• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಉಪ ಚುನಾವಣೆ: ಮತದಾನಕ್ಕೆ ರಜೆ ಕೊಡದವರ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆ!

|

ಬೆಂಗಳೂರು, ಅ. 15: ರಾಜ್ಯದಲ್ಲಿ ನಡೆಯುತ್ತಿರುವ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ದಿನದಂದು ಕಾರ್ಮಿಕರಿಗೆ ವೇತನ ಸಹಿತ ರಜೆ ನೀಡಲು ಕೇಂದ್ರ ಚುನಾವಣಾ ಆಯೋಗ ಆದೇಶ ಮಾಡಿದೆ. ಶಿರಾ ಹಾಗೂ ರಾಜರಾಜೇಶ್ವರಿ ನಗರ ಕ್ಷೇತ್ರಗಳ ವ್ಯಾಪ್ತಿಯಲ್ಲಿ ನವೆಂಬರ್ 3 ರಂದು ಉಪ ಚುನಾವಣೆ ನಡೆಯಲಿದ್ದು, ಅಂದು ಮತದಾನ ನಡೆಯಲಿರುವ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಅರ್ಹ ಎಲ್ಲ ಕಾರ್ಮಿಕ ಮತದಾರರಿಗೆ ವೇತನ ಸಹಿತ ರಜೆಯನ್ನು ಚುನಾವಣಾ ಆಯೋಗ ಘೋಷಿಸಿದೆ.

ಮತ ಚಲಾಯಿಸಲು ಅನುಕೂಲವಾಗುವಂತೆ ಎಲ್ಲಾ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ವೇತನ ಸಹಿತ ರಜೆಯನ್ನು ಆಯೋಗ ಘೋಷಿಸಿದೆ.

ಶಿರಾ, ಆರ್‌ಆರ್‌ ನಗರ ಉಪ ಚುನಾವಣೆಗೆ ದಿನಾಂಕ ಪ್ರಕಟ!

   Kusuma ಗೆ ದೊಡ್ಡ Shock | Oneindia Kannada

   ಮತ ಚಲಾಯಿಸಲು ಎಲ್ಲಾ ಸಂಸ್ಥೆಗಳು-ನಿಯೋಜಕರು ಅನುವು ಮಾಡಿಕೊಡಬೇಕು. ಚುನಾವಣೆಯು ನಡೆಯುವ ಕ್ಷೇತ್ರಗಳಲ್ಲಿ ಅರ್ಹ ಕಾರ್ಮಿಕರು ಮತದಾನ ಚಲಾಯಿಸಲು ಅನುಕೂಲವಾಗುವಂತೆ ಎಲ್ಲಾ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಮತ್ತು ಇತರೆ ಸಂಸ್ಥೆಗಳ ಮಾಲೀಕರು ವೇತನ ಸಹಿತ ರಜೆ ನೀಡುವಂತೆ ಆದೇಶಿಸಿದೆ. ತಪ್ಪಿದಲ್ಲಿ ಸಂಬಂಧಪಟ್ಟ ಸಂಸ್ಥೆ-ನಿಯೋಜಕರ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದೆಂದು ಕಾರ್ಮಿಕ ಇಲಾಖೆಯ ಆಯುಕ್ತರು ತಿಳಿಸಿದ್ದಾರೆ.

   English summary
   The Central Election Commission has issued a pay leave for labors on the by-election day of the two assembly constituencies in the state. Know more
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X