ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚುನಾವಣಾ ಆಯೋಗದ ಅಧಿಕಾರ ಕಸಿದುಕೊಂಡ ಬಿಜೆಪಿ: ಡಿ.ಕೆ. ಶಿವಕುಮಾರ್

|
Google Oneindia Kannada News

ಬೆಂಗಳೂರು, ಮೇ 18: ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದರೂ ಸಹ ಚುನಾವಣಾ ಆಯೋಗ ಹೈಕೋರ್ಟ್‌ನಲ್ಲಿ ಮೆಮೋ ಸಲ್ಲಿಸಿ, ರಾಜ್ಯ ಸರ್ಕಾರ ತನ್ನ ಅಧಿಕಾರ ಕಸಿದುಕೊಂಡಿರುವ ಕುರಿತು ತಿಳಿಸಿದೆ. ಇದು ರಾಜ್ಯ ಸರ್ಕಾರದ ಉತ್ತಮ ನಡೆಯಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ‌.ಕೆ ಶಿವಕುಮಾರ್ ಹೇಳಿದ್ದಾರೆ.

"ಸಂವಿಧಾನದ ಅಡಿಯಲ್ಲಿ ಚುನಾವಣಾ ಆಯೋಗಕ್ಕೆ ಸ್ವಾಯತ್ತತೆ, ಸ್ವಾತಂತ್ರ್ಯ ನೀಡಲಾಗಿದೆ. ಆದರೆ ಸರ್ಕಾರ ತನ್ನ ಅಧಿಕಾರವನ್ನು ಕಸಿದುಕೊಂಡಿದೆ ಎಂದು ಚುನಾವಣಾ ಆಯೋಗವೇ ಹೇಳುತ್ತಿರುವಾಗ, ದೇಶದಲ್ಲಿ ಪ್ರಜಾಪ್ರಭುತ್ವ ಇನ್ನೂ ಜೀವಂತವಾಗಿದೆ ಎಂದು ಹೇಳಬಹುದೇ?" ಎಂದು ಚುನಾವಣಾ ಆಯೋಗದ ಅಧಿಕಾರವನ್ನು ಕಸಿದುಕೊಂಡ ರಾಜ್ಯ ಸರ್ಕಾರದ ವಿರುದ್ಧ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ಥಳೀಯ ಸಂಸ್ಥೆ ಚುನಾವಣೆ: ಮೇ 23ಕ್ಕೆ ವಿಚಾರಣೆ ಮುಂದೂಡಿಕೆಸ್ಥಳೀಯ ಸಂಸ್ಥೆ ಚುನಾವಣೆ: ಮೇ 23ಕ್ಕೆ ವಿಚಾರಣೆ ಮುಂದೂಡಿಕೆ

ಸುಪ್ರೀಂ ಕೋರ್ಟ್ ಆದೇಶವಿದ್ದರೂ ಸಹ ಚುನಾವಣಾ ಆಯೋಗವು ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕಾ ಪಂಚಾಯಿತಿ ಚುನಾವಣೆ ನಡೆಸಲು ಸಾಧ್ಯವಾಗದಂತೆ ರಾಜ್ಯ ಸರ್ಕಾರವು ಅಧಿಕಾರ ಕಸಿದುಕೊಂಡ ಬಗ್ಗೆ ನ್ಯಾಯಾಲಯಗಳು ಸಮಸ್ಯೆ ಬಗೆಹರಿಸಬಹುದೆಂಬ ವಿಶ್ವಾಸವಿದೆ ಎಂದು ಕೆಪಿಸಿಸಿ ಅಧ್ಯಕ್ಷರು ತಿಳಿಸಿದ್ದಾರೆ.

Election Commission itself says the government has taken away its powers

ಆಯೋಗದ ಸಿದ್ಧತೆಗೆ ಸರ್ಕಾರ ಬ್ರೇಕ್:

ರಾಜ್ಯ ಚುನಾವಣಾ ಆಯೋಗ ಕಳೆದ ವರ್ಷ ಏಪ್ರಿಲ್, ಮೇ ಮತ್ತು ಜೂನ್ ತಿಂಗಳಲ್ಲಿ ಅವಧಿ ಪೂರ್ಣಗೊಂಡ ರಾಜ್ಯದ ಜಿ.ಪಂ ಹಾಗೂ ತಾ.ಪಂಗಳಿಗೆ ಚುನಾವಣೆ ನಡೆಸಲು ಸಿದ್ದತೆ ಆರಂಭಿಸಿತ್ತು. ಅದಕ್ಕಾಗಿ ಚುನಾವಣಾ ಆಯೋಗ ಕ್ಷೇತ್ರ ಪುನರ್‌ವಿಂಗಡಣೆ ಮಾಡಿ ಮತದಾರರ ಅಂತಿಮ ಪಟ್ಟಿಯನ್ನೂ ಸಹ ಪ್ರಕಟ ಮಾಡಿತ್ತು ಹಾಗೂ ಮೀಸಲು ನಿಗದಿಯ ಕರಡು ಸಹ ಪ್ರಕಟಿಸಲಾಗಿತ್ತು. ಇನ್ನೇನು ದಿನಾಂಕ ಘೋಷಣೆ ಮಾಡಬೇಕೆನ್ನುವಷ್ಟರಲ್ಲಿ ಸರ್ಕಾರ ಕ್ಷೇತ್ರ ಪುನರ್ ವಿಂಗಡಣೆ ಮತ್ತು ಮೀಸಲು ಅಧಿಕಾರವನ್ನು ಚುನಾವಣಾ ಆಯೋಗದಿಂದ ಹಿಂಪಡೆದು ಪ್ರತ್ಯೇಕವಾಗಿ ಸೀಮಾ ನಿರ್ಣಯ ಆಯೋಗ ರಚಿಸಿತ್ತು. ಅದನ್ನು ಪ್ರಶ್ನಿಸಿ ಚುನಾವಣಾ ಆಯೋಗ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ. ಆ ಅರ್ಜಿ ಇನ್ನೂ ವಿಚಾರಣಾ ಹಂತದಲ್ಲಿದೆ.

English summary
DK Shivakumar has expressed his concerns regarding Karnataka State Election Commission’s urgent petition in the High Court today, citing its inability to hold Zilla Panchayat and Taluk Panchayat elections as the State government has taken away its powers.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X