ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನೀತಿ ಸಂಹಿತೆ : ನಟರ ಚಲನಚಿತ್ರ ಪ್ರದರ್ಶನಕ್ಕೆ ಸ್ಪಷ್ಟನೆ

|
Google Oneindia Kannada News

Recommended Video

Lok Sabha Elections 2019 : ನಟರ ಚಲನಚಿತ್ರ ಪ್ರದರ್ಶನಕ್ಕೆ ಸ್ಪಷ್ಟನೆ | Oneindia Kannada

ಬೆಂಗಳೂರು, ಮಾರ್ಚ್ 21 : ಚುನಾವಣೆಯಲ್ಲಿ ಸ್ಪರ್ಧಿಸುವ ನಟರ ಚಲನಚಿತ್ರ ಪ್ರದರ್ಶನಕ್ಕೆ ದೂರದರ್ಶನದಲ್ಲಿ ಮಾತ್ರ ನಿರ್ಬಂಧವಿದೆ ಎಂದು ಮಂಡ್ಯ ಜಿಲ್ಲಾಡಳಿತ ಸ್ಪಷ್ಟಪಡಿಸಿದೆ. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಈ ಸ್ಪಷ್ಟನೆ ನೀಡಲಾಗಿದೆ.

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದೆ. ಏಪ್ರಿಲ್ 18ರಂದು ಮತದಾನ ನಡೆಯಲಿದ್ದು, ಮೇ 23ರಂದು ಚುನಾವಣಾ ಫಲತಾಂಶ ಪ್ರಕಟವಾಗಲಿದೆ.

ಸಾಮಾಜಿಕ ಜಾಲತಾಣಕ್ಕೆ ಚುನಾವಣಾ ನೀತಿ ಸಂಹಿತೆ ನಿಯಮಗಳು ಏನು?ಸಾಮಾಜಿಕ ಜಾಲತಾಣಕ್ಕೆ ಚುನಾವಣಾ ನೀತಿ ಸಂಹಿತೆ ನಿಯಮಗಳು ಏನು?

ಚುನಾವಣೆಯಲ್ಲಿ ನಟರು ಸ್ಪರ್ಧಿಸುತ್ತಿರುವುದರಿಂದ ಅವರು ನಟಿಸಿರುವ ಚಲನಚಿತ್ರಗಳು ಪ್ರದರ್ಶನವಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಸ್ಪಷ್ಟೀಕರಣ ನೀಡಿದ್ದಾರೆ.

ಮದುವೆ, ಹುಟ್ಟುಹಬ್ಬ ಆಯೋಜಿಸಲು ಆಯೋಗದ ಅನುಮತಿ ಬೇಕಿಲ್ಲಮದುವೆ, ಹುಟ್ಟುಹಬ್ಬ ಆಯೋಜಿಸಲು ಆಯೋಗದ ಅನುಮತಿ ಬೇಕಿಲ್ಲ

film telecast

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಖಾಸಗಿ ಚಾನಲ್‍ಗಳಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸುವ ನಟರ ವಾಣಿಜ್ಯ ಜಾಹಿರಾತು, ಚಲನಚಿತ್ರಗಳ ಪ್ರದರ್ಶನ ಹಾಗೂ ಸಿನಿಮಾ ಮಂದಿರಗಳಲ್ಲಿ ಚಲನಚಿತ್ರಗಳನ್ನು ಪ್ರದರ್ಶಿಸಲು ಯಾವುದೇ ನಿರ್ಬಂಧ ಇರುವುದಿಲ್ಲ ಎಂದು ಹೇಳಿದ್ದಾರೆ.

ಚುನಾವಣಾ ಅಕ್ರಮ ವರದಿ : ಸಿ-ವಿಜಿಲ್ ಆಪ್ ಬಳಸುವುದು ಹೇಗೆ?ಚುನಾವಣಾ ಅಕ್ರಮ ವರದಿ : ಸಿ-ವಿಜಿಲ್ ಆಪ್ ಬಳಸುವುದು ಹೇಗೆ?

ಆದರೆ, ಲೋಕಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಸರ್ಕಾರಿ ಸ್ವಾಮ್ಯದ ದೂರದರ್ಶನ ಚಾನೆಲ್‍ನಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸುವ ನಟರ ಚಲನಚಿತ್ರಗಳನ್ನು (ವಾಣಿಜ್ಯ ಜಾಹಿರಾತು ಹೊರತುಪಡಿಸಿ) ಪ್ರದರ್ಶಿಸಲು ನಿರ್ಬಂಧವಿರುತ್ತದೆ ಎಂದು ತಿಳಿಸಿದ್ದಾರೆ.

ಆಯೋಗದ ಸ್ಪಷ್ಟನೆ : ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಅವರು ಈ ಕುರಿತು ಮಾಹಿತಿ ನೀಡಿದ್ದು, 'ಸುಮಲತಾ ಅಂಬರೀಶ್ ಜೊತೆ ಕಾಣಿಸಿಕೊಂಡ ಕಾರಣಕ್ಕೆ ದರ್ಶನ್ ಮತ್ತು ಯಶ್ ನಟಿಸಿರುವ ಚಲನಚಿತ್ರಗಳ ಪ್ರಸಾರಕ್ಕೆ ನಿರ್ಬಂಧ ಹೇರುವುದಿಲ್ಲ' ಎಂದು ಹೇಳಿದ್ದಾರೆ.

English summary
Election commission clarification regarding broadcasting of films on TV actors who are contesting elections.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X