದೆ. ಭ್ರಷ್ಟಾಚಾರ ಉತ್ತುಂಗದಲ್ಲಿದೆ. ಪ್ರಧಾನಿ ಮೋದಿ ಅದನ್ನು ಪ್ರೋತ್ಸಾಹಿಸಿದ್ದಾರೆ. ಅವರು ತಮ್ಮ ಪಕ್ಷದ ನಾಯಕರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ" ಎಂದು ಆರೋಪಿಸಿದ್ದಾರೆ.
2023ರ ಕರ್ನಾಟಕ ಚುನಾವಣೆಯಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಮಂಗಳವಾರ ಮಾತನಾಡಿದ ಅವರು, 'ಚುನಾವಣೆಗೆ ಪಕ್ಷ ಮತ್ತು ಸರಕಾರ ಸಂಪೂರ್ಣ ಸಿದ್ಧವಾಗಿದೆ. ಈಗಾಗಲೇ ಸಿದ್ಧತೆಗಳು ನಡೆಯುತ್ತಿವೆ. ECI ದಿನಾಂಕಗಳನ್ನು ಪ್ರಕಟಿಸಲು ನಾವು ಕಾಯುತ್ತಿದ್ದೇವೆ. ನಾವು ಭಾರಿ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರುವುದು ಖಚಿತ" ಎಂದಿದ್ದಾರೆ.
ಏಪ್ರಿಲ್ 5 ರಂದು ಕೋಲಾರದಲ್ಲಿ ರಾಹುಲ್ ಗಾಂಧಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇದೇ ಸ್ಥಳದಲ್ಲಿ ಅವರು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದು, ಇದಕ್ಕಾಗಿ ಅವರು ಕ್ರಿಮಿನಲ್ ಮಾನನಷ್ಟದ ಆರೋಪದಲ್ಲಿ ಶಿಕ್ಷೆಗೊಳಗಾಗಿದ್ದಾರೆ ಮತ್ತು ಲೋಕಸಭೆಯ ಸದಸ್ಯತ್ವವನ್ನು ಕಳೆದುಕೊಂಡಿದ್ದಾರೆ.
ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬಿಜೆಪಿ ಸರ್ಕಾರವು ಮುಸ್ಲಿಂ ಸಮುದಾಯಕ್ಕೆ ಹಿಂದುಳಿದ ವರ್ಗದ ಅಡಿಯಲ್ಲಿ ನೀಡಲಾದ ಶೇ 4 ರಷ್ಟು ಮೀಸಲಾತಿಯನ್ನು ರದ್ದುಪಡಿಸಿದೆ. ಅದನ್ನು ಬ್ರಾಹ್ಮಣರು, ಜೈನರು, ವೈಶ್ಯರು ಮತ್ತು ಆರ್ಥಿಕವಾಗಿ ದುರ್ಬಲ ವರ್ಗದ (EWS) ಜನರಿಗೆ ಹಂಚಲು ಶಿಪಾರಸು ಮಾಡಿದೆ.
ಕರ್ನಾಟಕದಲ್ಲಿ 51 ಮೀಸಲು ಸ್ಥಾನಗಳು ರಾಜಕೀಯವಾಗಿ ಮಹತ್ವದ್ದಾಗಿವೆ. ಹೆಚ್ಚು ಮೀಸಲು ಸ್ಥಾನಗಳನ್ನು ಪಡೆದ ಪಕ್ಷಗಳು ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿವೆ ಎಂದು ರಾಜಕೀಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
51 ಮೀಸಲು ಸ್ಥಾನಗಳಲ್ಲಿ 15 ಪರಿಶಿಷ್ಟ ಪಂಗಡಗಳಿಗೆ (ಎಸ್‌ಟಿ) ಮತ್ತು 36 ಪರಿಶಿಷ್ಟ ಜಾತಿಗಳಿಗೆ (ಎಸ್‌ಸಿ) ಮೀಸಲಾಗಿದೆ. 2008, 2013 ಮತ್ತು 2018ರ ಚುನಾವಣೆಯಲ್ಲಿ ಜೆಡಿಎಸ್‌ಗೆ ಮೀಸಲಾದ ಹೆಚ್ಚಿನ ಸ್ಥಾನಗಳು ಬಂದಿಲ್ಲ. ಈ 51 ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೆಕ್ ಟು ನೆಕ್ ಪೈಪೋಟಿ ಏರ್ಪಟ್ಟಿದೆ.
-
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ












Click it and Unblock the Notifications