ಶಾಂತಿ ನಗರ ಕಾಂಗ್ರೆಸ್ ಶಾಸಕ ಹ್ಯಾರೀಸ್‌ಗೆ ಹಿನ್ನಡೆ

ಬೆಂಗಳೂರು, ಫೆಬ್ರವರಿ 23: ಚುನಾವಣಾ ತಕರಾರು ಅರ್ಜಿ ಸಂಬಂಧ ಬೆಂಗಳೂರು ನಗರದ ಶಾಂತಿನಗರದ ಕಾಂಗ್ರೆಸ್ ಶಾಸಕ ಎನ್. ಎ. ಹ್ಯಾರಿಸ್‌ಗೆ ಹಿನ್ನಡೆಯಾಗಿದೆ. ಈ ಪ್ರಕರಣ ಕುತೂಹಲ ಮೂಡಿಸಿದೆ.

ಆಯ್ಕೆ ಅನೂರ್ಜಿತವೆಂದು ಘೋಷಿಸಿ ತಮ್ಮನ್ನು ಶಾಸಕರನ್ನಾಗಿ ಪ್ರಕಟಿಸುವಂತೆ ಕೋರಿ ಪರಾಜಿತ ಅಭ್ಯರ್ಥಿ ಕೆ. ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ವಜಾಗೊಳಿಸುವಂತೆ ಹ್ಯಾರಿಸ್ ಸಲ್ಲಿಸಿದ್ದ ಮಧ್ಯಂತರ ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿದೆ. ಹಾಗಾಗಿ ಇದೀಗ ಹ್ಯಾರಿಸ್ ವಿಚಾರಣೆಯನ್ನು ಎದುರಿಸಲೇಬೇಕಾಗಿದೆ.

Election Dispute Set Back For MLA Haris Court Dismissed His IA

ಕೆ. ಶಿವಕುಮಾರ್ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜು ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ. ಹೈಕೋರ್ಟ್‌ನ ಈ ಆದೇಶದಿಂದಾಗಿ ಶಿವಕುಮಾರ್ ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿಯ ವಿಚಾರಣೆ ಮುಂದುವರೆಯಲಿದೆ.

ಅಲ್ಲದೇ, ಚುನಾವಣಾ ತಕರಾರು ಅರ್ಜಿಯಲ್ಲಿ ಪ್ರತಿವಾದಿಯಾಗಿರುವ ಹ್ಯಾರಿಸ್ ಆಯ್ಕೆ ಅನೂರ್ಜಿತಗೊಳಿಸಬೇಕು ಮತ್ತು ತಮ್ಮನ್ನೇ ಶಾಸಕರು ಎಂದು ಘೋಷಣೆ ಮಾಡಬೇಕು ಕೋರಿದ್ದಾರೆ. ಆದರೆ, ಹ್ಯಾರಿಸ್ ಅವರ ಆಯ್ಕೆ ಅನೂರ್ಜಿತ ಎಂದು ಘೋಷಿಸುವವರೆಗೂ ಪ್ರಕರಣ ವಿಚಾರಣೆ ಮುಂದುವರೆಯಬೇಕು. ಆದ್ದರಿಂದ ಚುನಾವಣಾ ತಕರಾರು ಅರ್ಜಿಯನ್ನು ರದ್ದುಪಡಿಸಲು ಸಾಧ್ಯವಿಲ್ಲ ಎಂದು ಪೀಠ ತಿಳಿಸಿದೆ.

ಒಂದು ವೇಳೆ ಹ್ಯಾರಿಸ್‌ ಅವರ ಆಯ್ಕೆ ಅನೂರ್ಜಿತ ಎಂದು ಘೋಷಣೆ ಮಾಡಿದರೂ, ಅದೇ ಕಾರಣದಿಂದ ಅರ್ಜಿದಾರರು ಆಯ್ಕೆಯಾಗಿದ್ದಾರೆ ಎಂಬುದಾಗಿ ಘೋಷಣೆ ಮಾಡುವುದಕ್ಕೆ ಸಾಧ್ಯವಾಗುವುದಿಲ್ಲ. ಅರ್ಜಿದಾರರ ಮನಿವಿಗೆ ಸಂಬಂಧಿಸಿದ ಆಧಾರಗಳನ್ನು ಬೇಕಾಗಿದ್ದು, ಮಧ್ಯಂತರ ಅರ್ಜಿ ವಜಾಗೊಳಿಸುತ್ತಿರುವುದಾಗಿ ನ್ಯಾಯಪೀಠ ತಿಳಿಸಿದೆ.

ಪ್ರಕರಣದ ಹಿನ್ನೆಲೆ: ಬೆಂಗಳೂರಿನ ಶಾಂತಿ ನಗರ ಕ್ಷೇತ್ರದಿಂದ ಆಯ್ಕೆಯಾಗಿರುವ ಕಾಂಗ್ರೆಸ್‌ನ ಎನ್. ಎ. ಹ್ಯಾರಿಸ್ ಅವರು ಚುನಾವಣೆಗೆ ಸಲ್ಲಿಸಿದ್ದ ಪ್ರಮಾಣ ಪತ್ರ ಅಸಮರ್ಪಕವಾಗಿದೆ. ಆದ್ದರಿಂದ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು.

ಜತೆಗೆ ತಮ್ಮನ್ನು ಶಾಂತಿನಗರ ಕ್ಷೇತ್ರದ ಶಾಸಕ ಎಂಬುದಾಗಿ ಘೋಷಣೆ ಮಾಡುವಂತೆ ಕೋರಿ ಬಿಜೆಪಿಯ ಪರಾಜಿತ ಬಿಜೆಪಿ ಅಭ್ಯರ್ಥಿ ಕೆ. ಶಿವಕುಮಾರ್ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಜಾಗೊಳಿಸಬೇಕು ಎಂದು ಹ್ಯಾರಿಸ್ ಮಧ್ಯಂತರ ಮನವಿ ಮಾಡಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+