ಜ.22ರ ತನಕ ಮತದಾರರ ಪಟ್ಟಿಗೆ ಹೆಸರು ಸೇರಿಸಿ
ಬೆಂಗಳೂರು, ಜನವರಿ 12 : ಮತದಾರರ ಪಟ್ಟಿಗೆ ಹೆಸರು ಸೇರಿಸಲು ಜ.22ರ ತನಕ ಅವಕಾಶ ನೀಡಲಾಗಿದೆ. ಚುನಾವಣಾ ಆಯೋಗ ಅವಧಿಯನ್ನು ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.
ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಮತದಾರರ ಪಟ್ಟಿಯನ್ನು ಪರಿಷ್ಕರಣೆ ಮಾಡಲಾಗುತ್ತಿದೆ. ಈಗಾಗಲೇ ಚುನಾವಣಾ ಆಯೋಗಕ್ಕೆ 12 ಲಕ್ಷ ಹೊಸ ಅರ್ಜಿಗಳು ಬಂದಿವೆ.

ಮೊದಲು ಡಿಸೆಂಬರ್ 31ರ ತನಕ ಹೆಸರು ಸೇರಿಸಲು ಅವಕಾಶ ನೀಡಲಾಗಿತ್ತು. ಬಳಿಕ ಅದನ್ನು ಜನವರಿ 12ರ ತನಕ ವಿಸ್ತರಣೆ ಮಾಡಲಾಗಿತ್ತು. ಇಂದು ಅವಧಿ ಪೂರ್ಣಗೊಂಡ ಹಿನ್ನಲೆಯಲ್ಲಿ ಜ.22ರ ತನಕ ವಿಸ್ತರಿಸಲಾಗಿದೆ.
ಒಂದೇ ಹಂತದಲ್ಲಿ ಮತದಾನ : 'ರಾಜ್ಯದಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಸುವುದಾಗಿ ಕೇಂದ್ರ ಚುನಾವಣಾ ಆಯೋಗಕ್ಕೆ ಅಭಿಪ್ರಾಯ ತಿಳಿಸಲಾಗಿದೆ. ಈ ಬಗ್ಗೆ ಆಯೋಗ ಅಂತಿಮ ನಿರ್ಧಾರ ಕೈಗೊಳ್ಳಲಿದೆ' ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಹೇಳಿದ್ದಾರೆ.
ಜ.22 ಪಟ್ಟಿಗೆ ಹೆಸರು ಸೇರಿಸಲು ಕೊನೆಯ ದಿನವಾಗಿದೆ. ಜ.24ರಂದು ಪಟ್ಟಿಯ ಎಲ್ಲಾ ಮಾಹಿತಿಯನ್ನು ಅಂತಿಮಗೊಳಿಸಿ ಜ.28ರಂದು ಕರಡು ಪಟ್ಟಿಯನ್ನು ಪ್ರಕಟಿಸಲಾಗುತ್ತದೆ.












Click it and Unblock the Notifications