ಆಂಬ್ಯುಲೆನ್ಸ್, ಪೊಲೀಸ್ ವಾಹನಗಳಲ್ಲೂ ಆಯೋಗದಿಂದ ತಪಾಸಣೆ
ಬೆಂಗಳೂರು, ಏಪ್ರಿಲ್ 15 : ಚುನಾವಣಾ ಪ್ರಕ್ರಿಯೆಗಳಲ್ಲಿ ಮತ್ತಷ್ಟು ಪಾರದರ್ಶಕತೆ ತರಲು ಆಂಬ್ಯುಲೆನ್ಸ್ ಹಾಗೂ ಪೊಲೀಸ್ ವಾಹನಗಳ ಒಳಗೊಂಡಂತೆ ಎಲ್ಲಾ ಸರ್ಕಾರಿ ವಾಹನಗಳನ್ನೂ ತಪಾಸಣೆಗೊಳಪಡಿಸಲು ಸೂಚನೆ ನೀಡಲಾಗಿದೆ.
ಬೆಂಗಳೂರು ನಗರದ 3 ಲೋಕಸಭಾ ಕ್ಷೇತ್ರಗಳಿಗೆ ಮಾದರಿ ನೀತಿ ಸಂಹಿತೆ ಜಾರಿಗೆ ನಿಯೋಜಿತರಾಗಿರುವ ಭೂ ಕಂದಾಯ ಮತ್ತು ಭೂಮಾಪನಾ ಇಲಾಖೆಯ ಆಯುಕ್ತ ಮುನೀಶ್ ಮೌದ್ಗೀಲ್ ಅವರು ಈ ಕುರಿತು ಮಾಹಿತಿ ನೀಡಿದರು.
'ಚುನಾವಣಾ ಸಂದರ್ಭದಲ್ಲಿ ವಿಶೇಷ ವಾಹನಗಳಲ್ಲಿ ಹಣ ಸಾಗಣೆ ಮಾಡಲಾಗುತ್ತದೆ ಎಂಬ ಅನಗತ್ಯ ಆರೋಪಗಳಿಗೆ ಅವಕಾಶ ನೀಡದಿರಲು ಹಾಗೂ ಚುನಾವಣಾ ಪ್ರಕ್ರಿಯೆಗಳಲ್ಲಿ ಮತ್ತಷ್ಟು ಪಾರದರ್ಶಕತೆ ತರಲು ಸರ್ಕಾರಿ ವಾಹನಗಳನ್ನೂ ತಪಾಸಣೆ ಮಾಡಲಾಗುತ್ತದೆ' ಎಂದರು.

ಅಭ್ಯರ್ಥಿಗಳು ಹಾಗೂ ಅಭ್ಯರ್ಥಿಗಳ ಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದ ಅವರು, 'ಎಲ್ಲಾ ರೀತಿಯ ಅಕ್ರಮಗಳನ್ನು ತಡೆಯಲು ಮುಂದಿನ ಮೂರು ದಿನಗಳಲ್ಲಿ ದಿನದ 24 ಗಂಟೆಯೂ ನಿಗಾ ಇಡಲಾಗುವುದು' ಎಂದು ಹೇಳಿದರು.
ಚುನಾವಣಾ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿ ಮತ್ತು ಸಿಬ್ಬಂದಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸಹ ಸೂಚನೆ ನೀಡಲಾಗಿದೆ. ಸಚುನಾವಣಾ ಪಾವಿತ್ರ್ಯತೆಗೆ ಧಕ್ಕೆ ಬರುವ ಯಾವುದೇ ಕ್ರಮವನ್ನು ಸಹಿಸಲಾಗುವುದಿಲ್ಲ ಆಯೋಗ ಹೇಳಿದೆ.












Click it and Unblock the Notifications