KPCC President Election : ಇಂದು ಕೆಪಿಸಿಸಿ ಅಧ್ಯಕ್ಷ ಚುನಾವಣೆ, ಡಿಕೆಶಿ ಮರು ಆಯ್ಕೆ?
ಬೆಂಗಳೂರು, ಸೆಪ್ಟೆಂಬರ್ 16: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ಮತದಾನ ನಡೆಯಲಿದೆ. ಹಾಲಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಮತ್ತೊಮ್ಮೆ ಅಧ್ಯಕ್ಷರಾಗುವುದು ಬಹುತೇಕ ಖಚಿತವಾಗಿದೆ.
ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ಶುಕ್ರವಾರ ಕೆಪಿಸಿಸಿ ಅಧ್ಯಕ್ಷರ ಆಯ್ಕೆಗೆ ಆಂತರಿಕ ಚುನಾವಣೆ ನಡೆಯಲಿದೆ. 479 ಮಂದಿ ಮತದಾರರು ಮತದಾನ ಮಾಡುವ ಹಕ್ಕು ಹೊಂದಿದ್ದಾರೆ. ಮತದಾನ ನಡೆಯದೇ ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆ ಇದೆ.

ಕಾಂಗ್ರೆಸ್ ಸದಸ್ಯತ್ವ ಸಮಿತಿಯ ಉಸ್ತುವಾರಿಯಾಗಿರುವ ಸುದರ್ಶನ್ ನಾಚಿಯಪ್ಪನ್ ನೇತೃತ್ವದಲ್ಲಿ ಚುನಾವಣೆ ನಡೆಯಲಿದೆ. ಡಿ. ಕೆ. ಶಿವಕುಮಾರ್ ಅಧ್ಯಕ್ಷರಾಗಿ ಮತ್ತೆ ಆಯ್ಕೆ ಆಗುವುದು ಬಹುತೇಕ ಖಚಿತ.
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ಶಾಸಕರು, ವಿಧಾನ ಪರಿಷತ್ ಸದಸ್ಯರು, ಕೆಪಿಸಿಸಿ ಸದಸ್ಯರು, ವಿವಿಧ ಘಟಕಗಳ ಅಧ್ಯಕ್ಷರು ಸೇರಿದಂತೆ 479 ಮಂದಿ ಮತದಾರರು ಮತದಾನ ಮಾಡಲಿದ್ದಾರೆ.
ಹಾಲಿ ಅಧ್ಯಕ್ಷರಾಗಿರುವ ಡಿ. ಕೆ. ಶಿವಕುಮಾರ್ ಮತ್ತೆ ಅಧ್ಯಕ್ಷರಾಗುವುದು ಖಚಿತವಾಗಿದೆ. ಎಐಸಿಸಿ ಈ ಕುರಿತು ನೀಡುವ ಸಂದೇಶದ ಅನುಸಾರ ಒಂದೇ ಸಾಲಿನಲ್ಲಿ ನಿರ್ಣಯ ತೆಗೆದುಕೊಂಡು ಡಿ. ಕೆ. ಶಿವಕುಮಾರ್ ಅವರನ್ನು ಅಧ್ಯಕ್ಷರನ್ನಾಗಿ ಮುಂದುವರೆಸಲಾಗುತ್ತದೆ ಎಂಬ ಮಾಹಿತಿ ಇದೆ.
ಡಿ. ಕೆ. ಶಿವಕುಮಾರ್ ಅಧ್ಯಕ್ಷರಾಗಿ ಎರಡು ವರ್ಷ ಪೂರ್ಣಗೊಂಡ ಹಿನ್ನಲೆಯಲ್ಲಿ ಮತ್ತೆ ಚುನಾವಣೆ ನಡೆಯುತ್ತಿದೆ. ಆದರೆ ಕಾಂಗ್ರೆಸ್ ರಾಜ್ಯದಲ್ಲಿ ಚುನಾವಣೆ ಮುಂದಿಟ್ಟುಕೊಂಡು ಅಧ್ಯಕ್ಷರ ಬದಲಾವಣೆ ಮಾಡುವ ಸಾಧ್ಯತೆ ಕಡಿಮೆ.
ನೂತನ ಕೆಪಿಸಿಸಿ ಪದಾಧಿಕಾರಿಗಳು ಆಯ್ಕೆಯಾದಾಗ ಸಂಪ್ರದಾಯದಂತೆ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಮಾಡಬೇಕಿದೆ. ಆದರೆ ಈಗ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೂ ಚುನಾವಣೆ ನಡೆಯುತ್ತಿರುವ ಕಾರಣ ಎಲ್ಲಾ ರಾಜ್ಯಗಳ ಅಧ್ಯಕ್ಷ ಸ್ಥಾನಗಳಿಗೆ ಚುನಾವಣೆ ಘೋಷಣೆ ಮಾಡಲಾಗಿದೆ.
ಪ್ರದೇಶ ಕಾಂಗ್ರೆಸ್‌ನಲ್ಲಿ ಮೂರು ವರ್ಷಗಳ ಅವಧಿ ಪೂರ್ಣವಾಗದವರನ್ನು ಅಧಿಕಾರದಲ್ಲಿ ಮುಂದುವರೆಸಲಾಗುತ್ತದೆ ಎಂಬ ಮಾಹಿತಿ ಇದೆ. ಕರ್ನಾಟಕದಲ್ಲಿ 2023ರಲ್ಲಿ ಚುನಾವಣೆ ಇರುವ ಕಾರಣ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ನಡೆಯುವುದಿಲ್ಲ.
ಈ ಹಿಂದೆ ದಿನೇಶ್ ಗುಂಡೂರಾವ್ ಬಳಿಕ ಡಿ. ಕೆ. ಶಿವಕುಮಾರ್ ಅಧ್ಯಕ್ಷರಾಗಿದ್ದರು. ಈಗ ಕೆಪಿಸಿಸಿಗೆ ಹೊಸ ಪದಾಧಿಕಾರಿಗಳು ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಅಧ್ಯಕ್ಷ ಚುನಾವಣಾ ಪ್ರಕ್ರಿಯೆ ನಡೆಯುತ್ತಿದೆ. ಆದರೆ ಚುನಾವಣೆಗೆ ಕೆಲವೇ ತಿಂಗಳು ಇರುವ ಕಾರಣ ಅಧ್ಯಕ್ಷರ ಬದಲಾವಣೆ ಆಗುವ ಸಾಧ್ಯತೆ ಕಡಿಮೆ ಇದೆ.












Click it and Unblock the Notifications