Lok Sabha Election 2024: ಮತದಾರರನ್ನು ಆಕರ್ಷಿಸಲು ಚುನಾವಣಾ ಆಯೋಗದ ವಿಭಿನ್ನ ಪ್ರಯತ್ನ
ಬೆಂಗಳೂರು, ಏಪ್ರಿಲ್. 20: ಚುನಾವಣೆಗೆ ರಾಜಕೀಯ ಪಕ್ಷಗಳು ಸಿದ್ಧವಾಗುವುದಕ್ಕಿಂತ ಹೆಚ್ಚಾಗಿ ನಮ್ಮ ಚುನಾವಣಾ ಆಯೋಗ ಹಲವು ರೀತಿಯಲ್ಲಿ ಸಿದ್ಧವಾಗುತ್ತದೆ. ಮತ ಚಲಾಯಿಸಲು ನಿರಾಸಕ್ತಿ ತೋರಿಸಲುವ ಮತದಾರರನ್ನು ಜನರನ್ನು ಮತಗಟ್ಟೆಗಳಿಗೆ ಕರೆತರಲು ಸಾಕಷ್ಟು ಕಷ್ಟ ಪಡುತ್ತಿದೆ. ಇದೇ ನಿಟ್ಟಿನಲ್ಲಿ ಚುನಾವಣಾ ಆಯೋಗ "ನಮ್ಮ ನಡೆ ಮತಗಟ್ಟೆ ಕಡೆಗೆ" ಜಾಗೃತಿ ಅಭಿಯಾನ ಹಮ್ಮಿಕೊಂಡಿದೆ.
ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ಮತದಾನವು ಎರಡು ಹಂತಗಳಲ್ಲಿ ನಡೆಯಲಿದೆ ದಿನಾಂಕ 26.04.2024 ಹಾಗೂ 07.05.2024 ಗಳಂದು ನಡೆಯಲಿದೆ. ಈ ಸಂಬಂಧ ಮತದಾರರಲ್ಲಿ ಜಾಗೃತಿ ಮೂಡಿಸಲು ಅಗತ್ಯ ಪ್ರಚಾರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಪ್ರಜಾಪ್ರಭುತ್ವದ ಹಬ್ಬವನ್ನು ಆಚರಿಸಲು ಭಾರತ ಚುನಾವಣಾ ಆಯೋಗ ಸೂಚಿಸಿದೆ.

ಮತದಾರರಿಗೆ ಜಾಗೃತಿ ಮೂಡಿಸುವ ಸಲುವಾಗಿ, "ನಮ್ಮ ನಡೆ ಮತಗಟ್ಟೆ ಕಡೆಗೆ" ಎಂಬ ಕಾರ್ಯಕ್ರಮವನ್ನು ರಾಜ್ಯದ ಎಲ್ಲಾ ಮತಗಟ್ಟೆಗಳಲ್ಲಿ ರಾಷ್ಟ್ರೀಯ ಹಬ್ಬದ ಮಾದರಿಯಲ್ಲಿ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ. ಮೊದಲ ಹಂತದ ಚುನಾವಣೆ ನಡೆಯುವ ಲೋಕಸಭಾ ಕ್ಷೇತ್ರಗಳಿಗೆ ದಿನಾಂಕ: 21.04.2024 ಹಾಗೂ ಎರಡನೇ ಹಂತದ ಚುನಾವಣೆ ನಡೆಯುವ ಲೋಕಸಭಾ ಕ್ಷೇತ್ರಗಳಿಗೆ ದಿನಾಂಕ: 28.04.2024 ರಂದು ಚುನಾವಣಾ ಧ್ವಜಾರೋಹಣ ಕಾರ್ಯಕ್ರಮವನ್ನು ಬೆಳಗ್ಗೆ 08:00 ಗಂಟೆಗೆ ರಾಜ್ಯಾದ್ಯಂತ ಹಮ್ಮಿಕೊಳ್ಳಲು ಯೋಜನೆ ರೂಪಿಸಿದೆ.
