ಮೈತ್ರಿ ಸರ್ಕಾರಕ್ಕೆ ಪರೀಕ್ಷೆ : ಡಿಸೆಂಬರ್‌ನಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆ
ಬೆಂಗಳೂರು, ನವೆಂಬರ್ 27 : ರಾಜ್ಯ ಚುನಾವಣಾ ಆಯೋಗ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಿದ್ಧತೆ ನಡೆಸುತ್ತಿದೆ. 101 ಸ್ಥಳೀಯ ಸಂಸ್ಥೆಗಳ ಅವಧಿ 2019ರ ಮಾರ್ಚ್ ತನಕ ಇದೆ.
ರಾಜ್ಯದ 6 ಮಹಾನಗರ ಪಾಲಿಕೆ, 28 ನಗರಸಭೆ, 41 ಪುರಸಭೆ ಮತ್ತು 26 ಪಟ್ಟಣ ಪಂಚಾಯಿತಿಗಳಿಗೆ ಚುನಾವಣೆ ನಡೆಯಬೇಕಿದೆ. ಡಿಸೆಂಬರ್ 15ರೊಳಗೆ ಸಹಾಯಕ ಚುನಾವಣಾಧಿಕಾರಿಗಳ ಹೆಸರು ಅಂತಿಮಗೊಳಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಜಿಲ್ಲಾಧಿಕಾರಿಗಳು ವರದಿಯನ್ನು ಸಲ್ಲಿಸಿದ ಬಳಿಕ ಚುನಾವಣಾ ಆಯೋಗ ಯಾವಾಗ ಚುನಾವಣೆ ನಡೆಸಬೇಕು? ಎಂದು ಅಂತಿಮ ತೀರ್ಮಾನವನ್ನು ತೆಗೆದುಕೊಳ್ಳಲಿದೆ. ಡಿಸೆಂಬರ್ ಅಂತ್ಯದ ವೇಳೆಗೆ ಚುನಾವಣಾ ವೇಳಾಪಟ್ಟಿ ಪ್ರಕಟವಾಗುವ ಸಾಧ್ಯತೆ ಇದೆ.

ಚುನಾವಣಾ ಆಯೋಗ ಮೊದಲ ಹಂತದಲ್ಲಿ 108 ಸ್ಥಳೀಯ ಸಂಸ್ಥೆಗಳಿಗೆ ಆಗಸ್ಟ್ 31ರಂದು ಚುನಾವಣೆಯನ್ನು ನಡೆಸಿತ್ತು. ಮೈಸೂರು, ಶಿವಮೊಗ್ಗ ಮತ್ತು ತುಮಕೂರು ಮಹಾನಗರ ಪಾಲಿಕೆಗಳಿಗೆ ಚುನಾವಣೆ ನಡೆದಿತ್ತು. ಸೆಪ್ಟೆಂಬರ್ 4ರಂದು ಚುನಾವಣಾ ಫಲಿತಾಂಶ ಪ್ರಕಟವಾಗಿತ್ತು.
ಯಾವ ಪಾಲಿಕೆಗಳಿಗೆ ಚುನಾವಣೆ? : ಬಳ್ಳಾರಿ, ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ-ಧಾರವಾಡ, ಕಲಬುರಗಿ, ಮಂಗಳೂರು, ವಿಜಯಪುರ ಮಹಾನಗರ ಪಾಲಿಕೆಗಳಿಗೆ ಚುನಾವಣೆ ನಡೆಯಬೇಕಿದೆ.












Click it and Unblock the Notifications