ಪ್ರತಾಪ್ ಸಿಂಹ ಪರ ಪ್ರಚಾರ ಆರಂಭಿಸಿದ ರಾಮದಾಸ್

ಬೆಂಗಳೂರು, ಮಾ.27 : ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಕಾರ್ಯ ಮುಕ್ತಾಯವಾಗಿದ್ದು, ಎಲ್ಲಾ ಪಕ್ಷಗಳು ಪ್ರಚಾರದತ್ತ ಗಮನಹರಿಸಿವೆ. ಗುರುವಾರ ಮಾಜಿ ಸಚಿವ ಎಸ್.ಎ.ರಾಮದಾಸ್ ಮೈಸೂರಿನಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ ಪರವಾಗಿ ಮತ ಯಾಚಿಸಿದರು. ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಎಸ್.ಎಂ.ಕೃಷ್ಣ ಅವರನ್ನು ಭೇಟಿ ಮಾಡಿ ಪ್ರಚಾರದ ಕುರಿತು ಚರ್ಚೆ ನಡೆಸಿದರು.

11 ಗಂಟೆ : ಎಸ್.ಎಂ.ಕೃಷ್ಣ ಭೇಟಿ : ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಪಕ್ಷದ ಹಿರಿಯ ನಾಯಕ ಎಸ್.ಎಂ.ಕೃಷ್ಣ ಅವರನ್ನು ಸದಾಶಿವನಗರದ ಅವರ ನಿವಾಸದಲ್ಲಿ ಭೇಟಿ ಮಾಡಿ ಚುನಾವಣಾ ಪ್ರಚಾರದ ಕಾರ್ಯತಂತ್ರದ ಕುರಿತು ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೃಷ್ಣ 28 ಕ್ಷೇತ್ರಗಳಲ್ಲಿಯೂ ತಾವು ಪ್ರಚಾರ ನಡೆಸುವುದಾಗಿ ಹೇಳಿದರು.

S.A. Ramdas

10 ಗಂಟೆ : ಕೊಲ್ಲೂರಿನಲ್ಲಿ ವಿಶೇಷ ಪೂಜೆ : ಶಿವಮೊಗ್ಗ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್, ಗುರುವಾರ ಕೊಲ್ಲೂರು ಮೂಕಾಬಿಂಕಾ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಅಲ್ಲಿಂದ ಅವರು ಬೈಂದೂರಿಗೆ ತೆರಳಿ ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳಲಿದ್ದಾರೆ. ತಾಯಿ ಅನಾರೋಗ್ಯ ಹಿನ್ನಲೆಯಲ್ಲಿ ತಾವು ಚುನಾವಣೆಗೆ ಸ್ಪರ್ಧಿಸುತ್ತಿದ್ದು, ನನಗೆ ಚುನಾವಣೆಗೆ ಸ್ಪರ್ಧಿಸುವಂತೆ ಯಾರೂ ಒತ್ತಡ ಹಾಕಿಲ್ಲ ಎಂದು ಈ ಸಂದರ್ಭದಲ್ಲಿ ಗೀತಾ ಶಿವರಾಜ್ ಕುಮಾರ್ ಹೇಳಿದರು. [ಮೋದಿ ಮಾತನ್ನು ಕನ್ನಡದಲ್ಲಿ ಕೇಳಿ]

ಸಮಯ 9 ಗಂಟೆ : ಪ್ರಚಾರಕ್ಕೆ ಬಂದ್ರು ರಾಮದಾಸ್ : ಪ್ರೇಮಕುಮಾರಿ ತಮ್ಮ ಮೇಲೆ ಮಾಡಿದ ಆರೋಪಗಳಿಂದ ಮನವೊಂದು ಆತ್ಮಹತ್ಯೆಗೆ ಯತ್ನಿಸಿದ್ದ ಮಾಜಿ ಸಚಿವ ಎಸ್.ಎ.ರಾಮದಾದ್ ಮೈಸೂರಿನಲ್ಲಿ ಇಂದು ಪ್ರಚಾರ ಕಾರ್ಯ ಕೈಗೊಂಡಿದ್ದಾರೆ. ಗುರುವಾರ ಬೆಳಗ್ಗೆ ಮೈಸೂರಿನ ಮಾರುಕಟ್ಟೆಗಳಲ್ಲಿ ಪಕ್ಷದ ಅಭ್ಯರ್ಥಿ ಪ್ರತಾಪ್ ಸಿಂಹ ಪರವಾಗಿ ಮತಯಾಚನೆ ಮಾಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+