ಮತಗಟ್ಟೆಗಳಲ್ಲಿ ಕನಿಷ್ಟ ಮೂಲಭೂತ ಸೌಲಭ್ಯಗಳು ಇರುವ ಕುರಿತು ಖಚಿತಪಡಿಸಿಕೊಂಡು, ಪ್ರಾಥಮಿಕವಾಗಿ ಮತಗಟ್ಟೆ ಹಂತದಲ್ಲಿ ಮತಗಟ್ಟೆ ಮಟ್ಟದ ಅಧಿಕಾರಿಗಳ ನೇತೃತ್ವದಲ್ಲಿ, ಗ್ರಾಮ ಪಂಚಾಯತ್ ಮಟ್ಟದಲ್ಲಿ ಪಿಡಿಓ ನೇತೃತ್ವದಲ್ಲಿ, ತಾಲ್ಲೂಕು ಮಟ್ಟದಲ್ಲಿ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳ ನೇತೃತ್ವದಲ್ಲಿ ಹಾಗೂ ಅದೇ ರೀತಿ ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಚುನಾವಣಾಧಿಕಾರಿಗಳ ನೇತೃತ್ವದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಬೇಕಿದೆ.

ಕಾರ್ಯಕ್ರಮದಲ್ಲಿ ಇರಬೇಕಾದ ಅಂಶಗಳ ವಿವರ
1. ರಾಜ್ಯ ಮಟ್ಟದಲ್ಲಿ ಒಂದೇ ರೀತಿಯ "ಮತದಾನದ ದಿನ - ಏಪ್ರಿಲ್ 26 (ಮೊದಲನೇ ಹಂತದ ಕ್ಷೇತ್ರಗಳಿಗೆ) ಮತ್ತು ಮೇ 07 (ಎರಡನೇ ಹಂತದ ಕ್ಷೇತ್ರಗಳಿಗೆ)" ಹಾಗೂ ಸಮಯ ಬೆಳಗ್ಗೆ 07:00 ರಿಂದ ಸಂಜೆ 06:00 ರವರೆಗೆ ಎಂದು ಒಳಗೊಂಡಿರುವ ಧ್ವಜದ ವಿನ್ಯಾಸವನ್ನು ಸಿದ್ದಪಡಿಸಿ ನೀಡಲಾಗುವುದು. ಈ ವಿನ್ಯಾಸವನ್ನು ತಮ್ಮ ಹಂತದಲ್ಲಿ ಬಟ್ಟೆಯ ಮೇಲೆ ಮುದ್ರಿಸಿ, ಪ್ರತಿ ಮತಗಟ್ಟೆಯ ಮೇಲೆ ಧ್ವಜಾರೋಹಣವನ್ನು ನೆರವೇರಿಸಬೇಕು ಹಾಗೂ ಮತದಾನದ ದಿನದವರೆಗೆ ಧ್ವಜವನ್ನು ಮತಗಟ್ಟೆ ಕೇಂದ್ರಗಳಲ್ಲಿ ಹಾರಿಸಬೇಕು.
2. ರಾಷ್ಟ್ರೀಯ ಹಬ್ಬದ ಮಾದರಿಯಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಬೇಕು. ಮತದಾರರನ್ನು ಸೆಳೆಯಲು ಸ್ಥಳೀಯ ಜಾನಪದ ಅಥವಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬಹುದು.
3. ಕಾಲ್ನಡಿಗೆ, ಜಾಥಾ ಸೇರಿದಂತೆ ಚುನಾವಣಾ ವಿಷಯನ್ನೊಳಗೊಂಡ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬಹುದಾಗಿದೆ.
4. ಕಾರ್ಯಕ್ರಮದಲ್ಲಿ ಯಾವುದೇ ರಾಜಕೀಯ ಪ್ರೇರಿತ ಅಥವಾ ಸಂಬಂಧಿತ ವ್ಯಕ್ತಿಗಳು ಭಾಗವಹಿಸುವುದಕ್ಕೆ ಅವಕಾಶ ನೀಡಬಾರದು.
