ಡೇರಿ ಉದ್ಘಾಟಿಸದೆ ವೀಕ್ಷಿಸಿ ಹಿಂದಿರುಗಿದ ಸಿದ್ದರಾಮಯ್ಯ

Posted By: Nayana
Subscribe to Oneindia Kannada
   Karnataka Elections 2018 : ಸಿದ್ದರಾಮಯ್ಯಗೆ ನೀತಿ ಸಂಹಿತೆ ಜಾರಿಯ ಎಫೆಕ್ಟ್ | Oneindia Kannada

   ಚಿಕ್ಕಬಳ್ಳಾಪುರ, ಮಾರ್ಚ್ 27: ಡೇರಿ ಉದ್ಘಾಟನೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿಕ್ಕಬಳ್ಳಾಪುರಕ್ಕೆ ತೆರಳಿದ್ದರು. ಕೇಂದ್ರ ಚುನಾವಣಾ ಆಯೋಗ ರಾಜ್ಯ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟಿಸುತ್ತಿದ್ದಂತೆ ಉದ್ಘಾಟಿಸದೆ ವೀಕ್ಷಿಸಿ ವಾಪಸಾದರು.

   ಚುನಾವಣಾ ನೀತಿ ಸಂಹಿತೆ ಇಂದಿನಿಂದ ಜಾರಿಯಾಗಿರುವ ಪರಿಣಾಮ ಸಿದ್ದರಾಮಯ್ಯ ಅವರು ಕಾರ್ಯಕ್ರಮ ಉದ್ಘಾಟಿಸದೆ ಸರ್ಕಾರಿ ಕಾರು ಬಿಟ್ಟು ಖಾಸಗಿ ಕಾರಿನಲ್ಲಿ ತೆರಳಿದರು. ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಕ್ರಾಸ್ ಬಳಿ ಸುಮಾರು 160 ಕೋಟಿ ರೂ. ವೆಚ್ಚದಲ್ಲಿ ಮೆಗಾ ಡೇರಿ ನಿರ್ಮಾಣಮಾಡಲಾಗಿದೆ.

   ಕರ್ನಾಟಕ ವಿಧಾನಸಭೆ ಚುನಾವಣೆಯ ಮುಖ್ಯ ದಿನಾಂಕಗಳು

   ಇಂದು ಡೇರಿಯ ಉದ್ಘಾಟನಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆದರೆ ಅಷ್ಟರೊಳಗೆ ಚುನಾವಣಾ ದಿನಾಂಕ ಪ್ರಕಟವಾದ ಹಿನ್ನೆಲೆಯಲ್ಲಿ ತಕ್ಷಣದಿಂದ ನೀತಿ ಸಂಹಿತೆ ಜಾರಿಗೆ ಬಂದಿದೆ.

   Election code of conduct effects to opening ceremony of dairy

   ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಮೆಗಾ ಡೈರಿ ಉದ್ಘಾಟಿಸಿದೆ ಕಾರ್ಯಕ್ರಮ ವೀಕ್ಷಿಸಿ ಅಲ್ಲಿಂದ ತೆರಳಿದರು. ಈ ಸಂದರ್ಭದಲ್ಲಿ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ ಬಿಜೆಪಿಯವರಿಗೆ ಸೋಲು ಎಂಬುದು ಖಾತ್ರಿಯಾಗಿದೆ.

   ಹಾಗಾಗಿ ಅವರು ಹತಾಶರಾಗಿ ಮಾತನಾಡುತ್ತಿದ್ದಾರೆ. ನಾವು ಸ್ವತಂತ್ರವಾಗಿ ಸ್ಪರ್ಧಿಸುತ್ತಿದ್ದೇವೆ. ಜೆಡಿಎಸ್​ನವರೂ ಸ್ವತಂತ್ರವಾಗಿ ಸ್ಪರ್ಧಿಸುತ್ತಿದ್ದಾರೆ. ಆದರೆ, ಜೆಡಿಎಸ್​ನವರು ಬಿಜೆಪಿಯೊಂದಿಗೆ ಸಂಬಂಧವಿರಿಸಿಕೊಂಡಿದ್ದಾರೆ. ಈ ಬಾರಿ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

   ಚುನಾವಣೆ ನೀತಿ ಸಂಹಿತೆ ಅಂದರೇನು? ಏನು ಮಾಡಬಹುದು, ಏನು ಮಾಡಬಾರದು?

   ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

   English summary
   Chief minister Siddaramaiah was in chickballapur for opening ceremony of Mega dairy. Due to election code of conduct he cancelled the program and came back to Bengaluru.

   Oneindia ಬ್ರೇಕಿಂಗ್ ನ್ಯೂಸ್,
   ತಾಜಾ ಸುದ್ದಿ ತಕ್ಷಣವೇ ಪಡೆಯಿರಿ