ಚನ್ನಪಟ್ಟಣ ಉಪ ಚುನಾವಣೆ ಘೋಷಣೆಗೆ ದಿನಾಂಕ ನಿಗದಿ

ಬೆಂಗಳೂರು, ಜುಲೈ 08: ಲೋಕಸಭಾ ಚುನಾವಣೆ 2024ರ ಫಲಿತಾಂಶ ಪ್ರಕಟವಾಗಿ ಕೇಂದ್ರದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದಿದೆ. ಕರ್ನಾಟಕದ 28 ಕ್ಷೇತ್ರಗಳ ಪೈಕಿ ಬಿಜೆಪಿ 17, ಕಾಂಗ್ರೆಸ್ 9 ಮತ್ತು ಜೆಡಿಎಸ್ 2 ಸೀಟುಗಳಲ್ಲಿ ಜಯಗಳಿಸಿದೆ.

2023ರ ವಿಧಾನಸಭೆ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾಗದ್ದ ಮೂವರು ಲೋಕಸಭಾ ಸದಸ್ಯರಾಗಿ ಆಯ್ಕೆಯಾದ ಕಾರಣ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮೂರು ಕ್ಷೇತ್ರದ ಉಪ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಉಪ ಚುನಾವಣೆ ಘೋಷಣೆ ಮಾಡಲಿದೆ.

Election Commission May Announce Channapatna By Election On July 13

ಜುಲೈ 13ರಂದು ಕೇಂದ್ರ ಚುನಾವಣಾ ಆಯೋಗ ಪತ್ರಿಕಾಗೋಷ್ಠಿಯನ್ನು ಕರೆದಿದೆ. ಅಂದು ಕರ್ನಾಟಕದ ಚನ್ನಪಟ್ಟಣ, ಶಿಗ್ಗಾವಿ ಮತ್ತು ಸಂಡೂರು ಕ್ಷೇತ್ರದ ಉಪ ಚುನಾವಣೆ ದಿನಾಂಕ ಘೋಷಣೆಯಾಗುವ ನಿರೀಕ್ಷೆ ಇದೆ. ಮೂರು ಕ್ಷೇತ್ರಗಳ ಪೈಕಿ ಚನ್ನಪಟ್ಟಣದ ಚುನಾವಣೆ ರಾಜ್ಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಎಚ್. ಡಿ. ಕುಮಾರಸ್ವಾಮಿ ರಾಜೀನಾಮೆ: 2023ರ ವಿಧಾನಸಭೆ ಚುನಾವಣೆಯಲ್ಲಿ ಚನ್ನಪಟ್ಟಣದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿದ್ದ ಎಚ್. ಡಿ. ಕುಮಾರಸ್ವಾಮಿ 96,592 ಮತಗಳನ್ನು ಪಡೆದು ಜಯಗಳಿಸಿದ್ದರು. 2024ರ ಲೋಕಸಭೆ ಚುನಾವಣೆಗೆ ಅವರು ಮಂಡ್ಯ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಲೋಕಸಭೆ ಚುನಾವಣೆಯಲ್ಲಿ ಗೆದ್ದ ಬಳಿಕ ಅವರು ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಹಾವೇರಿ-ಗದಗ ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ ಬಸವರಾಜ ಬೊಮ್ಮಾಯಿ ಶಿಗ್ಗಾವಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಳ್ಳಾರಿ ಸಂಸದರಾದ ಇ. ತುಕಾರಾಮ್ ಸಂಡೂರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದ್ದರಿಂದ ಮೂರು ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಬೇಕಿದ್ದು, ಜುಲೈ 13ರಂದು ಚುನಾವಣಾ ವೇಳಾಪಟ್ಟಿ ಪ್ರಕಟವಾಗುವ ನಿರೀಕ್ಷೆ ಇದೆ.

