ಕುಂದಗೋಳ, ಚಿಂಚೋಳಿ ಉಪ ಚುನಾವಣೆಗೆ ಆಯೋಗ ಸಿದ್ಧ

ಬೆಂಗಳೂರು, ಮೇ 03 : ಕುಂದಗೋಳ ಮತ್ತು ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಚುನಾವಣಾ ಆಯೋಗ ಸಿದ್ಧವಾಗಿದೆ. ಎರಡೂ ಕ್ಷೇತ್ರಗಳಲ್ಲಿ ಮೇ 19ರಂದು ಮತದಾನ ನಡೆಯುತ್ತಿದೆ. ಮೇ 23ರಂದು ಫಲಿತಾಂಶ ಪ್ರಕಟವಾಗಲಿದೆ.

ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಅವರು ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿದರು. ಚಿಂಚೋಳಿ ಮತ್ತು ಕುಂದಗೋಳ ಉಪ ಚುನಾವಣೆಯಲ್ಲಿ ಇವಿಎಂ ಮತ್ತು ವಿವಿಪ್ಯಾಟ್ ಬಳಸಲಾಗುತ್ತದೆ ಎಂದು ಹೇಳಿದರು.

ಕಲಬುರಗಿ ಜಿಲ್ಲೆಯ ಚಿಂಚೋಳಿಯಲ್ಲಿ ಒಟ್ಟು 27 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. 10 ಅಭ್ಯರ್ಥಿಗಳು ನಾಮಪತ್ರವನ್ನು ವಾಪಸ್ ಪಡೆದಿದ್ದು, 17 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ.

Election commission all set for Chincholi Kundgol by election

ಧಾರವಾಡ ಜಿಲ್ಲೆಯ ಕುಂದಗೋಳ ಕ್ಷೇತ್ರದಲ್ಲಿ 23 ಅಭ್ಯರ್ಥಿಗಳು ನಾಮಪತ್ರವನ್ನು ಸಲ್ಲಿಸಿದ್ದರು. 1 ನಾಮಪತ್ರ ತಿರಸ್ಕಾರವಾಗಿದೆ. 14 ಅಭ್ಯರ್ಥಿಗಳು ನಾಮಪತ್ರ ವಾಪಸ್ ಪಡೆದಿದ್ದಾರೆ. 8 ಅಭ್ಯರ್ಥಿಗಳು ಅಂತಿಮವಾಗಿ ಕಣದಲ್ಲಿ ಉಳಿದಿದ್ದಾರೆ.

ಮತದಾರರ ವಿವರ : ಕುಂದಗೋಳ ಕ್ಷೇತ್ರದಲ್ಲಿ 1,89,444 ಮತದಾರರು ಮತದಾನ ಮಾಡುವ ಹಕ್ಕು ಹೊಂದಿದ್ದಾರೆ. ಇವರಲ್ಲಿ 97,501 ಪುರುಷರು, 91,394 ಮಹಿಳೆಯರು, 5 ತೃತೀಯ ಲಿಂಗಿಗಳು. ಒಟ್ಟು ಮತಗಟ್ಟೆ 214.

ಚಿಂಚೋಳಿ ವಿಧಾನಸಭಾ ಕ್ಷೇತ್ರದಲ್ಲಿ 1,93,869 ಮತದಾರರು ಮತದಾನ ಮಾಡುವ ಹಕ್ಕನ್ನು ಹೊಂದಿದ್ದಾರೆ. ಮಹಿಳೆಯರು 94,806, ಪುರುಷರು 99,094, ತೃತೀಯ ಲಿಂಗಿಗಳು 16, ಒಟ್ಟು ಮತಗಟ್ಟೆ 241.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+