ಕರ್ನಾಟಕ ಚುನಾವಣೆ 2023: 'ಚುನಾವಣಾ ಆ್ಯಪ್' ಬಿಡುಗಡೆ; ಮತದಾರರ ಎಲ್ಲ ಸಮಸ್ಯೆಗಳಿಗೆ ಇಲ್ಲಿದೆ ಪರಿಹಾರ
2023ರ ಕರ್ನಾಟಕ ವಿಧಾನಸಭೆ ಚುನಾವಣೆಯ ದಿನಾಂಕ ಸಮೀಪಿಸುತ್ತಿದ್ದು, ಮೇ 10ರಂದು ರಾಜ್ಯದ ಎಲ್ಲ 224 ಕ್ಷೇತ್ರಗಳಿಗೆ ಏಕಕಾಲದಲ್ಲಿ ಮತದಾನ ನಡೆಯಲಿದೆ. ಇದೇ ವೇಳೆ ಮತದಾರರ ಸಮಸ್ಯೆಗಳಿಗೆ ಸ್ಪಂದಿಸಲು ಚುನಾವಣಾ ಆಯೋಗವು 'ಚುನಾವಣಾ ಆ್ಯಪ್' ಅನ್ನು ಬಿಡುಗಡೆಗೊಳಿಸಿದೆ.
ಈ 'ಚುನಾವಣಾ ಆ್ಯಪ್'ನಲ್ಲಿ ಪ್ರತಿ ಕ್ಷೇತ್ರಗಳ ಮತಗಟ್ಟೆ ವಿವರ, ಅಭ್ಯರ್ಥಿಗಳ ವಿವರ, ಚುನಾವಣಾ ವೇಳಾಪಟ್ಟಿ ಸೇರಿದಂತೆ ಹಲವು ಮಾಹಿತಿಗಳನ್ನು ಕ್ಷಣ ಮಾತ್ರದಲ್ಲಿ ಒದಗಿಸಲಾಗುತ್ತದೆ. ಮತದಾರರ ಯಾವುದೇ ಸಮಸ್ಯೆಗಳಿಗೆ ತಕ್ಷಣವೇ ಸ್ಪಂದಿಸಲಾಗುತ್ತದೆ.

ಮತದಾರರು 'ಚುನಾವಣಾ ಆ್ಯಪ್' ಬಳಸಿಕೊಂಡು ಸುಲಭವಾಗಿ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಚುನಾವಣಾ ಆಯೋಗ ಹಲವು ಉಪಯುಕ್ತ ಮಾಹಿತಿಗಳುಳ್ಳ ಆ್ಯಪ್ ಅನ್ನು ಅಭಿವೃದ್ಧಿಪಡಿಸಿದೆ. ಮತದಾರರು Chunavana ಮೊಬೈಲ್ ಅಪ್ಲಿಕೇಶನ್ ಡೌನ್‌ಲೋಡ್ ಮಾಡಿಕೊಂಡು ಪರಿಹಾರ ಕಂಡುಕೊಳ್ಳಬಹುದು ಎಂದು ಚುನಾವಣಾ ಆಯೋಗ ತಿಳಿಸಿದೆ.
'ಚುನಾವಣಾ ಆ್ಯಪ್'ನಲ್ಲಿ ಏನೆಲ್ಲಾ ಮಾಹಿತಿಗಳಿವೆ?
* ಅಂಗವಿಕಲರು, ದಿವ್ಯಾಂಗರು ಮತ್ತು ಹಿರಿಯ ನಾಗರಿಕರು ಮತದಾನ ಕೇಂದ್ರಕ್ಕೆ ಬರಲು ಉಚಿತ ಸಾರಿಗೆ ವ್ಯವಸ್ಥೆ ಮತ್ತು ಗಾಲಿ ಕುರ್ಚಿ ವ್ಯವಸ್ಥೆಗೆ 'ಚುನಾವಣಾ ಆ್ಯಪ್'ನಲ್ಲಿ ಬುಕ್ ಮಾಡಬಹುದಾಗಿದೆ.
* "ಚುನಾವಣಾ ಆ್ಯಪ್'ನಲ್ಲಿ ಇಡೀ ಚುನಾವಣೆ ಪ್ರಕ್ರಿಯೆಯ ವೇಳಾಪಟ್ಟಿಯನ್ನು ಒದಗಿಸಲಾಗುತ್ತದೆ.
* ಪ್ರತಿ ಮತಗಟ್ಟೆಯ ವಿವರ ಮತ್ತು ಮತಗಟ್ಟೆ ಅಧಿಕಾರಿಗಳ ಮಾಹಿತಿಯನ್ನು 'ಚುನಾವಣಾ ಆ್ಯಪ್'ನಲ್ಲಿ ಪಡೆಯಬಹುದು.

