DK Shivakumar: ಸ್ಥಳೀಯ ಸಂಸ್ಥೆ ಚುನಾವಣೆ: ಮೀಸಲಾತಿ ನಿಗದಿ ಬಗ್ಗೆ ಡಿ ಕೆ ಶಿವಕುಮಾರ್‌ ಹೇಳಿದ್ದೇನು?

ಬೆಂಗಳೂರು: ನಾವು ಸ್ಥಳೀಯ ಸಂಸ್ಥೆ ಚುನಾವಣೆ ಮಾಡುತ್ತೇವೆ. ನಾಳೆ ಅಥವಾ ನಾಡಿದ್ದು ಈ ಚುನಾವಣೆಗಳ ಮೀಸಲಾತಿ ವಿಚಾರವಾಗಿ ನ್ಯಾಯಾಲಯದಲ್ಲಿ ವಿಚಾರಣೆ ಇದೆ. ನಾವು ಪಂಚಾಯ್ತಿ ನಾಯಕರಿಗೆ ಸಿದ್ಥತೆ ಮಾಡಿಕೊಳ್ಳಲು ಹೇಳಿದ್ದೇವೆ. ರಾಜ್ಯ ಚುನಾವಣಾ ಆಯೋಗ ಕೂಡ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಮತಪತ್ರ ಬಳಸಲು ತೀರ್ಮಾನಿಸಿದ್ದಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಹೇಳಿದರು. ಸಮಯ ನಿಗದಿಯಾಗಬೇಕು ಅಷ್ಟೇ. ಸಂವಿಧಾನದ 73 ಹಾಗೂ 74ನೇ ತಿದ್ದುಪಡಿ ರಕ್ಷಣೆಗೆ ಪಂಚಾಯ್ತಿ, ಪಾಲಿಕೆಗಳ ಚುನಾವಣೆ ಮಾಡಲು ತೀರ್ಮಾನಿಸಿದ್ದೇವೆ ಎಂದರು.

ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಡಿಸಿಎಂ ಡಿ ಕೆ ಶಿವಕುಮಾರ್ ಅವರು, ಕಾಂಗ್ರೆಸ್ ಕಾರ್ಯಕರ್ತರು ಸಿಎಂ ಆಗಬೇಕು ಎಂದು ಕೂಗುತ್ತಿದ್ದಾರೆ. ಈಗ ಆ ವಿಚಾರ ಚರ್ಚೆ ಬೇಡ, ಕಾಲವೇ ಉತ್ತರ ನೀಡಲಿದೆ ಎಂದು ಹೇಳಿದ್ದೇನೆ. ನಮಗೆ ಪಕ್ಷ ಯಾವ ಜವಾಬ್ದಾರಿ ನೀಡಿದೆಯೋ ನಾನು ಆ ಕೆಲಸ ಮಾಡಿಕೊಂಡು ಹೋಗುತ್ತಿದ್ದೇನೆ ಎಂದು ಹೇಳಿದರು. ನಾವು ನಮ್ಮ ಕಾರ್ಯಕರ್ತರು ಶ್ರಮಿಸಿದ ಕಾರಣಕ್ಕೆ ಈ ಸರ್ಕಾರ ಅಧಿಕಾರಕ್ಕೆ ಬಂದಿದೆ. ಕಾರ್ಯಕರ್ತರೇ ನಮ್ಮ ಆಧಾರಸ್ತಂಭ ಎಂದು ತಿಳಿಸಿದರು.

DK Shivakumar

ಮನರೇಗಾ ವಿಚಾರದ ಹೋರಾಟ ಮುಂದುವರಿಯುವುದೇ ಎಂಬ ಪ್ರಶ್ನೆಗೆ ಉತ್ತರಿಸಿ, ಕೇಂದ್ರ ಬಿಜೆಪಿ ಸರ್ಕಾರ ವಿಬಿ ಗ್ರಾಮ್ ಜಿ ನೂತನ ಕಾಯ್ದೆ ಮೂಲಕ ಮಹಾತ್ಮ ಗಾಂಧಿ ಹಾಗೂ ಕಾರ್ಮಿಕರ ಬದುಕನ್ನು ಸಾಯಿಸುತ್ತಿದೆ. ಖಂಡಿತವಾಗಿ ಮನರೇಗಾ ವಿಚಾರದಲ್ಲಿ ನಮ್ಮ ಹೋರಾಟ ಮುಂದುವರಿಯಲಿದೆ. ರೈತರ ವಿಚಾರದಲ್ಲಿ ಕಾಯ್ದೆಗಳನ್ನು ಯಾವ ರೀತಿ ಹಿಂಪಡೆದರೋ ಅದೇ ರೀತಿ ಇದನ್ನು ಹಿಂಪಡೆಯಬೇಕು. 6-7 ಸಾವಿರ ಕೋಟಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರುತ್ತಿತ್ತು. ಕಾರ್ಮಿಕರಿಗೆ ಉದ್ಯೋಗದ ಹಕ್ಕು ನೀಡಲಾಗಿತ್ತು, ಪಂಚಾಯ್ತಿ ಸದಸ್ಯರೇ ತಮ್ಮ ವ್ಯಾಪ್ತಿಯಲ್ಲಿ ಯಾವ ಕೆಲಸ ಆಗಬೇಕು ಎಂದು ತೀರ್ಮಾನ ಮಾಡುತ್ತಿದ್ದರು.

