BY Vijayendra: ವಿರೋಧ ಪಕ್ಷದ ನಾಯಕನ ಆಯ್ಕೆ ಕುರಿತು ಬಿ ವೈ ವಿಜಯೇಂದ್ರ ಮಹತ್ವದ ಹೇಳಿಕೆ

ಬೆಂಗಳೂರು, ನವೆಂಬರ್‌ 11: ಬಿಜೆಪಿ ಕರ್ನಾಟಕ ರಾಜ್ಯಾಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಅವರ ಪುತ್ರ ಹಾಗೂ ಶಿಕಾರಿಪುರ ಶಾಸಕರಾದ ಬಿ ವೈ ವಿಜಯೇಂದ್ರ ಅವರನ್ನು ಶುಕ್ರವಾರ ಬಿಜೆಪಿ ಹೈಕಮಾಂಡ್‌ ಆಯ್ಕೆ ಮಾಡಿದ್ದು, ರಾಜ್ಯ ಬಿಜೆಪಿಗೆ ಹೊಸ ಸಾರಥಿ ಸಿಕ್ಕಂತಾಗಿದೆ.

ನೂತನ ರಾಜ್ಯಾಧ್ಯಕ್ಷ ಆಯ್ಕೆ ಹಾಗೂ ವಿಪಕ್ಷ ನಾಯಕನ ಆಯ್ಕೆ ಬಿಜೆಪಿ ಹೈಕಮಾಂಡ್‌ ಗೆ ಲೋಕಸಭಾ ಚುನಾವಣೆ ಹಿನ್ನಲೆ ದೊಡ್ಡ ಸವಾಲಾಗಿತ್ತು. ಇದೀಗ ನೂತನ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ ವೈ ವಿಜಯೇಂದ್ರ ಅವರಿಗೆ ಹೈಕಮಾಂಡ್‌ ಆಯ್ಕೆ ಮಾಡಿದ್ದು, ಇದೀಗ ವಿರೋಧ ಪಕ್ಷದ ನಾಯಕನ ಯಾವಾಗ ಎನ್ನುವ ಪ್ರಶ್ನೆ ಉದ್ಭವಿಸಿದೆ.

Election Of Leader Of Opposition Next Friday Says BY Vijayendra

ಹೌದು, ಈ ಕುರಿತು ನೂತನ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಮಾಧ್ಯಮಗಳ ಜೊತೆಗೆ ಮಾತನಾಡಿದ್ದು, ಮುಂದಿನ ಶುಕ್ರವಾರ ಶಾಸಕಾಂಗ ಸಭೆ ನಡೆಯಲಿದ್ದು, ಈ ವೇಳೆ ವಿಪಕ್ಷ ನಾಯಕನ ಆಯ್ಕೆ ನಡೆಯಲಿದೆ ಎಂದು ಹೇಳಿದ್ದಾರೆ. ಶಾಸಕಾಂಗ ಸಭೆಯ ವೇಳೆ ಶಾಸಕರ ಅಭಿಪ್ರಾಯ ಪಡೆದು ವಿಪಕ್ಷ ನಾಯಕನ ಆಯ್ಕೆ ಮಾಡಲಾಗುವುದು. ಈ ಕುರಿತು ಮಾಜಿ ಮುಖ್ಯಮಂತ್ರಿಗಳಾದ ಬಿ ಎಸ್‌ ಯಡಿಯೂರಪ್ಪ ಅವರು ನಡ್ಡಾ ಜೊತೆ ಚರ್ಚೆ ಮಾಡಿದ್ದಾರೆ ಎಂದು ಹೇಳಿದರು.

ಇನ್ನೂ ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪನ ಮಗ ಎನ್ನುವ ಕಾರಣಕ್ಕೆ ನನಗೆ ಈ ಪೋಸ್ಟ್ ಕೊಟ್ಟಿಲ್ಲ. ಯಡಿಯೂರಪ್ಪ ಮಗ ಎನ್ನುವ ಹೆಮ್ಮೆ ಇದೆ. ಪಕ್ಷ ಬೀಡುವ ಯೋಚನೆಯಲ್ಲಿ ಇರೋರನ್ನು ಒಟ್ಟಿಗೆ ತಗೊಂಡು ಹೋಗುತ್ತೇನೆ. ದೆಹಲಿಯಿಂದ ವೀಕ್ಷಕರು ಬರಲಿದ್ದಾರೆ. ಹಿರಿಯ ನಾಯಕರಾದ ವಿ. ಸೋಮಣ್ಣ ಅಶೋಕ್, ಬಸವನಗೌಡ ಪಾಟೀಲ್‌ ಯತ್ನಾಳ್, ಬಸವರಾಜ್ ಬೊಮ್ಮಾಯಿ ಎಲ್ಲಾರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತೇನೆ ಎಂದು ವಿಜಯೇಂದ್ರ ಅವರು ಹೇಳಿದರು.

ಇನ್ನೂ ಈ ಕುರಿತು ಟ್ವೀಟ್‌ ಮಾಡಿರುವ ಬಿ ವೈ ವಿಜಯೇಂದ್ರ, ಅಚಲ ವಿಶ್ವಾಸವಿಟ್ಟು ಪಕ್ಷ ಸಂಘಟನೆಯ ಬಹುದೊಡ್ಡ ಜವಾಬ್ದಾರಿ ವಹಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ, ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ, ಗೃಹ ಸಚಿವ ಅಮಿತ್ ಶಾ ಅವರಿಗೆ ಹಾಗೂ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಬಿಎಲ್ ಸಂತೋಷ್ ಅವರುಗಳಿಗೆ ತುಂಬು ಹೃದಯದ ಕೃತಜ್ಞತೆಗಳನ್ನು ಅರ್ಪಿಸಿದ್ದಾರೆ.

ಸಂಘದ ಹಾಗೂ ಪಕ್ಷದ ಹಿರಿಯರ ಮಾರ್ಗದರ್ಶನದಲ್ಲಿ ಸರ್ವರ ನಿರೀಕ್ಷೆ ಹಾಗೂ ಜನರ ಅಪೇಕ್ಷೆಗೆ ಪೂರಕವಾಗಿ ರಾಜ್ಯದಲ್ಲಿ ಭಾರತೀಯ ಜನತಾ ಪಾರ್ಟಿಗೆ ಹೊಸ ಚೈತನ್ಯ ತುಂಬಲು ಕಾರ್ಯಕರ್ತರೊಂದಿಗೆ ಕಾರ್ಯಕರ್ತನಾಗಿ ಅಹರ್ನಿಶಿ ದುಡಿಯುವ ಸಂಕಲ್ಪ ತೊಟ್ಟಿರುವೆ. ನಾಡಿನ ಜನರ ಆಶೀರ್ವಾದವೇ ನನಗೆ ಶ್ರೀರಕ್ಷೆ ಎಂದು ವಿಜಯೇಂದ್ರ ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+