5. ಪ್ರತಿ ಮತಗಟ್ಟೆಗಳಲ್ಲಿ ಹಮ್ಮಿಕೊಂಡ ಕಾರ್ಯಕ್ರಮದ ಛಾಯಾಚಿತ್ರ/ವಿಡಿಯೋಗಳನ್ನು ಮುಖ್ಯ ಚುನಾವಣಾಧಿಕಾರಿಗಳ ಸಾಮಾಜಿಕ ಜಾಲತಾಣಗಳಿಗೆ ಟ್ಯಾಗ್ ಮಾಡಬೇಕು ಹಾಗೂ ಹಂಚಿಕೊಳ್ಳಬೇಕು. (https://www.facebook.com/ceokarnataka https://instagram.com/ceokarnataka https://twitter.com/ceo karnataka)
6. ಕನಿಷ್ಠ ಒಂದು ಗಂಟೆಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು. ಒಟ್ಟಾರೆ ಪ್ರತಿ ಮತಗಟ್ಟೆಯನ್ನು ಪರಿಚಯಿಸುವುದು ಈ ಕಾರ್ಯಕ್ರಮದ ಮೂಲ ಉದ್ದೇಶವಾಗಿದೆ.
7. ಕಾರ್ಯಕ್ರಮದಲ್ಲಿ ಮುಖ್ಯವಾಗಿ ಭಾರತ ಚುನಾವಣಾ ಆಯೋಗದ "ನಾ ಭಾರತ" ಗೀತೆಯನ್ನು ಬಳಸಬಹುದಾಗಿದೆ.
8. ಮುಖ್ಯವಾಗಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಹಿರಿಯ ಅಧಿಕಾರಿಗಳು ಉಸ್ತುವಾರಿಯನ್ನು ವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವುದು.
ಇತರೆ ಅಗತ್ಯ ಪ್ರಚಾರ ಕಾರ್ಯಕ್ರಮಗಳು
1. ನೈತಿಕ ಚುನಾವಣೆಯ ಕುರಿತು ಮತದಾರರಿಗೆ ಭಿತ್ತಿಚಿತ್ರಗಳ ವಿತರಣೆ
2. ಎಲ್.ಇ.ಡಿ ವಾಹನಗಳ ಮೂಲಕ ಜಾಗೃತಿ
3. ಮತದಾನದ ಮಹತ್ವ ಕುರಿತು ಬೀದಿ ನಾಟಕ, ಜಾನಪದ ಕಲೆಗಳ ಮೂಲಕ ಮತದಾರರ ಜಾಗೃತಿ.
4. ಸೈಕಲ್, ದ್ವಿಚಕ್ರ ವಾಹನ ಮತ್ತು ಕಾಲ್ನಡಿಗೆ ಜಾಥಾ ಹಮ್ಮಿಕೊಳ್ಳುವುದು.
5. ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿರುವುದನ್ನು ಖಚಿತಪಡಿಸಿಕೊಳ್ಳುವ ಕುರಿತು ಮಾಹಿತಿ.
6. ಭಾರತ ಚುನಾವಣಾ ಆಯೋಗವು ನೈತಿಕ ಚುನಾವಣೆ ನಡೆಸುವ ಸಂಬಂಧ ಮತದಾರರಿಗಾಗಿ ಹೊರ ತಂದಿರುವ ಸಿ-ವಿಜಿಲ್, ಕೆವೈಸಿ, ಸಕ್ಷಮ್ ಆ್ಯಪ್‌ಗಳು ಸೇರಿದಂತೆ ಮತದಾರರ ಸಹಾಯವಾಣಿ 1950 ಬಗ್ಗೆ ಪ್ರಚಾರಪಡಿಸಬೇಕು.
7. ನಿಮ್ಮ ಮತಗಟ್ಟೆ ಎಲ್ಲಿದೆ ಎಂದು ತಿಳಿದುಕೊಳ್ಳಿ ಮತ್ತು ಏಪ್ರಿಲ್ 26 (ಮೊದಲ ಹಂತದ ಕ್ಷೇತ್ರಗಳಿಗೆ) ಮತ್ತು ಮೇ 07 (ಎರಡನೇ ಹಂತದ ಕ್ಷೇತ್ರಗಳಿಗೆ) ರಂದು ತಪ್ಪದೇ ಮತದಾನ ಮಾಡಿ ಎನ್ನುವುದು ಮುಖ್ಯ ಉದ್ದೇಶವಾಗಿರಬೇಕು.
-
ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ: 23 ಚಿನ್ನದ ಪದಕ ಗೆದ್ದು ಸಮಗ್ರ ಚಾಂಪಿಯನ್ ಪಟ್ಟ ಅಲಂಕರಿಸಿದ ಕರ್ನಾಟಕ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ












Click it and Unblock the Notifications