ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮದುವೆ, ಹುಟ್ಟುಹಬ್ಬ ಆಯೋಜಿಸಲು ಆಯೋಗದ ಅನುಮತಿ ಬೇಕಿಲ್ಲ

|
Google Oneindia Kannada News

ಬೆಂಗಳೂರು, ಮಾರ್ಚ್ 14 : ರಾಜಕೀಯೇತರ ಕಾರ್ಯಕ್ರಮಗಳಾದ ಮದುವೆ, ಹುಟ್ಟುಹಬ್ಬ ಸೇರಿದಂತೆ ಇನ್ನಿತರೆ ಖಾಸಗಿ ಕಾರ್ಯಕ್ರಮಗಳನ್ನು ಆಯೋಜಿಸಲು ಚುನಾವಣಾ ಆಯೋಗದ ಅನುಮತಿ ಅಗತ್ಯವಿಲ್ಲ ಎಂದು ಆಯೋಗ ಸ್ಪಷ್ಟಪಡಿಸಿದೆ.

ಬೆಂಗಳೂರಿನಲ್ಲಿ ಗುರುವಾರ ಪತ್ರಿಕಾಗೋಷ್ಠಿ ನಡೆಸಿದ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಅವರು ಈ ಕುರಿತು ಮಾಹಿತಿ ನೀಡಿದರು. ಮದುವೆ, ಹುಟ್ಟುಹಬ್ಬಗಳಂತಹ ಖಾಸಗಿ ಕಾರ್ಯಕ್ರಮಗಳನ್ನು ಆಯೋಜಿಸಲು ಅನುಮತಿ ನೀಡುವಂತೆ ಚುನಾವಣಾಧಿಕಾರಿಗಳನ್ನು ಭೇಟಿ ಮಾಡುತ್ತಿದ್ದಾರೆ ಎಂದರು.

ಚುನಾವಣಾ ಅಕ್ರಮ ವರದಿ : ಸಿ-ವಿಜಿಲ್ ಆಪ್ ಬಳಸುವುದು ಹೇಗೆ?ಚುನಾವಣಾ ಅಕ್ರಮ ವರದಿ : ಸಿ-ವಿಜಿಲ್ ಆಪ್ ಬಳಸುವುದು ಹೇಗೆ?

ಇಂತಹ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲು ಅನುಮತಿ ಅಗತ್ಯವಿಲ್ಲ. ಹಾಗೆಯೇ ರಾಜಕೀಯ ವ್ಯಕ್ತಿಗಳು ಭಾಗವಹಿಸದಿರುವ ಖಾಸಗಿ ಕಾರ್ಯಕ್ರಮಗಳನ್ನು ಆಯೋಜಿಸಲು ಸಹ ಅನುಮತಿ ಅಗತ್ಯವಿಲ್ಲ ಎಂದು ಆಯೋಗ ಹೇಳಿದೆ.

ಲೋಕಸಭಾ ಚುನಾವಣೆ ಘೋಷಣೆ : ಮಾದರಿ ನೀತಿ ಸಂಹಿತೆ ಎಂದರೇನು?ಲೋಕಸಭಾ ಚುನಾವಣೆ ಘೋಷಣೆ : ಮಾದರಿ ನೀತಿ ಸಂಹಿತೆ ಎಂದರೇನು?

Election commission clarification on Model code of conduct

ಸಾರ್ವಜನಿಕರು ಆಯೋಜನೆ ಮಾಡುವಂತಹ ಕಾರ್ಯಕ್ರಮಗಳ ಮೇಲೆ ಜಿಲ್ಲಾ ಚುನಾವಣಾಧಿಕಾರಿಗಳು ಮತ್ತು ಮಾದರಿ ನೀತಿ ಸಂಹಿತೆ ಜಾರಿ ದಳದ ಅಧಿಕಾರಿಗಳು ಕಣ್ಣಿಟ್ಟಿರುತ್ತಾರೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಮತದಾರರ ಗುರುತಿನ ಚೀಟಿ ಕಳೆದು ಹೋದ್ರೇ ಏನ್ಮಾಡ್ಬೇಕು?ಮತದಾರರ ಗುರುತಿನ ಚೀಟಿ ಕಳೆದು ಹೋದ್ರೇ ಏನ್ಮಾಡ್ಬೇಕು?

ಸಾರ್ವಜನಿಕರು ಆಯೋಜಿಸುವ ಕಾರ್ಯಕ್ರಮದಲ್ಲಿ ರಾಜಕೀಯ ವ್ಯಕ್ತಿಗಳು ಉಡುಗೊರೆ ಹಂಚುವುದು. ಊಟದ ವ್ಯವಸ್ಥೆ ಮಾಡುವುದು ಸೇರಿದಂತೆ ಮತದಾರರನ್ನು ಓಲೈಸುವ, ಆಮಿಷವೊಡ್ಡುವ ಕೆಲಸ ಮಾಡಿದರೆ ಅಂತಹವರ ವಿರುದ್ಧ ಆಯೋಗವು ಕಾನೂನಿನ ಅನ್ವಯ ಕ್ರಮ ಕೈಗೊಳ್ಳಲಿದೆ.

ನಗದು ಮಿತಿಯ ವಿವರ : ಸಾರ್ವಜನಿಕರು ತಮ್ಮೊಂದಿಗೆ ಪ್ರಯಾಣದ ಅವಧಿಯಲ್ಲಿ ಯಾವುದೇ ದಾಖಲೆಗಳಿಲ್ಲದೇ 50 ಸಾವಿರಕ್ಕಿಂತ ಕಡಿಮೆ ಮೊತ್ತದ ಹಣವನ್ನು ಇಟ್ಟುಕೊಳ್ಳಲು ಅವಕಾಶವಿದೆ. 10 ಸಾವಿರಕ್ಕಿಂತ ಕಡಿಮೆ ಮೌಲ್ಯದ ಉಡುಗೊರೆಗಳನ್ನು ತೆಗೆದುಕೊಂಡು ಹೋಗಲು ದಾಖಲೆಗಳ ಅಗತ್ಯವಿಲ್ಲ.

English summary
Sanjiv Kumar the chief electoral officer (CEO) of Karnataka clarification on Model code of conduct for Lok sabha elections 2019. Election will be held in Karnataka on April 18 and 23.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X