* ಮತದಾರರು ತಮ್ಮ ಊರಿನ ಮತದಾರರ ಪಟ್ಟಿಯಲ್ಲಿ ಹೆಸರು ಖಾತರಿ ಮತ್ತು ಮತದಾರ ಚೀಟಿಯ ವಿವರವನ್ನು ಪಡೆಯಬಹುದಾಗಿದೆ.
* ಮತದಾರರು ತಾವು ಮತದಾನ ಮಾಡುವ ಮತಗಟ್ಟೆ ತಲುಪಲು ಜಿಪಿಎಸ್ ವ್ಯವಸ್ಥೆಯನ್ನು 'ಚುನಾವಣಾ ಆ್ಯಪ್'ನಲ್ಲಿ ಪಡೆದುಕೊಳ್ಳಬಹುದು.
* ಮತದಾರರು ತಾವು ಮತದಾನ ಮಾಡುವ ಕ್ಷೇತ್ರದ ಪ್ರತಿ ಅಭ್ಯರ್ಥಿಯ ವಿವರವನ್ನು 'ಚುನಾವಣಾ ಆ್ಯಪ್'ನಲ್ಲಿ ಪಡೆಯವಹುದು.
* ಮತದಾನದ ಪ್ರಮಾಣವನ್ನು ಈ 'ಚುನಾವಣಾ ಆ್ಯಪ್'ನಲ್ಲಿ ನೋಡಬಹುದು.
* ಮತಗಟ್ಟೆಯ ಸುತ್ತಮುತ್ತಲಿನ ಆಸ್ಪತ್ರೆ, ಪೊಲೀಸ್ ಠಾಣೆ ವಿವರ ದೊರೆಯುತ್ತದೆ. ಪಾರ್ಕಿಂಗ್ ಸ್ಥಳವನ್ನು ಪತ್ತೆ ಮಾಡಬಹುದು.
ಮೇ 10ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರಿಗೆ ಮಾತ್ರ ಮತದಾನ ನಡೆಯಲಿದ್ದು, ಚುನಾವಣಾ ಸಿದ್ಧತೆಗಳು ಭರದಿಂದ ಸಾಗಿವೆ. ಪ್ರಜಾಪ್ರಭುತ್ವದ ಹಬ್ಬವಾದ ಚುನಾವಣೆಯನ್ನು ಮುಕ್ತ, ನ್ಯಾಯಸಮ್ಮತ ಹಾಗೂ ಪಾರದರ್ಶಕತೆಯಿಂದ ನಡೆಸಲು ಸಾರ್ವಜನಿಕರು ಸಹಕರಿಸಬೇಕೆಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ತಿಳಿಸಿದ್ದಾರೆ.
2023ರ ಕರ್ನಾಟಕ ವಿಧಾನಸಭೆ ಚುನಾವಣೆಯ ಭಾಗವಾಗಿ 224 ಕ್ಷೇತ್ರಗಳಿಗೆ ಈಗಾಗಲೇ ನಾಮಪತ್ರ ಸಲ್ಲಿಕೆ, ಪರಿಶೀಲನೆ ಮತ್ತು ನಾಮಪತ್ರ ವಾಪಸ್ ಪ್ರಕ್ರಿಯೆ ಕೊನೆಗೊಂಡಿದೆ. ಮೇ 10ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮೇ 13ರಂದು ಮತ ಎಣಿಕೆ ಮತ್ತು ಫಲಿತಾಂಶ ಪ್ರಕಟವಾಗಲಿದೆ.
-
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ












Click it and Unblock the Notifications