ಶಿಗ್ಗಾವಿ, ಚನ್ನಪಟ್ಟಣ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಕ್ಕೆ ಮತ್ತು ವಿಧಾನ ಪರಿಷತ್‌ನ ಒಂದು ಸ್ಥಾನಕ್ಕೆ ಉಪ ಚುನಾವಣೆ ನಡೆಯಬೇಕಿದೆ. ಶಾಸಕರು ರಾಜೀನಾಮೆ ನೀಡಿದ 6 ತಿಂಗಳಿನಲ್ಲಿ ಉಪ ಚುನಾವಣೆ ನಡೆಸಬೇಕು ಎಂಬುದು ನಿಯಮ. ಆದ್ದರಿಂದ ಚುನಾವಣಾ ಆಯೋಗ ಉಪ ಚುನಾವಣೆ ವೇಳಾಪಟ್ಟಿಯನ್ನು ಪ್ರಕಟಿಸಲಿದೆ.

ಚನ್ನಪಟ್ಟಣ ಉಪ ಚುನಾವಣೆ ಬಿಜೆಪಿ-ಜೆಡಿಎಸ್ ಮೈತ್ರಿಕೂಟ, ರಾಜ್ಯದ ಆಡಳಿತ ಪಕ್ಷ ಕಾಂಗ್ರೆಸ್‌ಗೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಬೇಕು ಎಂದು ಉಪ ಚುನಾವಣೆಯನ್ನು ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ. ಆದರೆ ಅಭ್ಯರ್ಥಿ ಯಾರು? ಎಂಬುದು ಇನ್ನೂ ಅಂತಿಮವಾಗಿಲ್ಲ.

ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಚನ್ನಪಟ್ಟಣದಲ್ಲಿ ಮೈತ್ರಿ ಅಭ್ಯರ್ಥಿ ಗೆಲ್ಲಿಸಬೇಕು ಎಂದು ತಂತ್ರ ರೂಪಿಸುತ್ತಿದ್ದಾರೆ. ಮೈತ್ರಿಕೂಟದ ಅಭ್ಯರ್ಥಿಯಾಗಿ ಮಾಜಿ ಸಚಿವ ಸಿ. ಪಿ. ಯೋಗೇಶ್ವರ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ಈ ಕುರಿತು ಅಧಿಕೃತ ಘೋಷಣೆ ಬಾಕಿ ಇದೆ.

ಕಾಂಗ್ರೆಸ್‌ನಿಂದ ಬೆಂಗಳೂರು ಗ್ರಾಮಾಂತರದಲ್ಲಿ ಸೋತ ಡಿ. ಕೆ. ಸುರೇಶ್ ಅಭ್ಯರ್ಥಿಯಾಗಲಿದ್ದಾರೆ. ಡಿ. ಕೆ. ಶಿವಕುಮಾರ್ ಅವರೇ ಕಣಕ್ಕಿಳಿಯಲಿದ್ದಾರೆ ಎಂಬ ಸುದ್ದಿಗಳಿವೆ. ಮಹಿಳಾ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುತ್ತದೆ ಎಂಬ ಸುದ್ದಿಗಳು ಹಬ್ಬಿವೆ. ಅಭ್ಯರ್ಥಿ ಯಾರು? ಎಂಬ ಗುಟ್ಟನ್ನು ಕಾಂಗ್ರೆಸ್ ನಾಯಕರು ಬಿಟ್ಟುಕೊಟ್ಟಿಲ್ಲ.

ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿಯಲಿದ್ದಾರೆ ಎಂಬ ಸುದ್ದಿ ಇತ್ತು. ಆದರೆ ನಿಖಿಲ್ ಕಣಕ್ಕಿಳಿಯುವುದಿಲ್ಲ ಎಂದು ಎಚ್. ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಬಿಜೆಪಿ ನಾಯಕರು ಸಹ ಅಭ್ಯರ್ಥಿ ಯಾರಾಗಬಹುದು? ಎಂಬ ಸುಳಿವು ನೀಡಿಲ್ಲ. ಆದರೆ ವಿರೋಧ, ಆಡಳಿತ ಪಕ್ಷಗಳು ಚುನಾವಣಾ ತಯಾರಿ ಆರಂಭಿಸಿವೆ. ಬಿಜೆಪಿ ಉಪ ಚುನಾವಣೆಗೆ ಉಸ್ತುವಾರಿಯನ್ನು ನೇಮಕ ಮಾಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+