ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆ

By Mahesh
|
Google Oneindia Kannada News

Recommended Video

ಹಾಸನ ಡಿ ಸಿ ರೋಹಿಣಿ ಸಿಂಧೂರಿಯವರನ್ನ ಮೈಸೂರಿಗೆ ವರ್ಗಾವಣೆ | Oneindia Kannada

ಹಾಸನ. ಮಾರ್ಚ್ 03: ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೇರಿದಂತೆ 10 ಜಿಲ್ಲೆಗಳ ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.

ಐಎಎಸ್ ಅಧಿಕಾರಿಗಳ ವರ್ಗಾವಣೆಗೆ ಚುನಾವಣಾ ಆಯೋಗ ಅನುಮತಿ ನೀಡುತ್ತಿದ್ದಂತೆ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಲಿದೆ. ಈ ಹಿಂದೆ ಮಹಾ ಮಸ್ತಕಾಭಿಷೇಕಕ್ಕೂ ಮುನ್ನ ರೋಹಿಣಿ ಸಿಂಧೂರಿ ಸೇರಿದಂತೆ ಅಧಿಕಾರಗಳ ವರ್ಗಾವಣೆಗೆ ಚುನಾವಣಾ ಆಯೋಗ ತಡೆಯಾಜ್ಞೆ ನೀಡಿತ್ತು.

ರೋಹಿಣಿ ಸೇರಿ 6 ಅಧಿಕಾರಿಗಳ ವರ್ಗಾವಣೆಗೆ ತಡೆ ನೀಡಿದ ಚುನಾವಣಾ ಆಯೋಗರೋಹಿಣಿ ಸೇರಿ 6 ಅಧಿಕಾರಿಗಳ ವರ್ಗಾವಣೆಗೆ ತಡೆ ನೀಡಿದ ಚುನಾವಣಾ ಆಯೋಗ

ಚುನಾವಣಾ ಆಯೋಗದ ಸೂಚನೆ ಮೇರೆಗೆ ತಡೆ ಹಿಡಿಯಲಾಗಿದ್ದ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೇರಿದಂತೆ 10 ಜಿಲ್ಲಾಧಿಕಾರಿಗಳ ವರ್ಗಾವಣೆಯಾಗಿದೆ.

Hassan DC Rohini Sindhuri transferred to Mysuru

ಸರ್ಕಾರದ ವಿರೋಧ ಕಟ್ಟಿಕೊಂಡು ವರ್ಗಾವಣೆಯಾಗಿ ನಂತರ ಚುನಾವಣಾ ಆಯೋಗದ ಸೂಚನೆ ಮೇರೆಗೆ ತಡೆ ಹಿಡಿಯಲಾಗಿದ್ದ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೇರಿದಂತೆ 10 ಜಿಲ್ಲಾಧಿಕಾರಿಗಳ ವರ್ಗಾವಣೆಯಾಗಿದೆ.

ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಯನ್ನು ಮೈಸೂರು ಜಿಲ್ಲಾಧಿಕಾರಿಯಾಗಿ ವರ್ಗಾಯಿಸಲಾಗಿದ್ದು, ಮೈಸೂರು ಜಿಲ್ಲಾಧಿಕಾರಿ ರಣದೀಪ್ ಅವರನ್ನು ಹಾಸನ ಜಿಲ್ಲಾಧಿಕಾರಿಯಾಗಿ ವರ್ಗಾಯಿಸಲಾಗಿದೆ. ಚುನಾವಣಾ ಆಯೋಗದ ಒಪ್ಪಿಗೆ ದೊರೆತ ನಂತರ ಸರ್ಕಾರ ಅಧಿಕೃತ ವರ್ಗಾವಣೆ ಆದೇಶ ಹೊರಡಿಸಲಿದೆ.

ರೋಹಿಣಿ ಸಿಂಧೂರಿ ವರ್ಗಾವಣೆ, ಸರ್ಕಾರಕ್ಕೆ ದೇವೇಗೌಡರ ಪ್ರಶ್ನೆರೋಹಿಣಿ ಸಿಂಧೂರಿ ವರ್ಗಾವಣೆ, ಸರ್ಕಾರಕ್ಕೆ ದೇವೇಗೌಡರ ಪ್ರಶ್ನೆ

English summary
Siddaramaiah led Congress government reportedly transferred Hassan deputy commissioner Rohini Dasari Sinduri to Mysuru ahead of Assembly Elections 2018. Official order will be issued after getting approval from Election commission.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X