7th Pay Commission; ಇಂದಿನಿಂದಲೇ ನೀತಿ ಸಂಹಿತೆ : ಸದ್ಯಕ್ಕಿಲ್ಲ 7ನೇ ವೇತನ ಆಯೋಗದ ವರದಿ ಜಾರಿ!
ಬೆಂಗಳೂರು, ಮಾರ್ಚ್ 16: ಲೋಕಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು( ಶನಿವಾರ) ಚುನಾವಣಾ ಆಯೋಗ ಮಹತ್ವದ ಸುದ್ದಿಗೋಷ್ಟಿಯನ್ನ ಕರೆಯಲಾಗಿದೆ. ಇಂದಿನಿಂದಲೇ ನೀತಿ ಸಂಹಿತೆ ಕೂಡ ಜಾರಿಯಾಗುತ್ತಿದೆ. ಈ ಹಿನ್ನೆಲೆ ವೇತನ ಆಯೋಗದ ವರದಿ ಸದ್ಯಕ್ಕೆ ಜಾರಿಯಾಗುವುದಿಲ್ಲ.
ಹೌದು, ರಾಜ್ಯ ಸರ್ಕಾರ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ ಮಾಡಿ ಆದೇಶಿಸಿದೆ. ಆದರೆ, ಸರ್ಕಾರ ನೌಕರರ ಬಹುದಿನಗಳ ಬೇಡಿಕೆಯಾದ ಏಳ ನೇ ವೇತನ ಆಯೋಗದ ವರದಿ ಮಾತ್ರ ಇನ್ನೂ ಜಾರಿಯಾಗಿಲ್ಲ. ನಿವೃತ್ತ ಮುಖ್ಯ ಕಾರ್ಯದರ್ಶಿಯಾಗಿದ್ದ ಕೆ. ಸುಧಾಕರ್ ನೇತೃತ್ವದಲ್ಲಿ ರಾಜ್ಯ 7ನೇ ವೇತನ ಆಯೋಗವನ್ನು ರಚನೆ ಮಾಡಿದೆ. ಈ 7 ನೇ ವೇತನ ಆಯೋಗದ ಅವಧಿ ಮಾರ್ಚ್ 15ಕ್ಕೆ ಅಂತ್ಯವಾಗುತ್ತಿದೆ. ಈ ಹಿಂದೆಯೇ ಆಯೋಗದ ಅವಧಿಯ್ನು ವಿಸ್ತರಿಸಿದ್ದ ಕಾರಣ ಮತ್ತೆ ವಿಸ್ತರಣೆ ಮಾಡಬಾರದು ಎಂಬ ದೊಡ್ಡ ಒತ್ತಡ ಸರ್ಕಾರದ ಮೇಲಿದ್ದು, ಇಂದು ಸರ್ಕಾರ ಈ ವರದಿಯನ್ನ ಸ್ವೀಕರಿಸಿದೆ.

ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ ರಾವ್ ಅಧ್ಯಕ್ಷತೆಯ ರಾಜ್ಯದ ಏಳನೇ ವೇತನ ಆಯೋಗವು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ವರದಿ ಸಲ್ಲಿಸಿತು. ಈ ವೇಳೆ ಆಯೋಗದ ಸದಸ್ಯರಾದ ಪಿ.ಬಿ. ರಾಮಮೂರ್ತಿ, ಶ್ರೀಕಾಂತ್ ವನಹಳ್ಳಿ , ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಕಾ ಡಾ.ಕೆ.ವಿ. ತ್ರಿಲೋಕಚಂದ್ರ, ಹಣಕಾಸು ಇಲಾಖೆ ಕಾರ್ಯದರ್ಶಿ ಡಾ. ಪಿ.ಸಿ. ಜಾಫರ್, ವೇತನ ಆಯೋಗದ ಸದಸ್ಯ ಕಾರ್ಯದರ್ಶಿ ಹೆಫ್ಸಿಬಾರಾಣಿ ಕೊರ್ಲಪಾಟಿ ಉಪಸ್ಥಿತರಿದ್ದರು.
ಏಳನೇ ವೇತನ ಆಯೋಗ ಜಾರಿ ಯಾವಾಗ?
2023ರ ಜೂನ್ ತಿಂಗಳಿನಲ್ಲಿಯೇ ವೇತನ ಆಯೋಗ ಪರಿಷ್ಕರಣೆ ಆಗಬೇಕಿತ್ತು. ಆದರೆ, ಆಯೋಗದ ಅವಧಿಯನ್ನು ವಿಸ್ತರಿಸುತ್ತಿದ್ದ ಕಾರಣ ಈಗ ಮತ್ತೆ ವಿಸ್ತರಣೆ ಮಾಡುವಂತಿಲ್ಲ ಎಂದು ಸರ್ಕಾರಿ ನೌಕರರು ಪಟ್ಟು ಹಿಡಿದಿರುವ ಹಿನ್ನೆಲೆ ಗುರುವಾರ ಸಿದ್ದರಾಮಯ್ಯ ಅವರನ್ನ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ ರಾವ್ ಭೇಟಿಯಾಗಿ ವರದಿ ಸಲ್ಲಿಸಿದ್ದಾರೆ. ಈ ವರದಿಯಲ್ಲಿ ಮೂಲವೇತನದ ಶೇಕಡ 27.5 ರಷ್ಟು ಹೆಚ್ಚಳ ಮಾಡಲು ಶಿಫಾರಸು ಮಾಡಿದೆ.

