ಬಿಜೆಪಿ ಹೊಸ ರಾಜ್ಯಾಧ್ಯಕ್ಷರ ಆಯ್ಕೆ: ಮಹತ್ವದ ಅಪ್ಡೇಟ್ಸ್ ಕೊಟ್ಟ ಕೇಂದ್ರ ಸಚಿವ ಪ್ರಹ್ಲಾದ ಜೋಶಿ
ಕರ್ನಾಟಕದಲ್ಲಿ ಕಳೆದ ಒಂದು ವರ್ಷಕ್ಕೂ ಹೆಚ್ಚು ಅವಧಿಯಿಂದ ಚರ್ಚೆ ಆಗುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಚಾರ ಇದೀಗ ಕೊನೆಗೂ ಮುಕ್ತಾಯವಾಗುವ ಹಂತಕ್ಕೆ ಬಂದಿದೆ. ಕರ್ನಾಟಕಕ್ಕೆ ಹೊಸ ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ ಆಗುವ ಬಗ್ಗೆ ಹಾಗೂ ಆಯ್ಕೆಯ ವಿಚಾರವಾಗಿ ಇದೀಗ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಮಾತನಾಡಿದ್ದಾರೆ. ಈ ಮೂಲಕ ಹೊಸ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯ ಬಗ್ಗೆ ಅವರು ಸುಳಿವು ನೀಡಿದ್ದಾರೆ. ಕಳೆದ ಒಂದು ವರ್ಷಕ್ಕೂ ಹೆಚ್ಚು ಅವಧಿಯಿಂದ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಯ ಬಗ್ಗೆ ಭಾರೀ ಚರ್ಚೆ ಹಾಗೂ ರಾಜಕೀಯ ಸಂಘರ್ಷವೂ ನಡೆದಿತ್ತು.
ಕರ್ನಾಟಕ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ವರಿಷ್ಠರು ಯಾರನ್ನು ಆಯ್ಕೆ ಮಾಡಬಹುದು ಎನ್ನುವ ಬಗ್ಗೆ ಚರ್ಚೆ ನಡೆಯುತ್ತಲ್ಲೇ ಇದೆ. ಈ ಬಗ್ಗೆ ಯಾವುದೇ ಸ್ಪಷ್ಟ ನಿರ್ಧಾರ ಇಲ್ಲಿಯ ವರೆಗೆ ಆಗಿಲ್ಲ. ಈ ರೀತಿ ಇರುವಾಗಲೇ ಬಿಜೆಪಿಯಲ್ಲಿ ಎರಡು ಬಣಗಳು ಸೃಷ್ಟಿಯಾಗಿವೆ. ಇದೇ ಕಾರಣಕ್ಕೆ ಕೆಲವರು ಬಿಜೆಪಿ ತೊರೆದಿರುವುದು ಸಹ ಇದೆ. ಕೆಲವು ಬಿಜೆಪಿಯ ಪ್ರಭಾವಿ ನಾಯಕರು ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಮಾಡಬೇಕು. ಬಿ.ವೈ ವಿಜಯೇಂದ್ರ ಅವರು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ. ಸರ್ಕಾರದ ಪರ ಮೃದು ಧೋರಣೆ ಅನುಸರಿಸುತ್ತಿದ್ದಾರೆ ಎನ್ನುವ ಗಂಭೀರ ಆರೋಪಗಳು ಬಿಜೆಪಿಯ ಹಾಲಿ ಹಾಗೂ ಮಾಜಿ ನಾಯಕರಿಂದ ಕೇಳಿ ಬಂದಿತ್ತು.

ಇಷ್ಟೆಲ್ಲಾ ಆರೋಪಗಳು ಹಾಗೂ ಚರ್ಚೆಯ ನಡುವೆಯೂ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಯ ವಿಚಾರದಲ್ಲಿ ಮಹತ್ವದ ಬದಲಾವಣೆ ಆಗಿಲ್ಲ. ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಆಗಿಲ್ಲ. ಕೆಲವು ಭಿನ್ನಮತೀಯ ನಾಯಕರು ಈಗಾಗಲೇ ಈ ವಿಚಾರವಾಗಿ ಬಿಜೆಪಿ ವರಿಷ್ಠರನ್ನು ಭೇಟಿ ಚರ್ಚೆಯನ್ನೂ ಮಾಡಿದ್ದಾರೆ. ಇದೇ ಸಂದರ್ಭದಲ್ಲಿ ಕೆಲವರು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ ವಿಜಯೇಂದ್ರ ಅವರೇ ಮುಂದುವರಿಯಬೇಕು ಎಂದು ಒತ್ತಾಯಿಸುತ್ತಿರುವುದೂ ಇದೆ. ಇದೀಗ ಈ ವಿಚಾರವಾಗಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಮಹತ್ವದ ಮಾಹಿತಿಯೊಂದನ್ನು ಹಂಚಿಕೊಂಡಿದ್ದಾರೆ.
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೊಸ ಅಪ್ಡೇಟ್ ಕೊಟ್ಟಿದ್ದಾರೆ. ರಾಜ್ಯ ಬಿಜೆಪಿ ಘಟಕಕ್ಕೆ ಅವಿರೋಧವಾಗಿಯೇ ಅಧ್ಯಕ್ಷರ ಆಯ್ಕೆ ಆಗಲಿದೆ ಎಂದಿದ್ದಾರೆ. ವಿ.ಸೋಮಣ್ಣ ಅಥವಾ ಬಿ.ವೈ.ವಿಜಯೇಂದ್ರ ಸೇರಿದಂತೆ ಯಾರೇ ರಾಜ್ಯಾಧ್ಯಕ್ಷರಾದರೂ ಆಗಲಿ. ರಾಜ್ಯ ಬಿಜೆಪಿ ಘಟಕಕ್ಕೆ ಅವಿರೋಧವಾಗಿ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ದೇಶದ ಎಲ್ಲಾ ರಾಜ್ಯಗಳಲ್ಲೂ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದು, ಕರ್ನಾಟಕದಲ್ಲೂ ಅಧ್ಯಕ್ಷರ ಆಯ್ಕೆ ನಡೆಯಲಿದೆ ಎಂದು ಅವರು ಹೇಳಿದ್ದಾರೆ.
ವಿ.ಸೋಮಣ್ಣ ರಾಜ್ಯ ಬಿಜೆಪಿ ಅಧ್ಯಕ್ಷರಾಗಲಿದ್ದಾರೆಯೇ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಅವರು, ವಿ.ಸೋಮಣ್ಣ ಏನು ಹೇಳಿದ್ದಾರೆ ಎನ್ನುವ ವಿಚಾರದ ಬಗ್ಗೆ ನನಗೆ ಗೊತ್ತಿಲ್ಲ. ನಮ್ಮ ರಾಷ್ಟ್ರೀಯ ನಾಯಕರು ಈ ವಿಷಯದಲ್ಲಿ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಈ ಬಾರಿ ನಾಮಿನೇಟ್ ಪ್ರಕ್ರಿಯೆ ಇರುವುದಿಲ್ಲ. ಅವಿರೋಧವಾಗಿ ಆಯ್ಕೆ ಆಗಲಿದ್ದಾರೆ ಎಂದು ಹೇಳಿದ್ದು. ಈ ಬಾರಿ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಗೆ ಯಾವುದೇ ಚುನಾವಣೆ ಇರುವುದಿಲ್ಲ ಎನ್ನುವುದನ್ನು ಪರೋಕ್ಷವಾಗಿ ಹೇಳಿದ್ದಾರೆ.












Click it and Unblock the Notifications