Get Updates
Get notified of breaking news, exclusive insights, and must-see stories!

ಮದುವೆ-ಹುಟ್ಟುಹಬ್ಬಕ್ಕೆ ಚುನಾವಣಾ ಆಯೋಗದ ಅನುಮತಿ ಬೇಕಿಲ್ಲ!

ಬೆಂಗಳೂರು, ಏಪ್ರಿಲ್ 11: ಮದುವೆ, ಹುಟ್ಟುಹಬ್ಬ ಸೇರಿದಂತೆ ಇನ್ನಿತರ ಖಾಸಗಿ ಕಾರ್ಯಕ್ರಮಗಳನ್ನು ಆಯೋಜಿಸಲು ಚುನಾವಣಾ ಆಯೋಗದ ಅನುಮತಿಯ ಅಗತ್ಯವಿಲ್ಲವೆಂದು ಮುಖ್ಯ ಚುನಾವಣಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಮದುವೆ, ಹುಟ್ಟುಹಬ್ಬಗಳಂತಹ ಖಾಸಗಿ ಕಾರ್ಯಕ್ರಮಗಳನ್ನು ಆಯೋಜಿಸಲು ಅನುಮತಿ ನೀಡುವಂತೆ ಸಾರ್ವಜನಿಕರು ಜಿಲ್ಲಾ ಚುನಾವಣಾಧಿಕಾರಿಗಳು ಮತ್ತು ಮಾದರಿ ನೀತಿ ಸಂಹಿತೆ ಜಾರಿ ದಳದ ಅಧಿಕಾರಿಗಳನ್ನು ಭೇಟಿ ಮಾಡುತ್ತಿದ್ದಾರೆ. ವಾಸ್ತವವಾಗಿ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಲು ಅನುಮತಿಯ ಅಗತ್ಯವಿರುವುದಿಲ್ಲವೆಂದು ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಸ್ಪಷ್ಟೀಕರಿಸಿದ್ದಾರೆ.

ಹಾಗೆಯೇ, ರಾಜಕೀಯ ವ್ಯಕ್ತಿಗಳು ಭಾಗವಹಿಸದಿರುವ ಖಾಸಗಿ ಕಾರ್ಯಕ್ರಮಗಳನ್ನು ಆಯೋಜಿಸಲು ಸಹ ಅನುಮತಿಯ ಅಗತ್ಯವಿರುವುದಿಲ್ಲ. ಆದರೆ, ಸಾರ್ವಜನಿಕರು ಆಯೋಜಿಸುವ ಕಾರ್ಯಕ್ರಮಗಳ ಬಗ್ಗೆ ಜಿಲ್ಲಾ ಚುನಾವಣಾಧಿಕಾರಿಗಳು ಮತ್ತು ಮಾದರಿ ನೀತಿ ಸಂಹಿತಿ ಜಾರಿ ದಳದ ಅಧಿಕಾರಿಗಳು ಕಣ್ಣಿಟ್ಟಿರುತ್ತಾರೆ ಎಂದು ಅವರು ತಿಳಿಸಿದ್ದಾರೆ.

Election commission clarifies no need of permission for marriages

ಸಾರ್ವಜನಿಕರು ಆಯೋಜಿಸುವ ಕಾರ್ಯಕ್ರಮಗಳಲ್ಲಿ ರಾಜಕೀಯ ವ್ಯಕ್ತಿಗಳು ಉಡುಗೊರೆ ಹಂಚುತ್ತಿರುವುದು ಇಲ್ಲವೆ ಊಟದ ವ್ಯವಸ್ಥೆ ಸೇರಿದಂತೆ ಮತದಾರರನ್ನು ಒಲಿಸಲು ಯಾವುದೇ ರೀತಿಯ ಆಮಿಷಗಳನ್ನು ಒಡ್ಡುತ್ತಿದ್ದಾರೆ ಅಂತಹವರ ಮೇಲೆ ಆಯೋಗವು ಕಾನೂನಿನ ರೀತಿ ಕ್ರಮ ಕೈಗೊಳ್ಳುತ್ತದೆ.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಚುನಾವಣೆಯ ಮುಖ್ಯ ದಿನಾಂಕಗಳು

ನಗದು ಮಿತಿ :

ಸಾರ್ವಜನಿಕರು ತಮ್ಮೊಂದಿಗೆ ಯಾವುದೇ ದಾಖಲೆಗಳಿಲ್ಲದೆ 50 ಸಾವಿರ ರೂ.ವರೆಗಿನ ಮೊತ್ತವನ್ನು ತಮ್ಮೊಂದಿಗೆ ಪ್ರಯಾಣದ ವೇಳೆಯಲ್ಲಿ ಇಟ್ಟುಕೊಳ್ಳಲು ಅವಕಾಶವಿದೆ. ಹಾಗೆಯೇ, ರೂ.10,000/-ಇಲ್ಲವೇ ಅದಕ್ಕಿಂತ ಹೆಚ್ಚಿನ ಮೌಲ್ಯದ ಉಡುಗೊರೆಗಳನ್ನು ತಮ್ಮೊಂದಿಗೆ ತೆಗೆದುಕೊಂಡು ಹೋಗಲು ದಾಖಲೆಗಳ ಅವಶ್ಯಕತೆ ಇರುವುದಿಲ್ಲ.

ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ ರಾಜ್ಯಾದ್ಯಂತ 1255 ಚೆಕ್ ಪೋಸ್ಟ್ ಸ್ಥಾಪಿಸಲಾಗಿದ್ದು, ಚುನಾವಣೆಯ ವೇಳೆ ಅಕ್ರಮಗಳನ್ನು ತಡೆಗಟ್ಟುವ ಸಲುವಾಗಿ ಸ್ಥಾಪಿಸಲಾಗಿದೆ. ವಾಹನಗಳು ಮತ್ತು ಲಗೇಜುಗಳನ್ನು ತಪಾಸಿಸುವ ವೇಳೆ ಸಾರ್ವಜನಿಕರು ಸಹಕರಿಸುವಂತೆ ಆಯೋಗವು ಮನವಿ ಮಾಡಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+