ವರದಿಯನ್ನು ಪರಿಶೀಲಿಸಿ ಸರ್ಕಾರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಈ ವರದಿ ಸಲ್ಲಿಕೆಯಾದ ತಕ್ಷಣವೇ ಅನುಷ್ಠಾನ ಆಗುವುದು ನಿಶ್ಚಿತ ಎನ್ನುವ ಮಾತುಗಳು ಕೇಳಿ ಬಂದಿತ್ತು. ಆದರೆ, ಶನಿವಾರವೇ ಲೋಕಸಭಾ ಚುನಾವಣೆ ಘೋಷಣೆಯಾಗುತ್ತಿರುವುದರಿಂದ ನೀತಿ ಸಂಹಿತೆ ಕೂಡ ಜಾರಿಯಾಗುತ್ತಿದೆ. ಈ ಹಿನ್ನೆಲೆ ವೇತನ ಆಯೋಗದ ವರದಿ ಸದ್ಯಕ್ಕೆ ಜಾರಿಯಾಗುವುದಿಲ್ಲ.
ಈ ಲೋಕಸಭಾ ಚುನಾವಣೆ ಬಳಿಕ ವೇತನ ಆಯೋಗದ ವರದಿಯನ್ನು ರಾಜ್ಯ ಸರ್ಕಾರ ಜಾರಿ ಮಾಡಬಹುದಾಗಿದೆ. ಆದರೆ, ಈ ವರ್ಷ ಪೂರ್ತಿ ಬೇರೆ ಬೇರೆ ಚುನಾವಣೆಗಳು ಬರುತ್ತಿರುವುದರಿಂದ ನೀತಿ ಸಂಹಿತೆಯೇ ಜಾಸ್ತಿ ಇರಲಿದೆ. ಆದ್ದರಿಂದ ಮುಂದಿನ ವರ್ಷವೇ ಅಂದರೆ, 2025 ರಂದೇ 7ನೇ ವೇತನ ಆಯೋಗದ ವರದಿ ಜಾರಿಯಾಗಬಹುದು ಎಂದು ಹೇಳಲಾಗುತ್ತಿದೆ.
ಸಿದ್ದರಾಮಯ್ಯಗೆ ಏಳನೇ ವೇತನ ಆಯೋಗ ವರದಿ ಸಲ್ಲಿಕೆ
ರಾಜ್ಯದ 7ನೇ ವೇತನ ಆಯೋಗವು ಇಂದು( ಶನಿವಾರ) ವರದಿಯನ್ನು ಸಲ್ಲಿಸಿದ್ದು ಮೂಲವೇತನದ ಶೇಕಡ 27.5 ರಷ್ಟು ಹೆಚ್ಚಳ ಮಾಡಲು ಶಿಫಾರಸು ಮಾಡಿದೆ. ವರದಿಯನ್ನು ಪರಿಶೀಲಿಸಿ ಸರ್ಕಾರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು
ಗುರುವಾರ ನಿವೃತ್ತ ಕಾರ್ಯದರ್ಶಿ ಮುಖ್ಯ ಕಾರ್ಯದರ್ಶಿ, ಕೆ ಸುಧಾಕರ ರಾವ್ ಅಧ್ಯಕ್ಷತೆಯ ಏಳನೇ ವೇತನ ಆಯೋಗದ ವರದಿ ಸ್ವೀಕರಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡುತ್ತಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ವೇತನ ಆಯೋಗದ ಅವಧಿಯನ್ನು ಮೂರು ತಿಂಗಳು ವಿಸ್ತರಿಸಲಾಗಿತ್ತು. ಈ ಅವಧಿಯು ಮಾರ್ಚ್ 15ರಂದು ಮುಕ್ತಾಯಗೊಂಡಿದೆ.
ನಿನ್ನೆ ನಾನು ಮೈಸೂರಿನಲ್ಲಿದ್ದ ಕಾರಣ ವರದಿ ಸ್ವೀಕರಿಸಲು ಸಾಧ್ಯವಾಗಿರಲಿಲ್ಲ. ಅದಕ್ಕಾಗಿ ಇಂದು ವರದಿಯನ್ನು ಸ್ವೀಕರಿಸಲಾಗಿದೆ. ವರದಿಯಲ್ಲಿ ಕನಿಷ್ಠ ಮೂಲವೇತನವನ್ನು 17000 ರೂ ಗಳಿಂದ 27 ಸಾವಿರ ರೂಗಳಿಗೆ ಹೆಚ್ಚಿಸುವಂತೆ ಶಿಫಾರಸು ಮಾಡಲಾಗಿದೆ. ಇದರೊಂದಿಗೆ ಇನ್ನೂ ಅನೇಕ ಶಿಫಾರಸುಗಳಿದ್ದು ವರದಿಯನ್ನು ಆರ್ಥಿಕ ಇಲಾಖೆಗೆ ನೀಡಲಾಗಿದೆ. ಆರ್ಥಿಕ ಇಲಾಖೆಯು ವರದಿಯನ್ನು ಕೂಲಂಕಷವಾಗಿ ಅಧ್ಯಯನ ಮಾಡಿದ ನಂತರ ನೀಡುವ ಸಲಹೆಗಳ ಆಧಾರದಲ್ಲಿ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ ಎಂದು ಸಿದ್ದರಾಮಯ್ಯ ಅವರು ತಿಳಿಸಿದರು.











Click it and Unblock the Notifications