ಮತದಾನದ ದಿನದಂದು ರಾಜ್ಯ ಸರ್ಕಾರಿ ಕಚೇರಿಗಳಿಗೆ ರಜೆ ಘೋಷಣೆ
ಬೆಂಗಳೂರು, ಅ.15: ಕೇಂದ್ರ ಚುನಾವಣಾ ಆಯೋಗವು ಕರ್ನಾಟಕ ರಾಜ್ಯದಲ್ಲಿ ತೆರವಾಗಿರುವ ಶಿರಾ ಹಾಗೂ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 3 ರಂದು ಉಪ ಚುನಾವಣೆ ಘೋಷಣೆ ಮಾಡಿದೆ. ಉಪ ಚುನಾವಣೆ ನಡೆಯುತ್ತಿರುವ ಮತ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ಎಲ್ಲಾ ರಾಜ್ಯ ಸರ್ಕಾರಿ ಕಛೇರಿಗಳಿಗೆ, ಶಾಲಾ ಕಾಲೇಜುಗಳಿಗೆ (ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ ) ಹಾಗೂ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಒಳಗೊಂಡಂತೆ ಸಾವ್ರರ್ತಿಕ ರಜೆಯನ್ನು ಘೋಷಿಸಿದೆ.

ಉಪಚುನಾವಣೆ ನಡೆಯುತ್ತಿರುವ ಕ್ಷೇತ್ರಗಳ ವ್ಯಾಪ್ತಿಯ ಹೊರಗಡೆ ಕೆಲಸ ನಿರ್ವಹಿಸುತ್ತಿದ್ದು ಮತ್ತು ಉಪಚುನಾವಣೆ ನಡೆಯುತ್ತಿರುವ ಕ್ಷೇತ್ರಗಳ ವ್ಯಾಪ್ತಿಯಲ್ಲಿ ನೋಂದಾಯಿತ ಮತದಾರರಾಗಿರುವವರಿಗೆ ಹಾಗೂ ಎಲ್ಲಾ ವ್ಯಹಾರಿಕ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು ಮತ್ತು ಇನ್ನಿತರ ಸಂಸ್ಥೆಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ನವೆಂಬರ್ 03 ರಂದು ವೇತನ ಸಹಿತ ರಜೆಯನ್ನು ಘೋಷಿಸಿ ಸರ್ಕಾರ ಆದೇಶಿಸಿದೆ.
Recommended Video
BJP ಅವ್ರು ಕೈ ಗೆ ಬಳೆ ಹಾಕೊಬೇಕು | DK Shivkumar | RR Nagar By Election | Oneindia Kannada












Click it and Unblock the Notifications