ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮತದಾರರ ಪರಿಷ್ಕೃತ ಪಟ್ಟಿ ಪ್ರಕಟ; ಒಮ್ಮೆ ಪರಿಶೀಲಿಸಿಕೊಳ್ಳಿ

|
Google Oneindia Kannada News

ಬೆಂಗಳೂರು, ಡಿಸೆಂಬರ್ 16 : ಕೇಂದ್ರ ಚುನಾವಣಾ ಆಯೋಗದ ಸೂಚನೆಯಂತೆ ಕರ್ನಾಟಕದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ನಡೆದಿದೆ. ಪರಿಷ್ಕೃತ ಪಟ್ಟಿ ಸೋಮವಾರ ಬಿಡುಗಡೆಯಾಗಲಿದ್ದು, ಜನರು ತಮ್ಮ ಮಾಹಿತಿಯನ್ನು ಪರಿಶೀಲಿಸಿ ಆಕ್ಷೇಪಣೆಗಳಿದ್ದರೆ ಸಲ್ಲಿಸಬಹುದಾಗಿದೆ.

ಡಿಸೆಂಬರ್ 16ರ ಸೋಮವಾರ ಚುನಾವಣಾ ಆಯೋಗ ಪರಿಷ್ಕೃತ ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಲಿದೆ. ಜನರಿಂದ ಬರುವ ಆಕ್ಷೇಪಣೆಗಳನ್ನು ಸ್ವೀಕರಿಸಿ 2020ರ ಜನವರಿ 27ರ ತನಕ ತಿದ್ದುಪಡಿ ಮಾಡಲಾಗುತ್ತದೆ. ಫೆ.7ಕ್ಕೆ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ.

ಕರ್ನಾಟಕದ 15 ವಿಧಾನಸಭಾ ಉಪ ಚುನಾವಣಾ ಫಲಿತಾಂಶದ ಸಮಗ್ರ ಚಿತ್ರಣಕರ್ನಾಟಕದ 15 ವಿಧಾನಸಭಾ ಉಪ ಚುನಾವಣಾ ಫಲಿತಾಂಶದ ಸಮಗ್ರ ಚಿತ್ರಣ

ಮತದಾರರು ಪರಿಷ್ಕೃತ ಪಟ್ಟಿಯಲ್ಲಿ ಹೆಸರು, ವಯಸ್ಸು, ಲಿಂಗ, ಸಂಬಂಧದ ಹೆಸರು, ದಾಖಲೆಗಳಲ್ಲಿ ಭಾವಚಿತ್ರ ಲಭ್ಯವಿದೆಯೇ?, ಸೆಕ್ಷನ್ ಹೆಸರು ಮುಂತಾದವು ಸರಿಯಾಗಿದೆಯೇ? ಎಂದು ಪರಿಶೀಲಿಸಿಕೊಳ್ಳಬಹುದು. ಇಲ್ಲವಾದಲ್ಲಿ ಆಕ್ಷೇಪಣೆ ಸಲ್ಲಿಸಬಹುದು.

 ಯಲ್ಲಾಪುರ ಕ್ಷೇತ್ರ ಮತದಾನ: ವಿಕಲಚೇತನ ಮತದಾರರ ಟ್ರ್ಯಾಕಿಂಗ್ ಯಲ್ಲಾಪುರ ಕ್ಷೇತ್ರ ಮತದಾನ: ವಿಕಲಚೇತನ ಮತದಾರರ ಟ್ರ್ಯಾಕಿಂಗ್

Election Commission Releases Draft Of Voters List

ರಾಜ್ಯಾದ್ಯಂತ ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಲಿದ್ದು, ಜನರು ಹತ್ತಿರದ ಕಚೇರಿಗೆ ಹೋಗಿ ಪರಿಶೀಲಿಸಿಕೊಳ್ಳಬಹುದು. ಆನ್‌ಲೈನ್ ಮೂಲಕವೂ ಜನರು ವಿವರಗಳನ್ನು ನೋಡಬಹುದಾಗಿದೆ.

918 ಅಭ್ಯರ್ಥಿಗಳ ಹಣೆಬರಹ ನಿರ್ಧರಿಸಲಿರುವ 10 ಕೋಟಿ ಮತದಾರರು918 ಅಭ್ಯರ್ಥಿಗಳ ಹಣೆಬರಹ ನಿರ್ಧರಿಸಲಿರುವ 10 ಕೋಟಿ ಮತದಾರರು

ಗ್ರಾಮ ಪಂಚಾಯಿತಿ, ನಾಡ ಕಚೇರಿ, ತಾಲೂಕು ಕಚೇರಿ, ಜಿಲ್ಲಾ ಕಚೇರಿ, ಬಿಬಿಎಂಪಿ ಕಚೇರಿಗಳಲ್ಲಿ ಪರಿಷ್ಕೃತ ಮತಮದಾರರ ಪಟ್ಟಿ ಲಭ್ಯವಿದೆ. ಜನರು ಭೇಟಿ ನೀಡಿ ತಮ್ಮ ಕಾರ್ಡ್‌ ವಿವರಗಳನ್ನು ಪರಿಶೀಲಿಸಿಕೊಳ್ಳಬಹುದು.

ಚುನಾವಣಾ ಆಯೋಗದ ವೆಬ್ ಸೈಟ್ ಮೂಲಕವೂ ಜನರು ವಿವರಗಳನ್ನು ನೋಡಬಹುದಾಗಿದೆ.

English summary
Election commission released draft of voters list on December 16, 2019, People can check the details on list and submit objections.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X