• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಶೀಘ್ರದಲ್ಲೇ ಎದುರಾಗಲಿದೆ 4 ಸ್ಥಾನಗಳಿಗೆ ಚುನಾವಣೆ

|
   ಶೀಘ್ರದಲ್ಲೇ ಚುನಾವಣಾ ದಿನಾಂಕ ಘೋಷಣೆ | Oneindia Kannada

   ಬೆಂಗಳೂರು, ಜನವರಿ 22 : ಕರ್ನಾಟಕದಲ್ಲಿ ಮತ್ತೊಂದು ಚುನಾವಣೆ ಎದುರಾಗಲಿದೆ. ಜೂನ್‌ನಲ್ಲಿ ನಾಲ್ಕು ವಿಧಾನ ಪರಿಷತ್ ಸದಸ್ಯ ಸ್ಥಾನಗಳು ತೆರವಾಗಲಿದ್ದು, ಶೀಘ್ರದಲ್ಲಿಯೇ ಚುನಾವಣೆಯ ದಿನಾಂಕ ಘೋಷಣೆ ಮಾಡಲಾಗುತ್ತದೆ.

   ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಈ ಕುರಿತು ಮಾಹಿತಿ ನೀಡಿದರು. "ಶೀಘ್ರದಲ್ಲಿಯೇ ಚುನಾವಣೆ ಘೋಷಣೆಯಾಗಲಿದೆ. ಮತದಾರರ ನೋಂದಣಿಗೆ ಇನ್ನೂ ಕಾಲಾವಕಾಶವಿದೆ. ಪಟ್ಟಿಗೆ ಹೆಸರು ಸೇರಿಸದವರು ಹೆಸರು ಸೇರಿಸಬಹುದು" ಎಂದರು.

   ಜನವರಿಯಲ್ಲಿ ವಿಧಾನ ಮಂಡಲ ಜಂಟಿ ಅಧಿವೇಶನ: ರಾಜ್ಯಪಾಲರಿಂದ ಭಾಷಣ

   ಆಗ್ನೇಯ ಮತ್ತು ಪಶ್ಚಿಮ ಪದವೀಧರ ಕ್ಷೇತ್ರ, ಈಶಾನ್ಯ ಮತ್ತು ಬೆಂಗಳೂರು ಶಿಕ್ಷಕರ ಕ್ಷೇತ್ರದ ಸದಸ್ಯರ ಅವಧಿ ಜೂನ್ 30ಕ್ಕೆ ಮುಕ್ತಾಯಗೊಳ್ಳಲಿದೆ. ಅಷ್ಟರಲ್ಲಿ ಚುನಾವಣೆ ನಡೆದು ಹೊಸ ಸದಸ್ಯರ ಆಯ್ಕೆಯಾಗಬೇಕಿದೆ.

   ದೆಹಲಿ ಚುನಾವಣೆ; ಕೇಜ್ರಿವಾಲ್ ವಿರುದ್ಧ ಕಣಕ್ಕಿಳಿದ ಕನ್ನಡಿಗ

   ನಾಲ್ಕು ಕ್ಷೇತ್ರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಈಗಾಗಲೇ ಪೂರ್ಣಗೊಂಡಿದೆ. ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಅವಕಾಶವಿದೆ ಎಂದು ಚುನಾವಣಾಧಿಕಾರಿಗಳು ಹೇಳಿದ್ದಾರೆ.

   5 ಉಪ ಮುಖ್ಯಮಂತ್ರಿ ಆಯ್ತು, ಆಂಧ್ರದಲ್ಲಿ ಇನ್ನು 3 ರಾಜಧಾನಿ?

   ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ 68,049, ಆಗ್ನೇಯ ಪದವೀಧರ ಕ್ಷೇತ್ರದಲ್ಲಿ 10,287 ಮತದಾರರು ನೋಂದಣಿ ಮಾಡಿಕೊಂಡಿದ್ದಾರೆ. ಈಶಾನ್ಯ ಶಿಕ್ಷಕ್ಷರ ಕ್ಷೇತ್ರದಲ್ಲಿ 24, 941 ಮತ್ತು ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ 17,610 ಮತದಾರರು ನೋಂದಣಿ ಮಾಡಿಕೊಂಡಿದ್ದಾರೆ.

   ಜೆಡಿಎಸ್ ಪಟ್ಟಿ : ನಾಲ್ಕು ಕ್ಷೇತ್ರಗಳಿಗೆ ಜೆಡಿಎಸ್ ಈಗಾಗಲೇ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಆರ್. ಚೌಡರೆಡ್ಡಿ ತೂಪಲ್ಲಿ ಮತ್ತು ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಶಿವಶಂಕರ ಕಲ್ಲೂರ. ಈಶಾನ್ಯ ಶಿಕ್ಷಕರ ಕ್ಷೇತ್ರಕ್ಕೆ ತಿಮ್ಮಯ್ಯ ಪುರ್ಲೆ, ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಎ. ಪಿ. ರಂಗನಾಥ್ ಅಭ್ಯರ್ಥಿಯಾಗಿದ್ದಾರೆ.

   ಪ್ರಸ್ತುತ ಬೆಂಗಳೂರು ಶಿಕ್ಷಕರ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಜೆಡಿಎಸ್‌ನ ಪುಟ್ಟಣ್ಣ ಬಿಜೆಪಿ ಸೇರುವುದಾಗಿ ಘೋಷಣೆ ಮಾಡಿದ್ದು, ಅವರೇ ಅಭ್ಯರ್ಥಿಯಾಗುವ ಸಾಧ್ಯತೆ ಇದೆ.

   English summary
   Election Commission will announce notification for the 4 legislative council seat election. 4 seat will vacant on June 30, 2020.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X