ರೈತರು ತಮ್ಮ ಸ್ವಂತ ಜಮೀನಿನಲ್ಲಿ ಕೆಲಸ ಮಾಡಿದರೆ ಅವರಿಗೆ ವೇತನ ನೀಡುವ ಅವಕಾಶ ಕಲ್ಪಿಸಲಾಗಿತ್ತು. ಆಶ್ರಯ ಮನೆ, ಜಮೀನು ಮಟ್ಟ ಮಾಡುವ, ಇಂಗುಗುಂಡಿ ನಿರ್ಮಾಣಕ್ಕೆ ಕೂಲಿ ನೀಡಲಾಗುತ್ತಿತ್ತು. ಈ ಹಕ್ಕುಗಳನ್ನು ಕಸಿದು, ಇನ್ನು ಮುಂದೆ ದೆಹಲಿಯಿಂದ ಯಾವ ಕೆಲಸ ಆಗಬೇಕು ಎಂದು ತೀರ್ಮಾನಿಸಲಾಗುವುದು. ಮನರೇಗಾ ಯೋಜನೆ ಮೂಲಕ ನನ್ನ ಕ್ಷೇತ್ರದಲ್ಲಿ 54 ಸಾವಿರಕ್ಕೂ ಹೆಚ್ಚು ದನದ ಕೊಟ್ಟಿಗೆ ಕಟ್ಟಿಸಿದ್ದೇನೆ. ಒಂದೇ ವರ್ಷ 250 ಕೋಟಿ ವೆಚ್ಚ ಮಾಡಲಾಗಿದೆ.

ನೂರಾರು ಚೆಕ್ ಡ್ಯಾಂ ನಿರ್ಮಿಸಲಾಗಿದೆ. ನಾನು ಹಣ ಹೊಡೆದಿದ್ದೇನೆ ಎಂಬ ಅನುಮಾನದ ಮೇಲೆ ಕೇಂದ್ರ ಸರ್ಕಾರ ದೆಹಲಿಯಿಂದ ತಂಡ ಕಳುಸಿಹಿ ತನಿಖೆ ಮಾಡಿಸಿತ್ತು. ನಂತರ ಈಶ್ವರಪ್ಪನವರೇ ಶಿಫಾರಸ್ಸು ಮಾಡಿ ನಮ್ಮ ತಾಲ್ಲೂಕು ಪಂಚಾಯ್ತಿ ಅಧ್ಯಕ್ಷರನ್ನು ದೆಹಲಿಗೆ ಕರೆಸಿ ಈ ಯೋಜನೆ ಪರಿಣಾಮಕಾರಿಯಾಗಿ ಜಾರಿಗೆ ತಂದ ಕ್ಷೇತ್ರ ಎಂದು ಪ್ರಶಸ್ತಿ ನೀಡಿದರು ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಅವರು ಹೇಳಿದರು.

ಹೊಸ ಕಾಯ್ದೆಯಿಂದ ಕಾರ್ಮಿಕರಿಗೆ ಸಂಕಷ್ಟ ಎದುರಾಗಲಿದ್ದು, ರಾಜ್ಯ ಸರ್ಕಾರ ಕಾರ್ಮಿಕರಿಗೆ ಯಾವ ಭರವಸೆ ನೀಡಲಿದೆ ಎಂದು ಕೇಳಿದಾಗ, ನಾವು ಈ ಬಗ್ಗೆ ಚರ್ಚೆ ಮಾಡುತ್ತೇವೆ. ಈ ಯೋಜನೆಗೆ ರಾಜ್ಯ ಸರ್ಕಾರ ಅನುದಾನ ನೀಡಲು ಆಗುವುದಿಲ್ಲ, ಕೇಂದ್ರ ಸರ್ಕಾರವೇ ಭರಿಸಬೇಕು. ಈ ಕಾಯ್ದೆ ಅನುಸಾರ ಯಾವ ಮಾರ್ಗಸೂಚನೆ ನೀಡುತ್ತಾರೆ ಕಾದು ನೋಡಬೇಕು ಎಂದು ತಿಳಿಸಿದರು.

ರಾಜ್ಯದ ತೆರಿಗೆ ಹಣವನ್ನು ಜಾಹೀರಾತಿನ ಮೂಲಕ ದುಂದುವೆಚ್ಚ ಮಾಡಲಾಗುತ್ತಿದೆ ಎಂಬ ಬಿಜೆಪಿ ಆರೋಪದ ಬಗ್ಗೆ ಮಾತನಾಡಿ, ಜಾಹೀರಾತು ನೀಡಿರುವುದರಲ್ಲಿ ತಪ್ಪೇನಿದೆ? ಮನರೇಗಾ ಯೋಜನೆ ಹೇಗೆ ಪ್ರಯೋಜನವಾಗುತ್ತಿತ್ತು, ಈಗ ನೂತನ ಕಾಯ್ದೆಯಿಂದ ಆಗುವ ಅನಾನುಕೂಲಗಳ ಬಗ್ಗೆ ನಮ್ಮದೇ ಆದ ಶೈಲಿಯಲ್ಲಿ ಜನರಿಗೆ ತಿಳಿಸುತ್ತೇವೆ. ನಾನು ರಂಗೋಲಿ ಸ್ಪರ್ಧೆಯನ್ನು ವೀಕ್ಷಣೆ ಮಾಡುವಾಗ ಗಣೇಶ ಚಿತ್ರದ ಮೇಲೆ ಸಾಗಿದೆ ಎಂದು ಬಿಜೆಪಿ ದಳದವರು ಟ್ರೋಲ್ ಮಾಡುತ್ತಿದ್ದಾರೆ. ಆ ಟ್ರೋಲ್ ಮಾಡಲು ಅವರದ್ದೂ ಒಂದೆರಡು ರೂಪಾಯಿ ಖರ್ಚಾಗಿರುತ್ತದೆಯಲ್ಲವೇ? ಒಬ್ಬೊಬ್ಬರು ಒಂದೊಂದು ವಿಚಾರದಲ್ಲಿ ಪ್ರಚಾರ ಮಾಡುತ್ತಾರೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+